Wednesday, April 17, 2024

ಕುದ್ರೆಬೆಟ್ಟು ಸ.ಹಿ.ಪ್ರಾ.ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ವಿವೇಕ ತರಗತಿ ಕೊಠಡಿ ಉದ್ಘಾಟನೆ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುದ್ರೆಬೆಟ್ಟು ಇಲ್ಲಿ ನೂತನವಾಗಿ 13.90 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ವಿವೇಕ ತರಗತಿ ಕೊಠಡಿ ಉದ್ಘಾಟನೆ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಿ ಕೆ ಅಣ್ಣು ಪೂಜಾರಿ ಅಧ್ಯಕ್ಷತೆಯಲ್ಲಿ ಜರಗಿತು.

ಬಂಟ್ವಾಳ ಕ್ಷೇತ್ರದ ಶಾಸಕರಾದ ರಾಜೇಶ್ ನಾಯ್ಕ್ ಆಶ್ರಯದ ಪ್ರಕಾರ ಶಾಲಾ ಕಾರ್ಯಕ್ರಮಗಳು ಮಕ್ಕಳಿಗೋಸ್ಕರ ನಡೆಯುವ ಕಾರ್ಯಕ್ರಮ, ಸಮಯಕ್ಕೆ ಸರಿಯಾಗಿ ಎಲ್ಲಾ ಕಾರ್ಯಕ್ರಮಗಳು ಮಕ್ಕಳ ಮುಖಾಂತರ ನಡೆಯಬೇಕು ಎನ್ನುವಂತೆ ಶಾಲಾ ಮಕ್ಕಳು ಗಣ್ಯರ ಉಪಸ್ಥಿತಿಯಲ್ಲಿ ತರಗತಿ ಕೊಠಡಿಗಳನ್ನು ಉದ್ಘಾಟಿಸಿದರು.

ನಂತರ ಚರಕ ಮಹರ್ಷಿ ಶಾಲಾ ಆಯುರ್ವೇದಿಕ ವನವನ್ನು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ, ಶಾಲಾ ಸ್ಮಾರ್ಟ್ ತರಗತಿಯನ್ನು ಮಾಜಿ ಶಾಸಕ ರುಕ್ಮಯ ಪೂಜಾರಿ, ಉದ್ಘಾಟಿಸಿದರು.

ಸಭಾ ಕಾರ್ಯಕ್ರಮವನ್ನು ಕಲ್ಲಡ್ಕ ಕೇಟಿ ಹೋಟೆಲ್ ಲಕ್ಷ್ಮಿ ಗಣೇಶ್ ಮಾಲಕರಾದರಾಜೇಂದ್ರ ಏನ್ ಹೊಳ್ಳ, ದೀಪ ಬೆಳಗಿಸಿ ಉದ್ಘಾಟಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ, ಪ್ರೀತಿಯ ಮಮತೆಯನ್ನು ಅರಗಿಸಿದ ಶಿಕ್ಷಕನಿಂದ ಮಾತ್ರ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ, ಅಂತ ಶಿಕ್ಷಣ ಸರಕಾರಿ ಶಾಲೆ ಗಳಿಂದ ಮಾತ್ರ ನೀಡಲು ಸಾಧ್ಯ, ವೈಜ್ಞಾನಿಕ ಲೋಕಕ್ಕೆ ಕಾಲಿಡುವ ಸಂದರ್ಭದಲ್ಲಿ ಮುಕ್ತ ಮನಸ್ಸುಗಳನ್ನು ಅರಳಿಸಲು ಉತ್ತಮ ವಾತಾವರಣ ಅಗತ್ಯ ಅದಕ್ಕೆ ಕುದ್ರೆಬೆಟ್ಟು ಶಾಲೆ ಮಾದರಿ ಆಗಿದೆ ಎಂದರು ಮಾಜಿ ಶಾಸಕ ರುಕ್ಮಯ ಪೂಜಾರಿ ಮಾತನಾಡಿ ಶಾಲಾಭಿಮಾನಿಗಳ ಸಹಕಾರದಿಂದ ಇಂದು ಅನೇಕ ಸರಕಾರಿ ಶಾಲೆಗಳು ಖಾಶಾಗಿ ಶಾಲೆಗಳನ್ನು ಮೀರಿ ಬೆಳೆದಿದೆ. ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಸರಕಾರಿ ಶಾಲೆಗೆ ಕಳಿಸುತ್ತಿದ್ದಾರೆ ಎಂದರು.

ವೇದಿಕೆಯಲ್ಲಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಬಾಲ್ತಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರಂಜಿನಿ,ಪಂಚಾಯತ್ ಸದಸ್ಯರುಗಳಾದ ಲತೇಶ್, ಮಮತಾ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ನೋಣಯ್ಯ ನಾಯ್ಕ, ಮಣಿಕಂಠ ಯುವಶಕ್ತಿ ಸಂಘದ ಅಧ್ಯಕ್ಷ ಲೋಕನಾಥ ಏಳ್ತೀಮಾರ್, ಐ ಎ ಎಸ್ ಅಧಿಕಾರಿ ಮುಕುಲ್ ಜೈನ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂಧ್ಯಾ, ಶಿಕ್ಷಣ ಸಂಯೋಜಕರಾದ ಸುಜಾತ ಕುಮಾರಿ, , ಕ್ಲಸ್ಟರ್ ಸಂಪನ್ಮೂಲ ಅಧಿಕಾರಿ ಸತೀಶ್ ರಾವ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಚೆನ್ನಪ್ಪ ಕೋಟ್ಯಾನ್, ಮಾಜಿ ತಾಲೂಕು ಪಂಚಾಯತ್ ಸದಸ್ಯರುಗಳಾದ ದಿನೇಶ್ ಅಮ್ಮ್ಟೂರ್, ಗ್ರಾಮ ಪಂಚಾಯತ್ ಸದಸ್ಯರುಗಳಾದ , ಕುಮಾರಿ ಹಿರಣ್ಮಯಿ, ಮಲ್ಲಿಕಾ ಎನ್ ಎಂ, ಶೋಭಾ ಎನ್, ಹರಿಣಾಕ್ಷಿ , ಗ್ರಾಮ ಆಡಳಿತ ಅಧಿಕಾರಿ ಯಶ್ವಿತಾ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವರಾಜ್,ಮೊದಲಾದವರು ಅವರು ಉಪಸ್ಥಿತರಿದ್ದರು

ಸಭಾ ಕಾರ್ಯಕ್ರಮದಲ್ಲಿ ಶಾಲೆಗೆ ಸಹಕಾರ ನೀಡಿದ ದಾನಿಗಳಿಗೆ ಕಲ್ಲಡ್ಕ ಕೇಟಿ ಹೋಟೆಲ್ ಲಕ್ಷ್ಮಿ ಗಣೇಶ್ ಮಾಲಕರಾದರಾಜೇಂದ್ರ ಏನ್ ಹೊಳ್ಳ, ಶಾಲಾ ಮಹಾ ಪೋಷಕರಾದ ಶುಕುರ್ ಸಾಹೇಬ್, ಸಾಲಿಯನ್ ಅರ್ಥ ಮೂವರ್ಸನ ಯೋಗೀಶ್ ಸಾಲಿಯನ್, ಪಾಣೆಮಂಗಳೂರು ಚಂದ್ರಿಕಾ ವೆಜಿಟೇಬಲ್ ನ ಮೊಹಮ್ಮದ್ ನಜೀರ್, ಶೀನ ನಾಯ್ಕ್, ಶ್ರೀಮತಿ ಶಿಲ್ಪ, ಕಟ್ಟಡ ಕಾಂಟ್ರಾಕ್ಟರ್ ಮಾಧವ, ಅಬ್ದುಲ್ ರಜಾಕ್, ಪಿ ಕೆ ನವಾಜ್,ಮೊದಲಾದವರನ್ನು ಅಭಿನಂದಿಸಿ ಗೌರವಿಸಲಾಯಿತು.

ಕಾರ್ಯಕ್ರಮ,ಬಳಿಕ ಅಂಗನವಾಡಿ ಪುಟಾಣಿಗಳಿಂದ, ಶಾಲಾ ಮಕ್ಕಳಿಂದ, ಸ್ತ್ರೀ ಶಕ್ತಿ ಸಂಘದ ಸದಸ್ಯರಿಂದ, ಮಕ್ಕಳ ಪೋಷಕರಿಂದ ಮತ್ತು ಸ್ಥಳೀಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿತು.

ಶಾಲಾ ವಿದ್ಯಾರ್ಥಿನಿ ಪ್ರೇರಣ ಪ್ರಾರ್ಥಿಸಿ, ಮುಖ್ಯ ಶಿಕ್ಷಕಿ ದೇವಿಕಾ ಬಿ ಸ್ವಾಗತಿಸಿ, ಶಿಕ್ಷಕಿ ಮಮತಾ ಸನ್ಮಾನಿತರ ವರದಿವಾಚಿಸಿ,ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ವಿಠಲ ವಂದಿಸಿ, ಸಂತೋಷ್ ಬೋಳ್ಪೋಡಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿರಾದವಿಶಾಲಾಕ್ಷಿ, ಅತಿಥಿ ಶಿಕ್ಷಕಿ ಸುಮಿತ್ರ, ಗೌರವ ಶಿಕ್ಷಕರಾದ ಅಮಿತಾ ದಾಸಕೋಡಿ, ಅಮಿತಾ ಕುದ್ರೆಬೆಟ್ಟು ಸಹಕರಿಸಿದರು

More from the blog

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ಮಾಜಿ ಸಚಿವ ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಮತದಾನ ಪ್ರಕ್ರಿಯೆ

ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಬಾರಿಯಂತೆ ಸೆಕ್ಟರ್‌ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಮನೆ-ಮನೆಗೆ ತೆರಳಿ ಮತದಾನ ಮಾಡಿಸುತ್ತಿದೆ. ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85...

ಮಾಜಿ ಸಿ.ಎಂ.ಕುಮಾರಸ್ವಾಮಿ ಹೇಳಿಕೆ ವಿರೋಧಿಸಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಬಂಟ್ವಾಳ: ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಾಜಿ ಸಿ.ಎಂ. ಕುಮಾರ ಸ್ವಾಮಿ ಅವರ ಹೇಳಿಕೆಯನ್ನು ವಿರೋಧಿಸಿ ಬಿಸಿರೋಡಿನ ಪ್ಲೈ ಓವರ್ ನ ಅಡಿಭಾಗದಲ್ಲಿ ಪ್ರತಿಭಟನೆ ನಡೆಯಿತು. ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು...