Sunday, April 14, 2024

ಎಚ್ಐವಿ /ಏಡ್ಸ್ ನ ಜಾಗೃತಿ ಕಾರ್ಯಕ್ರಮ

ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ ಕಲ್ಲಡ್ಕ ಇದರ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೆಡ್ ರಿಬ್ಬನ್ ಕ್ಲಬ್ಬಿನ ವತಿಯಿಂದ ಎಚ್ಐವಿ /ಏಡ್ಸ್ ನ ಜಾಗೃತಿ ಕಾರ್ಯಕ್ರಮ ಶ್ರೀರಾಮ ಪದವಿ ವಿಭಾಗದ ಪ್ರೇರಣಾ ಸಭಾಭವನದಲ್ಲಿ ನಡೆಯಿತು.

ಬಾಳ್ತಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾಗಿರುವ ಡಾll ರೋಶನಿ ಪೂಂಜ ಏಡ್ಸ್ ರೋಗದ ವಿವಿಧ ಆಯಾಮಗಳನ್ನು ತಿಳಿಸಿಕೊಡುತ್ತಾ ಏಡ್ಸ್ ರೋಗ ಬರಬಹುದಾದ ವಿವಿಧ ಬಗೆಗಳನ್ನು ವಿವರಿಸಿದರು.

ಜೊತೆಗೆ ಕ್ಷಯ ರೋಗದ ವಿವಿಧ ಲಕ್ಷಣಗಳನ್ನು ತಿಳಿಸುತ್ತಾ ರೋಗವನ್ನು ಗುಣಪಡಿಸುವ ಉಪಾಯಗಳನ್ನ ತಿಳಿಹೇಳಿದರು.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯಾ ವಿದ್ಯಾರ್ಥಿಗಳಿಗಾಗಿ ಪ್ರತಿ ವಾರ ನಡೆಸುವ ರಸಪ್ರಶ್ನೆಯ ವಿಜೇತರನ್ನು ಗುರುತಿಸಿ ನಗದು ಬಹುಮಾನ ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನ ಪದವಿ ವಿಭಾಗದ ಪ್ರಾಚಾರ್ಯರಾದ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ವಹಿಸಿದ್ದರು. ವೇದಿಕೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿಯಾದ ಯತಿರಾಜ್ ಪಿ ಮತ್ತು ಸಹ ಯೋಜನಾಧಿಕಾರಿಯಾದ ದೀಕ್ಷಿತಾ ಉಪಸ್ಥಿತರಿದ್ದರು.

ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕಿಯಾದ ದ್ವಿತೀಯ ಕಲಾವಿಭಾಗದ ಪದ್ಮಶ್ರೀ ಇವರು ಪ್ರಾರ್ಥನೆಯನ್ನ ಹಾಡಿದರು .ಪ್ರಥಮ ವರ್ಷದ ಮಂಜುನಾಥ್ ಸ್ವಾಗತಿಸಿ, ಭೂಮಿಕ ವಂದಿಸಿ, ಧನುಶ್ರಿ ಕಾರ್ಯಕ್ರಮ ನಿರೂಪಿಸಿದರು.

More from the blog

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ.) 37ನೇ ವಾರ್ಷಿಕೋತ್ಸವ ಸಮಾರಂಭ

ಬಂಟ್ವಾಳ : ಈ ಮಣ್ಣಿನ ಸಂಸ್ಕೃತಿ, ಮೌಲ್ಯವನ್ನು ಮುಂದಿನ ತಲೆಮಾರಿಗೆ ತಲುಪಿಸುವ ಮಹತ್ತರವಾದ ಜವಾಬ್ದಾರಿ ಸಂಘ ಸಂಸ್ಥೆಗಳ ಮೇಲಿದೆ, ಈ ನಿಟ್ಟಿನಲ್ಲಿ ನವೋದಯ ಮಿತ್ರ ಕಲಾ ವೃಂದವು ಸಮಾಜಕ್ಕೆ ಪೂರಕವಾಗಿ ಸಮಾಜಮುಖಿ ಕಾರ್ಯಗಳನ್ನು...

ಲೋಕಸಭಾ ಚುನಾವಣೆ : ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ‘ಸಂಕಲ್ಪ ಪತ್ರ’ ಹೆಸರಲ್ಲಿ ದೇಶದ ಜನರಿಗೆ ಪ್ರಧಾನಿ ಮೋದಿ ಆಶ್ವಾಸನೆಗಳನ್ನು ನೀಡಿದ್ದು ಮೊದಲ ಸಂಕಲ್ಪ...

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರಸುದಾರರ ಪತ್ತೆಗೆ ಮನವಿ

ಬಂಟ್ವಾಳ: ಅಪರಿಚಿತ ವ್ಯಕ್ತಿಯೋರ್ವನ‌ ಮೃತದೇಹವೊಂದು ಸಜೀಪ ನಡು ಎಂಬಲ್ಲಿ ರಿಕ್ಷಾ ನಿಲ್ದಾಣದಲ್ಲಿ ಪತ್ತೆಯಾಗಿದೆ. ಸಜೀಪ ನಡು ಗ್ರಾಮದಲ್ಲಿ ನ ರಿಕ್ಷಾ ನಿಲ್ದಾಣದಲ್ಲಿ ಸುಮಾರು 45 ವರ್ಷದ ಗಂಡಸಿನ ಮೃತದೇಹ ಪತ್ತೆಯಾಗಿದ್ದು ಯಾವ ಕಾರಣದಿಂದ ಈತ...

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...