Monday, April 8, 2024

ನ.27ರಂದು ‘ದಿ ನ್ಯೂಸ್ ಹಬ್ ಡಾಟ್ ಇನ್’ ಲೋಕಾರ್ಪಣೆ

ಬಂಟ್ವಾಳ, ನ.25: ‘ದಿ ನ್ಯೂಸ್ ಹಬ್ ಡಾಟ್ ಇನ್ ವೆಬ್ ಸೈಟ್ ಲೋಕಾರ್ಪಣಾ ಕಾರ್ಯಕ್ರಮ ನ. 27ರಂದು ಬೆಳಗ್ಗೆ 10 ಗಂಟೆಗೆ ಬಿ.ಸಿ.ರೋಡ್ ಸಮೀಪದ ಕೈಕಂಬ ಸುಲ್ತಾನ್ ಕಾಂಪ್ಲೆಕ್ಸ್ ನಲ್ಲಿರುವ ಕಚೇರಿಯಲ್ಲಿ ನಡೆಯಲಿದೆ.

ಇರ್ಷಾದ್ ದಾರಿಮಿ ಅಲ್ ಜಝರಿ ಮಿತ್ತಬೈಲ್ ದುಅ ನೆರವೇರಿಸಲಿದ್ದು, ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ವೆಬ್ ಸೈಟ್ ಲೋಕಾರ್ಪಣೆಗೊಳಿಸಲಿದ್ದಾರೆ.

ಅತಿಥಿಗಳಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು, ಮಾಜಿ ಸಚಿವ ಬಿ.ರಮಾನಾಥ ರೈ, ಬಂಟ್ವಾಳ ನಗರ ಠಾಣೆಯ ನಿರೀಕ್ಷಕ ಅನಂತ ಪದ್ಮನಾಭ, ಎಸ್.ಡಿ.ಪಿ.ಐ. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮುನೀಶ್ ಅಲಿ, ಬಂಟ್ವಾಳ ಜಮೀಯ್ಯತುಲ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ, ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪೂಂಜಾಲಕಟ್ಟೆ, ಸುಲ್ತಾನ್ ಕಾಂಪ್ಲೆಕ್ಸ್ ಕೈಕಂಬ ಇದರ ಮಾಲಕ ಹಾಜಿ ಅಬ್ದುರ್ರಹ್ಮಾನ್ ಸುಲ್ತಾನ್ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

More from the blog

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...