Tuesday, April 9, 2024

ವಿಟ್ಲ ಜೇಸಿ ಶಾಲೆ ವಿದ್ಯಾರ್ಥಿನಿ ಸಿಂಚನ ಬಿ. ಸಿ ಗೆ ಅಭಿನಂದನೆ 

ವಿಟ್ಲ: ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಿಭಾಗದಿಂದ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ SSLC ಪರೀಕ್ಷೆ 2022-23ರಲ್ಲಿ ದ. ಕ. ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಜೇಸಿ ಶಾಲೆಯ ವಿದ್ಯಾರ್ಥಿನಿ ಸಿಂಚನ ಬಿ .ಸಿ ಯವರು 1 ಲಕ್ಷ ರೂ.ವಿದ್ಯಾರ್ಥಿ ವೇತನಕ್ಕೆ ಭಾಜನರಾಗಿದ್ದು, ಆಕೆಯನ್ನು ಶಾಲೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಗೌರವಿಸಲಾಯಿತು.

ಸಂಸ್ಥೆಯ ಅಧ್ಯಕ್ಷರಾದ ಎಲ್.ಎನ್. ಕೂಡೂರುರವರು ಈ ಪುರಸ್ಕಾರವು ಇತರರಿಗೆ ಮಾದರಿಯಾಗಲಿ ಎನ್ನುತ್ತಾ ಆಡಳಿತ ಮಂಡಳಿ ಪರವಾಗಿ ಅಭಿನಂದಿಸಿದರು. ಹಿರಿಯ ಮತ್ತು ನಿವೃತ್ತ ಶಿಕ್ಷಕರಾದ ನಾರಾಯಣಗೌಡ, ಜೇಸಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಜಯರಾಮ ರೈ, ಆಡಳಿತ ಅಧಿಕಾರಿ ರಾಧಾಕೃಷ್ಣ ಎ , ಉಪ ಪ್ರಾಂಶುಪಾಲೆ ಜ್ಯೋತಿ ಶೆಣೈ, ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

More from the blog

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಕಲ್ಲಡ್ಕ: ಖಾಸಗಿ ಬಸ್ಸಿಗೆ ಪಿಕಪ್ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...

ವಿಟ್ಲ : ಮಹಿಳೆ ಆತ್ಮಹತ್ಯೆ

ವಿಟ್ಲ: ವಿಟ್ಲಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡು ನಿವಾಸಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿ.ರಾಮಣ್ಣ ನಾಯ್ಕ ಅವರ ಪತ್ನಿ ಸುಶೀಲಾ ಅವರು ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನೀರಿಗಾಗಿ ಪ್ರತಿಭಟನೆ 

ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ೩ನೇ ವಾರ್ಡ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, ಜನಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯಿತಿ ಯಾವುದೇ ಸ್ಪಂದನೆ ನೀಡುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಕೊಡ, ಬಕೆಟ್ ಹಿಡಿದು...