Saturday, April 6, 2024

ಡಾಮರು ಕಳ್ಳತನದ ಜಾಲವನ್ನು ಪತ್ತೆ ಹಚ್ಚಿದ ಬಂಟ್ವಾಳ ಗ್ರಾಮಾಂತರ ಪೊಲೀಸರು : ಲಕ್ಷಾಂತರ ರೂ.ಮೌಲ್ಯದ ಸೊತ್ತುಗಳ ಸಹಿತ ಆರೋಪಿಗಳು ಅರೆಸ್ಟ್

ಬಂಟ್ವಾಳ: ಡಾಮರು ಕಳ್ಳತನದ ಜಾಲವನ್ನು ಪತ್ತೆ ಹಚ್ಚಿದ ಬಂಟ್ವಾಳ ಗ್ರಾಮಾಂತರ ಪೋಲೀಸರ ತಂಡ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳ ಸಹಿತ ಆರೋಪಿಗಳನ್ನು ಬಂಧಿಸಿದ ಘಟನೆ ನಡೆದಿದೆ.

ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಅಮೈ ಎಂಬಲ್ಲಿ ಅಕ್ರಮವಾಗಿ ಡಾಮರು ಕಳ್ಳತನ ನಡೆಯುತ್ತಿದ್ದು, ಪೊಲೀಸರು ದಾಳಿ ನಡೆಸಿ 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ವಿಜಯಕುಮಾರ್ ಶೆಟ್ಟಿ, ಸುಧಾಕರ್ ಶೆಟ್ಟಿ, ಮಹಮ್ಮದ್ ಇಮ್ರಾನ್, ಅಶ್ರಫ್ ಎಮ್, ವಿರೇಂದ್ರ ಎಸ್. ಆರ್,ಮಾದಸ್ವಾಮಿ,ಪ್ರಭಾಕರನ್, ನವೀನ್ ಕುಮಾರ್ ಎಂ.ಜಿ, ಮಹಮ್ಮದ್ ನಿಸಾರ್, ಮಹಮ್ಮದ್ ಸಿಯಾಬುದ್ದೀನ್ ಎಂಬವರು ‌ಬಂಧಿತರು.

‌‌ ಬಂಧಿತರಿಂದ 64 ಲಕ್ಷಕ್ಕಿಂತಲೂ ಅಧಿಕ ಮೌಲ್ಯದ ಡಾಮರು , 6 ಲಾರಿ ಹಾಗೂ ಕಳ್ಳತನ ಮಾಡಲು ಉಪಯೋಗಿಸಿದ ತೂಕ ಮಾಪನ, ಡಾಮರು ಬಿಸಿಮಾಡಲು ಉಪಯೋಗಿಸಿದ ಗ್ಯಾಸ್ ಸಿಲಿಂಡರ್, ಡಾಂಬರ್ ತುಂಬಿಸುವ ಕಬ್ಬಿಣದ ಟ್ಯಾಂಕ್, 9 ಮೊಬೈಲ್,ಹೀಗೆ ಅನೇಕ ಸೊತ್ತುಗಳನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ.

ಕಡೇಶಿವಾಲಯದ ಅಮೈ ಎಂಬಲ್ಲಿ ಬಾಡಿಗೆಗೆ ಜಾಗ ಖರೀದಿ ಮಾಡಿ ಅಲ್ಲಿ ಅಕ್ರಮ ವ್ಯವಹಾರ ನಡೆಸಲಾಗುತ್ತಿತ್ತು.

ಮಂಗಳೂರಿನಿಂದ ಡಾಮರು ಲೋಡ್ ಮಾಡಿಕೊಂಡು ಬರುವ ಲಾರಿಗಳು ಅಮೈಗೆ ಬರುತ್ತದೆ.

ಅಲ್ಲಿ ಅಕ್ರಮವಾಗಿ ಡಾಮರುನ್ನು ಬೇರೆ ಲಾರಿಗಳಿಗೆ ವರ್ಗಾವಣೆ ಮಾಡಿ ಮಾರಾಟ ಮಾಡುವ ಬಗ್ಗೆ ಮಾಹಿತಿ ಲಭ್ಯವಾಗಿ ಪೋಲೀಸರು ದಾಳಿ ನಡೆಸಿದ್ದರು.

ಕಳವು ,ಮೋಸ ವಂಚನೆ ಪ್ರಕರಣ ದಾಖಲಿಸಿಕೊಂಡು ತನಿಖೆ ‌ನಡೆಸುತ್ತಿದ್ದಾರೆ.

More from the blog

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...