Sunday, April 7, 2024

ತಾಲೂಕಿನಲ್ಲಿ ಪೊಲೀಸ್ ಇಲಾಖೆ ನಿಷ್ಕ್ರಿಯ: ಹಿಂದೂ ಜಾಗರಣಾ ವೇದಿಕೆ ಆರೋಪ

ಬಂಟ್ವಾಳ: ಬಿಸಿರೋಡಿನ ಆಸುಪಾಸಿನಲ್ಲಿ ಕಳ್ಳತನ ಹಾಗೂ ಗಾಂಜಾ ಮಾಫಿಯಾ ದಂದೆ ನಡೆಯುತ್ತಿದೆಯಾದರೂ ಪೋಲೀಸ್ ಇಲಾಖೆ ನಿಷ್ಕ್ರಿಯವಾಗಿರುವುದರ ಹಿಂದೆ ಸಂಶಯವಿದೆ ಎಂದು ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲಾ ಸಂಚಾಲಕ ನರಸಿಂಹ ಮಾಣಿ ಅವರು ಆರೋಪಮಾಡಿದ್ದಾರೆ.

ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಬಿಸಿರೋಡಿನ ಪಚ್ಚಿನಡ್ಕ ಎಂಬಲ್ಲಿ ಯುವತಿಯೋರ್ವಳಿಗೆ ಕಾರು ಡಿಕ್ಕಿಯಾಗಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ಬಂಧನ ಆಗಿಲ್ಲ ಎಂದು ಆರೋಪ ಮಾಡಿದ್ದಾರೆ. ಇಂತಹ ಘಟನೆಯನ್ನು ಹಿಂದೂ ನಾವು ಖಂಡಿಸುತ್ತೇವೆ ಎಂದರು.

ಕಾರಿನಲ್ಲಿದ್ದ ಯುವಕರು ಗಾಂಜಾ ಸೇವಿಸಿ, ಚಾಲನೆ ಮಾಡಿದ ಕಾರಣದಿಂದ ಅಪಘಾತ ಸಂಭವಿಸಿ ಯುವತಿ ಸಾವನ್ನಪ್ಪಿದ್ದಾಳೆ , ಆದರೆ ಈ ಬಗ್ಗೆ ಯಾವುದೇ ತನಿಖೆನಡೆಸದೆ ಅವರನ್ನು ಬಚಾವ್ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂಬ ಆರೋಪವನ್ನು ಮಾಡಿದ್ದಾರೆ.

ಬಿಸಿರೋಡಿನ ಆಸುಪಾಸಿನಲ್ಲಿ ಕಳೆದ ಕೆಲವು ದಿನಗಳಿಂದ ಕಳ್ಳತನ ನಡೆಯುತ್ತಿರುವುದು ಬೇಸರದ ಸಂಗತಿ.

ಬಿಸಿರೋಡಿನ ಹೃದಯ ಭಾಗದಲ್ಲಿ ಇಂತಹ ಘಟನೆಗಳು ನಡೆಯುತ್ತಿದೆ ಎಂಬುದು ಅತ್ಯಂತ ಬೇಸರದ ವಿಚಾರ, ಆದರೆ ಈ ಬಗ್ಗೆ ಯಾವುದೇ ಕ್ರಮವನ್ನು ಪೋಲೀಸರು ‌ಕೈಗೊಂಡಿಲ್ಲ ಎಂದು ಆರೋಪ ಮಾಡಿದರು.

ಹಿಂದೂ ಸಮಾಜಕ್ಕೊಸ್ಕರ ಅನೇಕ ಜನಪರವಾದ ಕಾರ್ಯಗಳನ್ನು ಮಾಡುವ ಸಂಘಟನೆಯ ಯುವಕರನ್ನು ಉದ್ದೇಶ ಪೂರ್ವಕವಾಗಿ ನಿಯಂತ್ರಣ ಮಾಡುವ ಕಾರ್ಯ ಪೋಲಿಸ್ ಇಲಾಖೆಯಿಂದ ಮಾಡಲಾಗುತ್ತಿದೆ. ಜೊತೆಗೆ ನಿರಂತರ ಕಿರುಕುಳ ನೀಡುವ ಕೆಲಸ ಇಲಾಖೆ ಮಾಡುತ್ತಿದೆ. ಆದರೆ ಗಾಂಜಾ ಸಹಿತ ಅನೇಕ ‌ಮಾಫಿಯಾಗಳನ್ನು ನಡೆಸುವವರ ಮೇಲೆ ಯಾವುದೇ ಕ್ರಮ ನಡೆಯುತ್ತಿಲ್ಲ .ಹಾಗಾಗಿ ಇಲಾಖೆಯ ಬಗ್ಗೆ ಸಂಶಯ ವ್ಯಕ್ತವಾಗಿದೆ.

ಕಾನೂನನ್ನು ಪಾಲಿಸುವ ಇಲಾಖೆ ಮೌನವಾಗಿರುವುದರ ಹಿಂದೆ ಯಾವ ಶಕ್ತಿ ‌ಕೆಲಸ ಮಾಡಿದೆ, ಇದೇ ರೀತಿ ಇಲಾಖೆ ಸುಮ್ಮನಿದ್ದರೆ ಸಂಘಟನೆ ಮೂಲಕ ಹೋರಾಟ ಮಾಡಬೇಕಾಗಿದೆ.

ಕಾನೂನು ಕೈಗೆತ್ತಿಗೊಳ್ಳದೆ ಕಾನೂನು ಹೋರಾಟಕ್ಕೆ ಬದ್ದವಾಗಿರುವ ಹಿಂದೂ ಸಂಘಟನೆಯ ಕಾರ್ಯಕರ್ತರು ಅಧಿಕಾರಿಗಳನ್ನು ಸಂಪರ್ಕ ಮಾಡಿದರೆ ಅಧಿಕಾರಿಗಳು ಯಾವುದೇ ಸ್ಪಂದನೆ ನೀಡುತ್ತಿಲ್ಲ ,ಉಡಾಫೆಯ ಉತ್ತರ ನೀಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿದರು.

ಹಿಂದೂ ಯುವಕರ ಮೇಲೆ ಗೂಂಡ ಕಾಯ್ದೆ ಅಥವ ಬೇರೆ ಕಿರುಕುಳ ನೀಡಿದರೆ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಹರೀಶ್ ತಲೆಂಬಿಲ, ಶರಣ್ ಕಾಮಾಜೆ, ಶರತ್ ಕಾರಿಂಜ, ಸಂತೋಷ್ ಸೊರ್ನಾಡು, ನಮಿತ್ ಕಾರಿಂಜ, ರಕ್ಷಿತ್ ಮಯ್ಯರಬೈಲು ಉಪಸ್ಥಿತರಿದ್ದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...