Sunday, April 14, 2024

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ 139ನೇ ವರ್ಷದ ಕಾಂಗ್ರೆಸ್ ಪಕ್ಷದ ಸಂಸ್ಥಾಪನ ದಿನಾಚರಣೆ

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯವರ ಆದೇಶದ ಮೇರೆಗೆ 139ನೇ ವರ್ಷದ ಕಾಂಗ್ರೆಸ್ ಪಕ್ಷದ ಸಂಸ್ಥಾಪನ ದಿನಾಚರಣೆಯನ್ನು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ರವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ಬಂಟ್ವಾಳ ಪುರಸಭಾ ಸದಸ್ಯರಾದ ಸನ್ಮಾನ್ಯ ಜನಾರ್ದನ ಚೆಂಡ್ತಿಮಾರ್ ರವರು ಧ್ವಜಾರೋಹಣ ಮಾಡುವ ಮುಖಾಂತರ ಕಾರ್ಯಕರ್ಮಕ್ಕೆ ಚಾಲನೆಯನ್ನು ಕೊಟ್ಟರು.

ಬೇಬಿ ಕುಂದರ್ ರವರು ಮಾತಾಡಿ ಭಾರತ ದೇಶ ವಿದೇಶಿಯರ ಕೈಯಲ್ಲಿ ಸಿಕ್ಕಿ ನರಳಾಡುತ್ತಿರುವ ಸಂದರ್ಭದಲ್ಲಿ ದೇಶದ ಕಾಂಗ್ರೆಸ್ ಪಕ್ಷದ ಅನೇಕ ಹಿರಿಯ ಮುಖಂಡರು ಸೇರಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಭಾರತ ದೇಶಕ್ಕೆ ಸ್ವಾತಂತ್ರ್ಯ ಸಿಗಲು ಅನೇಕ ಹೋರಾಟ ಚಳುವಳಿಯನ್ನು ನಡೆಸಿ 1947 ರಲ್ಲಿ ಸ್ವಾತಂತ್ಯ ಸಿಗುವಂತಾಯಿತು ಸ್ವಾತಂತ್ರ್ಯ ಸಿಕ್ಕಿದ ತಕ್ಷಣ ದೇಶದ ಪ್ರಜಾಪ್ರಭುತ್ವ ಉಳಿಯಬೇಕು ದಲಿತ,ಹಿಂದುಳಿದ,ಅಲ್ಪಸಂಖ್ಯಾತ ಮತ್ತು ಶೋಷಿತ ವರ್ಗಕ್ಕೆ ಶಕ್ತಿಯನ್ನು ನೀಡುವಂತಹ ಕಾರ್ಯಕ್ರಮವನ್ನು ಹಾಕಿ ಕಾಂಗ್ರೆಸ್ ಪಕ್ಷ ಕಳೆದ 138 ವರ್ಷಗಳ ಕಾಲ ಈ ದೇಶದಲ್ಲಿ ಬಲಿಷ್ಠವಾಗಿ ಮತ್ತು ಅತಿ ಹೆಚ್ಚು ಸದಸ್ಯತ್ವವನ್ನು ಹೊಂದಿದ ಪಕ್ಷ ಕಾಂಗ್ರೆಸ್ ಪಕ್ಷವಾಗಿದೆ ಮುಂದೆಯೂ ಈ ದೇಶದ ಭದ್ರತೆಗೋಸ್ಕರ ಈ ದೇಶದ ಭವಿಷ್ಯಗೋಸ್ಕರ ಖಂಡಿತವಾಗಿಯೂ ಹೋರಾಟ ಮಾಡಲು ಕಾಂಗ್ರೆಸ್ ಪಕ್ಷ ಸಿದ್ದವಾಗಿದೆ ಎಂಬ ಮಾತನ್ನು ಹೇಳಿದರು.

ಅದೇ ರೀತಿ ಜನಾರ್ದನ ಚೆಂಡ್ತೀಮಾರ್ ಮಾತನಾಡಿ ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ಹುಟ್ಟಿದಂತಹ ಕಾಂಗ್ರೆಸ್ ಪಕ್ಷ ಇವತ್ತು ಜಗತ್ತಿನಲ್ಲಿ ಅತಿ ಹೆಚ್ಚು ಸದಸ್ಯತ್ವವನ್ನು ಹೊಂದಿದೆ ಎಂದು ಹೇಳಿದರು.

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಮಹಾಬಲ ಬಂಗೇರ ಧನ್ಯವಾದವಿತ್ತರು.

ಈ ಸಂದರ್ಭದಲ್ಲಿ ಜಗನ್ನಾಥ ತುಂಬೆ, ಪ್ರವೀಣ್ ಕಿಣಿ,ವೆಂಕಪ್ಪ ಪೂಜಾರಿ,ಪದ್ಮನಾಭ ಬಡ್ಡಕಟ್ಟೆ , ವಿಜಯ ಅಲ್ಲಿಪಾದೆ,ರಾಜೀವ್ ಕಕ್ಕೆಪದವು, ಅಮ್ಮು ಅರ್ಬಿಗುಡ್ಡೆ, ರಿಯಾಜ್ ಕೆಳಗಿನಪೇಟೆ,ಚಿಕ್ಕ ಅರ್ಬಿಗುಡ್ಡೆ,ವಲಾರ್ ಬಡ್ಡಕಟ್ಟೆ,ನವಾಜ್ ಕೆಳಗಿನಪೇಟೆ,ಪುರುಷೋತ್ತಮ್ ಮಂಡಾಡಿ,ಆಶ್ರಿತ್ ಬಂಗೇರ ಪಂಜಿಕಲ್ಲು,ನಾಸೀರ್ ಕೆಳಗಿನಪೇಟೆ ಉಪಸ್ಥಿತರಿದ್ದರು.

More from the blog

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರಸುದಾರರ ಪತ್ತೆಗೆ ಮನವಿ

ಬಂಟ್ವಾಳ: ಅಪರಿಚಿತ ವ್ಯಕ್ತಿಯೋರ್ವನ‌ ಮೃತದೇಹವೊಂದು ಸಜೀಪ ನಡು ಎಂಬಲ್ಲಿ ರಿಕ್ಷಾ ನಿಲ್ದಾಣದಲ್ಲಿ ಪತ್ತೆಯಾಗಿದೆ. ಸಜೀಪ ನಡು ಗ್ರಾಮದಲ್ಲಿ ನ ರಿಕ್ಷಾ ನಿಲ್ದಾಣದಲ್ಲಿ ಸುಮಾರು 45 ವರ್ಷದ ಗಂಡಸಿನ ಮೃತದೇಹ ಪತ್ತೆಯಾಗಿದ್ದು ಯಾವ ಕಾರಣದಿಂದ ಈತ...

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...