Sunday, April 14, 2024

ನ.15: ಪಂಚಾಯತ್ ರಾಜ್ ಪ್ರತಿನಿಧಿಗಳ ಸಮಾವೇಶ

ವಿಟ್ಲ: ನವಂಬರ್ ೧೫ ರಂದು ಮಂಗಳೂರಿನಲ್ಲಿ ನಡೆಯಲಿರುವ ಪಂಚಾಯತ್ ರಾಜ್ ಪ್ರತಿನಿಧಿಗಳ ಸಮಾವೇಶಕ್ಕೆ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಿಂದ ಹೆಚ್ಚಿನ ಜನರು ಭಾಗವಹಿಸಲಿದ್ದು, ಮುಂದಿನ ಚುನಾವಣೆಗೆ ಇದು ಪೂರಕವಾದ ಕಾರ್ಯಕ್ರಮವಾಗಿದೆ ಎಂದು ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಾರಾಮ್ ಕೆ.ಬಿ ಅವರು ತಿಳಿಸಿದರು.

ಅವರು ವಿಟ್ಲದ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ದ.ಕ ಜಿಲ್ಲಾ ಪಂಚಾಯತ್ ರಾಜ್ ಸಂಘಟನೆ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು ಅವರ ಸಾರಥ್ಯದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಸಾವಿರಾರು ಜನರು ಸೇರುವ ನಿರೀಕ್ಷೆ ಇದೆ. ಕಾರ್ಯಕ್ರಮವನ್ನು ಪ್ರಿಯಾಂಕ್ ಖರ್ಗೆ ಅವರು ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಹಿತ ಹಲವು ನಾಯಕರು ಭಾಗವಹಿಸಲಿದ್ದಾರೆ. ಈ ಸಮಾವೇಶ ಮುಂದಿನ ಚುನಾವಣೆಗೆ ಮುನ್ನುಡಿ ಬರೆಯಲಿದ್ದು, ಪಕ್ಷ ಸಂಘಟನೆಗೆ ಇದು ಸಹಕಾರಿಯಾಗಲಿದೆ. ಗ್ರಾ.ಪಂ ಸದಸ್ಯರುಗಳು, ಮಾಜಿ ಸದಸ್ಯರುಗಳು, ಮೊದಲಾದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ ಎಸ್ ಮಹಮ್ಮದ್ ಮಾತನಾಡಿ ಪಂಚಾಯತ್ ರಾಜ್ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದೊಂದು ಮಹತ್ವದ ಕಾರ್ಯಕ್ರಮವಾಗಿದ್ದು, ಭವಿಷ್ಟ ಪಕ್ಷದ ಸಂಘಟನೆಗೆ ಇದು ಪೂರಕವಾಗಿರುವ ಸಮಾವೇಶವಾಗಿದೆ. ರಾಜೀವ ಗಾಂಧಿಯವರ ಕನಸು ಈ ಸಂಘಟನೆಗಳ ಮೂಲಕ ಯಶಸ್ವಿಯಾಗಿದೆ. ಗ್ರಾಮೀಣ ಭಾಗ ಅಭಿವೃದ್ಧಿ ಹೊಂದಲು ಪಂಚಾಯತ್ ರಾಜ್ ಸಂಘಟನೆ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಪ್ರಮುಖರಾದ ಪ್ರವೀಣ್ ಚಂದ್ರ ಆಳ್ವ, ಬಂಟ್ವಾಳ ತಾಲೂಕು ಕೃಷಿ ಸಮಿತಿಯ ರಮಾನಾಥ ವಿಟ್ಲ, ರಾಜೀವ ಗಾಂಧಿ ಪಂಚಾಯತ್‌ರಾಜ್ ಸಂಘಟನೆ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಸೈನಾರ್ ನೆಲ್ಲಿಗುಡ್ಡೆ, ವಿಟ್ಲ ಪಟ್ಟಣ ಪಂಚಾಯಿತಿ ಸದಸ್ಯ ವಿಕೆಎಂ ಅಶ್ರಪ್, ವಿಟ್ಲ ನಗರ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಶೆಟ್ಟಿ ಕೊಲ್ಯ, ಎಕೆಎಂ ಮೊಹಮ್ಮದ್, ರಶೀದ್ ವಿ.ಎ ಉಪಸ್ಥಿತರಿದ್ದರು.

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಕಲ್ಲಡ್ಕ: ಖಾಸಗಿ ಬಸ್ಸಿಗೆ ಪಿಕಪ್ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...

ವಿಟ್ಲ : ಮಹಿಳೆ ಆತ್ಮಹತ್ಯೆ

ವಿಟ್ಲ: ವಿಟ್ಲಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡು ನಿವಾಸಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿ.ರಾಮಣ್ಣ ನಾಯ್ಕ ಅವರ ಪತ್ನಿ ಸುಶೀಲಾ ಅವರು ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.