Saturday, April 6, 2024

ನಾಪತ್ತೆಯಾಗಿದ್ದ ಕೋಣಗಳ ಪೈಕಿ ಎರಡು ಕೋಣಗಳು ಜೀವಂತ ಪತ್ತೆ, ಇನ್ನೊಂದು ಗುಡ್ಡದಲ್ಲಿ ಶವವಾಗಿ ಸಿಕ್ಕಿದೆ..

ಬಂಟ್ವಾಳ: ಕಾಣೆಯಾಗಿದ್ದ ಮೂರು ಕೋಣಗಳ ಪೈಕಿ ಎರಡು ಕೋಣಗಳು ಜೀವಂತವಾಗಿ ಪತ್ತೆಯಾದರೆ ಇನ್ನೊಂದು ಕೋಣ ಶವವಾಗಿ ಸಿಕ್ಕಿದೆ ಎಂದು ಪೋಲೀಸರು ತಿಳಿಸಿದ್ದಾರೆ.
ಅ ಮೂಲಕ ಕಳವು ಪ್ರಕರಣಕ್ಕೆ ತಿರುವು ಸಿಕ್ಕಿದೆ.
*ಘಟನೆಯ ವಿವರ*
ಅಮ್ಮುಂಜೆ ದೇವಂದಬೆಟ್ಟು ವಿನಯ ಬಲ್ಯಾಯ ಎಂಬವರ ಮನೆಯ ಸಮೀಪದ ಗದ್ದೆಯಲ್ಲಿ ಮೇಯಲು ಕಟ್ಟಿ ಹಾಕಿದ್ದ ಸುಮಾರು 90 ಸಾವಿರ ಮೌಲ್ಯದ ಮೂರು ಕೋಣಗಳು ಡಿ.17 ರಂದು ನಾಪತ್ತೆಯಾಗಿತ್ತು.
ಆದರೆ ಎಷ್ಟು ಹುಡುಕಿ ದರೂ ಕೋಣಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ತಡವಾಗಿ ಇಂದು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆ ಗೆ ದೂರು ನೀಡಿದ್ದರು.
ಜೊತೆಗೆ ಮಹಮ್ಮದ್ ಹನೀಫ್ ಎಂಬಾತನ ಮೇಲೆ ಸಂಶಯವಿದ್ದು ಈತ ಕಳವು ಮಾಡಿರುವ ಶಂಕೆಯನ್ನು ದೂರಿನಲ್ಲಿ ತಿಳಿಸಲಾಗಿತ್ತು.
ದೂರಿನ ಹಿನ್ನೆಲೆಯಲ್ಲಿ ಪೋಲೀಸರು ಈತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುವ ವೇಳೆ ಕೋಣಗಳು ಪತ್ತೆಯಾಗಿದೆ.
ಮೂರು ಕೋಣಗಳ ಪೈಕಿ ಎರಡು ಕೋಣಗಳು ಸ್ವಲ್ಪ ದೂರದ ಗುಡ್ಡವೊಂದರಲ್ಲಿ ಮೇಯುತ್ತಿದ್ದರೆ, ಇನ್ನೊಂದು ಕೋಣ ಮಾತ್ರ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಹೂತು ಮೇಲೆ ಬರಲಾಗದೆ ಮೃತಪಟ್ಟಿದೆ ಎಂದು ಪೋಲೀಸರು ತಿಳಿಸಿದ್ದಾರೆ.
ಸ್ಥಳೀಯರು ಕೋಣಗಳು ಇರುವುದನ್ನು ನೋಡಿ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ‌. ಬಳಿಕ ಕೋಣಗಳನ್ನು ಮನೆಯವರಿಗೆ ಹಸ್ತಾಂತರ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದೀಗ ವಶಕ್ಕೆ ಪಡೆದುಕೊಂಡಿದ್ದ ವ್ಯಕ್ತಿಯನ್ನು ವಿಚಾರಣೆ ನಡೆಸಿ ಆತ ಕಳವು ಪ್ರಕರಣದಲ್ಲಿದ ಕಾರಣ ಆತನನ್ನು ಬಿಟ್ಟು ಕಳುಹಿಸಲಾಗಿದೆ.
ಗೊಂದಲ ಉಂಟುಮಾಡಿದ್ದ ಕೋಣಗಳ ಕಳವು ಪ್ರಕರಣ ಕೊನೆಗೂ ಸುಖಾಂತ್ಯಗೊಂಡಿದೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...