Sunday, April 7, 2024

ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಕಸಿದ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

ಬಂಟ್ವಾಳ: ಬಿ.ಸಿ.ರೋಡ್ ನ ಅಜ್ಜಿಬೆಟ್ಟು ಶಾಲಾ ಮೈದಾನದ ಬಳಿರುವ ಅಂಗಡಿಯೊಂದರಲ್ಲಿದ್ದ ಮಹಿಳೆಯೋರ್ವರ ಕುತ್ತಿಗೆಯಿಂದ ಒಂದೂವರೆ ಪವನಿನ ಚಿನ್ನದ ಸರ ಕಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮಂಗಳೂರು ‌ಬೈಕಂಪಾಡಿಯ ಅಶೋಕ, ಮಂಗಳೂರು ದಂಬೇಲ್ ನಿವಾಸಿ ಸಚ್ಚಿನ್ ಎಂದು ಹೆಸರಿಸಲಾಗಿದೆ.ಬಂಧಿತರಿಂದ ಒಂದೂವರೆ ಪವನಿನ ಚಿನ್ನದ ಸರ ಮತ್ತು ಬೈಕನ್ನು ವಶಪಡಿಸಲಾಗಿದೆ.

ಡಿ.14 ರಂದು ಬಿ.ಸಿ.ರೋಡ್ ನ ಅಜ್ಜಿಬೆಟ್ಟು ಶಾಲಾ ಮೈದಾನದ ಬಳಿರುವ ಶ್ರೀಮಹಾಲಕ್ಷ್ಮಿ ಸ್ಟೋರ್ ಗೆ ಮಧ್ಯಾಹ್ನ 2.30 ರ ಹೊತ್ತಿಗೆ ಬೈಕ್ ನಲ್ಲಿ‌ ಬಂದ ಅಪರಿಚಿತರಿಬ್ಬರು ವಿಮಲ್ ಹಾಗೂ ಚಾಕಲೇಟ್ ಪಡೆದುಕೊಂಡು 40 ರೂ ನೀಡಿದ್ದು,ಚಿಲ್ಲರೆ ನೀಡುವ ಉದ್ದೇಶದಿಂದ

ಮಾಲಕಿ ಸರೋಜಿನಿ ಅವರು ಕ್ಯಾಶ್ ಕೌಂಟರ್ ಗೆ ಬಗ್ಗಿದಾಗ ಅವರ ಕುತ್ತಿಗೆಯಿಂದ ಚೈನ್ ಎಗರಿಸಿ ಪರಾರಿಯಾಗಿದ್ದರು.

ಈ ಕುರಿತು ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ವಿಜಯಪ್ರಸಾದ್ ಅವರ ನಿರ್ದೇಶನದಂತೆ ಇನ್ಸ್ ಪೆಕ್ಟರ್ ಅನಂತಪದ್ಮನಾಭ ಅವರ ಮಾರ್ಗದರ್ಶನದಲ್ಲಿ‌ ಪಿ.ಎಸ್.ಐ ಗಳಾದ ರಾಮಕೃಷ್ಣ, ಕಲೈಮಾರ್ ಪಿ ಮತ್ತವರ ಸಿಬ್ಬಂದಿಗಳು ಬೆಂಜನಪದವಿನ ಕರಾವಳಿ ಸೈಟ್ ಬಳಿ ನಡೆಸಿದ ಕಾರ್ಯಾಚರಣೆಯಲ್ಲಿ‌ ಆರೋಪಿಗಳನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ. ಸಿಬ್ಬಂಧಿಗಳಾದ ಇರ್ಷಾದ್ ಪಿ , ರಾಜೇಶ್ ಎಸ್ , ಗಣೇಶ್ ಎನ್, ಮೋಹನ ವೈ. ಎ ,ವಿವೇಕ್ ಕೆ.ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ಒಳಪಡಿಸಲಾಗಿದೆ.

ಈ ಕೃತ್ಯಕ್ಕೆ ಸಂಬಂಧಿಸಿ ಅರೋಪಿಗಳ ಯಾವುದೇ ಸುಳಿವು ಇರಲಿಲ್ಲ, ಘಟನಾ ಸ್ಥಳದಲ್ಲಿ ಸಿ.ಸಿ ಕ್ಯಾಮರ ಕೂಡ ಇರದಿದ್ದು, ವಾರದೊಳಗೆ ಈ ಪ್ರಕರಣದ ಆರೋಪಿಗಳನ್ನು ಬಂಧಿಸಿದ ನಗರ ಠಾಣೆಯ ಇನ್ಸ್ ಪೆಕ್ಟರ್ ಆನಂತಪದ್ಮನಾಭ ಹಾಗೂ

ತಂಡಕ್ಕೆ ಪೊಲೀಸ್ ಅಧೀಕ್ಷಕರು ನಗದು ಬಹುಮಾನ ಘೋಷಿಸಿರುತ್ತಾರೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...