Thursday, April 18, 2024

ಲೊರೆಟ್ಟೊ ಚರ್ಚ್ ನಲ್ಲಿ ಕ್ರಿಸ್ಮಸ್ ಸಂಭ್ರಮ

ಲೋರೆಟ್ಟೊ ಮಾತಾ ಚರ್ಚ್ ನಲ್ಲಿ ಕ್ರಿಸ್ಮಸ್ ಸಂಭ್ರಮವನ್ನು ವಿಜ್ರಂಭನೆಯಿಂದ ಆಚರಿಸಲಾಯಿತು.

ಸಾಯಂಕಾಲದ ಬಲಿಪುಜೆಯಲ್ಲಿ ನೂರಾರು ಭಕ್ತಾದಿಗಳು ಭಕ್ತಿಯಿಂದ ಯೇಸು ಕ್ರಿಸ್ತರ ಜನನವನ್ನು ಬಲಿಪುಜೆಯೊಂದಿಗೆ ಆಚರಿಸಿದರು.

ಪ್ರಧಾನ ಧರ್ಮಗುರುಗಳಾಗಿ ಆನಿಲ್ ಫೆರ್ನಾಂಡಿಸ್‌, ಚರ್ಚ್ ಧರ್ಮಗುರುಗಳಾದ ವಂ.ಫ್ರಾನ್ಸಿಸ್ ಕ್ರಾಸ್ತಾ ರವರು ಲೋಕೊದ್ದಾರಕ್ಕಾಗಿ ದರೆಗೆ ಇಳಿದು ಬಂದ ಯೇಸು ಕ್ರಿಸ್ತರ ಜನನದ ಪ್ರಾಮುಖ್ಯತೆಯನ್ನು ಪ್ರವಚನ ಮೂಲಕ ತಿಳಿಸಿದರು.

ಲೊರೆಟ್ಟೊ ಅಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರಾದ ವಂ.ಜೇಸನ್ ಮೋನಿಸ್, ವಂ. , ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತಾದಿಗಳೊಂದಿಗೆ ಬಲಿಪೂಜೆಯನ್ನು ಅರ್ಪಿಸಿದರು.

ಕ್ರಿಸ್ಮಸ್ ಪ್ರಯುಕ್ತ ಧರ್ಮಗುರುಗಳು ತಮ್ಮ ಸಂದೇಶದಲ್ಲಿ , ಪಾಪದಲ್ಲಿ ಮುಳುಗಿ ಹೋದ ಮನುಜ ಕುಲವನ್ನು ಪ್ರೀತಿಯಿಂದ ಅಪ್ಪಿಕೊಳ್ಳಲು ದೇವರು ರೂಪಿಸಿದ ಯೋಜನೆಯ ದೇವರ ಕುವರ ಏಸುಕ್ರಿಸ್ತರ ಜನನ ಈ ಹಬ್ಬವು ದೇವರ ಅಗಾಧ ಪ್ರೀತಿಯನ್ನು ಮನುಜ ಕುಲಕ್ಕೆ ತೋರಿಸುತ್ತದೆ ಪ್ರೀತಿಸುವ ಹೃದಯಗಳಲ್ಲಿ ಪ್ರೀತಿ ಪಾತ್ರ ಯೇಸುವಿನ ಜನನವಾಗುತ್ತದೆ ಎಂದು ತಮ್ಮ ಸಂದೇಶ ನೀಡಿದರು

ಚರ್ಚ್ ಅವರಣದಲ್ಲಿ ಎಲ್ಇಡಿ ಪರದೆಯನ್ನು ಅಳವಡಿಸಲಾಗಿತ್ತು. ಸಂಬ್ರಮಕ್ಕೆ ಸಹಕರಿಸಿದ ಧಾನಿಗಳಿಗೆ ಗೌರವಪೂರ್ವಕ ವಾಗಿ ಅಲಂಕರಿಸಿದ ಮೇಣದ ಬತ್ತಿಗಳನ್ನು ವಿತರಿಸಲಾಯಿತು.

ಚರ್ಚ್ ನ್ನು ರಂಗು ರಂಗಿನ ವಿದ್ಯುದಿಪಾಲಂಕರದಿಂದ ಕಂಗೊಳಿಸಲಾಗಿತ್ತು. ಬಲಿ ಪೂಜೆಯ ಬಳಿಕ ಐಸಿವೈಮ್ ಸದಸ್ಯರು ಮನರಂಜನ ಕಾರ್ಯಕ್ರಮವನ್ನು ನೀಡಿದರು. ಏಸುಕ್ರಿಸ್ತರ ಜನ್ಮ ದಿನವನ್ನು ಸಾರುವ ಗೋದಲಿಯನ್ನು ಐಸಿವೈಮ್ ಸದಸ್ಯರು ನಿರ್ಮಿಸಿದರು.ಸಂಭ್ರಮದಲ್ಲಿ ಪಾಲ್ಗೊಂಡ ಎಲ್ಲಾ ಭಕ್ತಾದಿಗಳಿಗೆ ಕಾಫಿ ಹಾಗೂ ಕೇಕ್ ವಿತರಿಸಲಾಯಿತು. ಚರ್ಚ್ ಪಾಲನಾ ಮಂಡಳಿಯನೇತೃತ್ವದಲ್ಲಿ ಶಿಸ್ತುಬದ್ಧವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಧರ್ಮಗುರುಗಳು ಸಹಕರಿಸಿದ ಸರ್ವರರನ್ನು ವಂದಿಸಿದರು.

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: 21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿಮರ್ಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ವೈದ್ಯರ ಎಡವಟ್ಟು : ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...