Sunday, April 14, 2024

ಬಿಸಿರೋಡಿನ ಎನ್.ಜಿ.ಸರ್ಕಲ್ ನಲ್ಲಿ ಬಸ್ ಗಳು ಜನರನ್ನು ಹತ್ತಿಸಿ,ಇಳಿಸುವಂತಿಲ್ಲ: ನಿಯಮ ಮೀರಿ ನಿಲುಗಡೆ ಮಾಡಿದರೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ ಟ್ರಾಫಿಕ್ ಎಸ್.ಐ.ಸುತೇಶ್

ಬಂಟ್ವಾಳ: ಬಿಸಿರೋಡಿನ ಎನ್.ಜಿ.ಸರ್ಕಲ್ ನಲ್ಲಿ ಇನ್ನು ಮುಂದೆ ಬಸ್ ನಿಲ್ಲಿಸುವಂತಿಲ್ಲ, ಜನ ಹತ್ತಿಸುವುದು,ಇಳಿಸುವುದು ಮಾಡುವಂತಿಲ್ಲ , ಮಾಡಿದರೆ ಅಂತವರ ಮೇಲೆ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ ಟ್ರಾಫಿಕ್ ಪೊಲೀಸರು.

ಕಳೆದ ಕೆಲವು ದಿನಗಳಿಂದ ಟ್ರಾಫಿಕ್ ಎಸ್.ಐ.ಸುತೇಶ್ ಅವರು ಬೆಳಿಗ್ಗೆ ಹಾಗೂ ಸಂಜೆಯ ಸಂಚಾರದಲ್ಲಿ ಬ್ಯೂಸಿ ಇರುವ ಸಮಯದಲ್ಲಿ ಬಿಸಿರೋಡಿನ ಎನ್.ಜಿ.ಸರ್ಕಲ್ ನಲ್ಲಿ ಬೀಡು ಬಿಟ್ಟು ಖಾಸಗಿ ಮತ್ತು ಸರಕಾರಿ ಬಸ್ ಗಳು ಇಲ್ಲಿ ನಿಲುಗಡೆ ಮಾಡದಂತೆ ನೋಡಿಕೊಳ್ಳುತ್ತಿರುವುದಲ್ಲದೆ, ಇಲ್ಲಿ ಜನರನ್ನು ಹತ್ತಿಸುವುದು ಇಳಿಸುವುದು ಮಾಡಬೇಡಿ ಎಂದು ಖಡಕ್ ವಾರ್ನಿಂಗ್ ನೀಡುತ್ತಿದ್ದಾರೆ.

ಬಸ್ ಚಾಲಕರು ಅವೈಜ್ಞಾನಿಕ ರೀತಿಯಲ್ಲಿ ಮತ್ತು ಕಾನೂನು ಬಾಹಿರವಾದ ನಿಲುಗಡೆಯನ್ನು ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಸರ್ಕಲ್ ನಲ್ಲಿ ನೀಡುವ ಪರಿಣಾಮವಾಗಿ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿ, ಪುತ್ತೂರು ಮತ್ತು ಧರ್ಮಸ್ಥಳ ಕಡೆಯಿಂದ ಬರುವ ಹಾಗೂ ಹೋಗುವ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ.

ಜೊತೆಗೆ ಸಂದಿಗ್ಧ ಪರಿಸ್ಥಿತಿಯಲ್ಲಿ ಅಪಘಾತಕ್ಕೆ ಅವಕಾಶವನ್ನು ನೀಡುತ್ತದೆ. ಹಾಗಾಗಿ ಇಲ್ಲಿ ಬಸ್ ಗಳು ನಿಲುಗಡೆ ನೀಡುವುದು ಅಪರಾಧವಾಗಿದೆ. ಕಾನೂನು ಪ್ರಕಾರ ಯಾವುದೇ ಸರ್ಕಲ್ ಬಳಿ ಬಸ್ ಗಳು ಜನರನ್ನು ಹತ್ತಿ ,ಇಳಿಸುವುದು ಮಾಡುವಂತಿಲ್ಲ. ಕೂಗಳತೆಯ ದೂರದಲ್ಲಿ ಬಸ್ ನಿಲ್ದಾಣವಿದ್ದು, ಉದ್ದೇಶಪೂರ್ವಕವಾಗಿ ಬಸ್ ಚಾಲಕರು ನಿಲುಗಡೆ ನೀಡಿ ಸಮಸ್ಯೆಗಳಿಗೆ ಕಾರಣರಾಗುತ್ತಾರಾ? ಹೀಗೊಂದು ಪ್ರಶ್ನೆ ಕೂಡ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿತ್ತು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಚತುಷ್ಪತ ಕಾಮಗಾರಿ ಕಾಮಗಾರಿ ನಡೆಯುತ್ತಿರುವ ಸಂದಿಗ್ಧ ಸಮಯದಲ್ಲಿ ಮತ್ತೆ ಬಸ್ ಗಳು ನಿಯಮ ಮೀರಿ ನಿಲುಗಡೆ ನೀಡಿ ಜನರ ಸಂಚಾರಕ್ಕೆ ಅಡ್ಡಿಪಡಿಸುವ ಕಾರ್ಯಗಳು ನಿತ್ಯ ನಡೆಯುತ್ತಿದೆ. ಇಲ್ಲಿನ ಸರ್ಕಲ್ ವಾಹನ ಸಂದಣಿಯಿಂದ ಕೂಡಿ ಸಂಚಾರಕ್ಕೆ ಅಡಚಣೆಯಾಗುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಸಂಚಾರಕ್ಕೆ ಮುಕ್ತವಾಗಿ ಅವಕಾಶ ನೀಡುವ ಉದ್ದೇಶದಿಂದ ಬಸ್ ಗಳ ಚಾಲಕರಿಗೆ ಎಚ್ಚರಿಕೆ ನೀಡುತ್ತಿದ್ದಾರೆ.

ನಿಯಮ ಮೀರಿ ನಿಲುಗಡೆ ಅಪರಾಧ: ಟ್ರಾಫಿಕ್ ಎಸ್.ಐ.ಸುತೇಶ್

ಟ್ರಾಫಿಕ್ ಜಾಮ್ ಉಂಟಾಗಿ ನೂರಾರು ಸಮಸ್ಯೆಗಳಿಗೆ ಎಡೆಮಾಡಿಕೊಡುವ ಮತ್ತು ಅಪಘಾತಕ್ಕೆ ಕಾರಣವಾಗುವ ಸಾಧ್ಯತೆಗಳು ಹೆಚ್ಚು ಇರುವ ಹಿನ್ನೆಲೆಯಲ್ಲಿ , ಇಲ್ಲಿ ಸರಕಾರಿ ಮತ್ತು ಖಾಸಗಿ ಬಸ್ ಗಳ ನಿಲುಗಡೆ ಮಾಡದಂತೆ ಎಚ್ಚರಿಕೆ ನೀಡಿದ್ದೇನೆ, ಮುಂದಿನ ದಿನಗಳಲ್ಲಿ ಎಚ್ಚರಿಕೆಯ ಮಾತುಗಳಿಗೆ ಬೆಲೆ ನೀಡದೆ ಮತ್ತೆ ಮತ್ತೆ ಬಸ್ ಗಳನ್ನು ನಿಲ್ಲಿಸಿ ಜನ ಹತ್ತಿಸುವುದು ಇಳಿಸುವುದು ಮಾಡಿ ಟ್ರಾಫಿಕ್ ಸಮಸ್ಯೆಗಳಿಗೆ ಕಾರಣವಾದರೆ ಅಂತಹ ಬಸ್ ಗಳ ಮೇಲೆ ಕ್ರಮ ಕೈಗೊಳ್ಳುವ ನಿರ್ಧಾರ ಮಾಡಿದ್ದೇನೆ ಎಂದು ಟ್ರಾಫಿಕ್ ಎಸ್.ಐ. ಸುತೇಶ್ ಅವರು ತಿಳಿಸಿದ್ದಾರೆ.

ಸರ್ಕಲ್ ನಲ್ಲಿ ಬಸ್ ನಿಲುಗಡೆ ಮಾಡುವುದು ಅಪರಾಧ ಇದರಿಂದ ಅನಾಹುತಗಳು ನಡೆದರೆ ಬಸ್ ಚಾಲಕರೇ ಹೊಣೆಯಾಗುತ್ತಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...