Thursday, April 18, 2024

ಬಿಲ್ಡಿಂಗ್ ಕೆಲಸದ ಸಾಮಾಗ್ರಿಗಳು ಕಳವು : ಪ್ರಕರಣ ದಾಖಲು

ಬಿಲ್ಡಿಂಗ್ ಕೆಲಸದ ಸಾಮಾಗ್ರಿಗಳನ್ನು ಕಳವು ಆಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ತಾಲೂಕಿನ ಪುದು ಗ್ರಾಮದ ಅಮ್ಮೆಮ್ಮಾರ್ ಮನೆಯ ಹಮ್ಮಬ್ಬ ಮರ್ಜೂಕ್ ಎಂಬವರು ಸಿವಿಲ್ ಇಂಜಿನಿಯರ್ ಮಾಡಿ ಸೈಟ್ ಇಂಜಿನಿಯರ್ ಆಗಿ ಕೆಲಸ ಮಾಡಿಕೊಂಡಿದ್ದು. ಸೈಟ್ ನ ಬಿಲ್ಡಿಂಗ್ ಕೆಲಸಕ್ಕೆ ಬೇಕಾದ ಸಾಮಾಗ್ರಿಗಳಾದ ಕಬ್ಬಿಣದ ಶೀಟು, ಜಾಕ್, ಸ್ಕಪೋಲ್ಡಿಂಗ್ ಇತ್ಯಾದಿಗಳನ್ನು ಮನೆಯ ಪಕ್ಕದಲ್ಲಿರುವ ಶೆಡ್ ನಲ್ಲಿ ಇಡುತ್ತಿದ್ದರು.

ಆದ್ರೆ ನ.24 ರಂದು ಸಂಜೆ ಬೆಂಗಳೂರಿಗೆ ಹೋಗಿ ಮರುದಿನ ಬೆಳಿಗ್ಗೆ ಮನೆಗೆ ಬಂದು, ಬಳಿಕ ನ.29ರಂದು ಶೆಡ್ ಗೆ ತೆರಳಿ ನೋಡಿದಾಗ ಅಲ್ಲಿದ್ದ ವಸ್ತುಗಳು ಕಳವಾಗಿತ್ತು.

ಈ ಬಗ್ಗೆ ವಿಚಾರಿಸಿದಾಗ ಆರೋಪಿ ಶರೂಪ್ ಆಲಂನು ಶೆಡ್ ನಲ್ಲಿದ್ದ ಒಟ್ಟು ರೂ 9,23,200 ಮೌಲ್ಯದ ಬಿಲ್ಡಿಂಗ್ ಕೆಲಸಕ್ಕೆ ಬೇಕಾದ ಸಾಮಾಗ್ರಿಗಳಾದ ಕಬ್ಬಿಣದ ಶೀಟು, ಜಾಕ್ ,ಸ್ಕಪೋಲ್ಡಿಂಗ್ ಇತ್ಯಾದಿಗಳನ್ನು ವಾಹನದಲ್ಲಿ ಕಳವು ಮಾಡಿಕೊಂಡು ಹೋಗಿರುವುದು ತಿಳಿದುಬಂದಿದೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ 123/2023 ಕಲಂ : 379, ಐ ಪಿ ಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

More from the blog

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: ಏ.21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...