Saturday, April 13, 2024

ಮೈರ, ಚೆನ್ನಯಕೋಡಿ: ಕೋಟಿ ಚೆನ್ನಯ ವೃತ್ತ ಲೋಕಾರ್ಪಣೆ

ಬಂಟ್ವಾಳ: ಬಂಟ್ವಾಳ ತಾಲೂಕು ಉಳಿ ಗ್ರಾಮದ ಕಕ್ಯಪದವಿನ ಮೈರ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ಬೆಳ್ಳಿ ಹಬ್ಬದ ಪ್ರಯುಕ್ತ ಮೈರ ಸತ್ಯ,ಧರ್ಮ ಜೋಡುಕರೆ ಬಯಲು ಕಂಬಳ ಸಮಿತಿ ಸಹಕಾರದಲ್ಲಿ ಬರ್ಕೆಜಾಲು ಚೆನ್ನಯಕೋಡಿ ಎಂಬಲ್ಲಿ ನಿರ್ಮಿಸಲಾದ ಕೋಟಿ ಚೆನ್ನಯ ವೃತ್ತ ಇದರ ಲೋಕಾರ್ಪಣೆ ಕಾರ್ಯಕ್ರಮ ರವಿವಾರ ನಡೆಯಿತು.

ಸಂಸದ ನಳಿನ್ ಕುಮಾರ್ ಕಟೀಲ್ ಅವರು ವೃತ್ತವನ್ನು ಲೋಕಾರ್ಪಣೆಗೊಳಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ೨೫ ವರ್ಷಗಳಿಂದ ಎಲ್ಲರನ್ನೂ ಒಗ್ಗೂಡಿಸಿಕೊಂಡು ಸಾಮಾಜಿಕ, ಧಾರ್ಮಿಕ ಕಾರ್ಯಗಳ ಜತೆ ತುಳುನಾಡಿನ ಸಂಸ್ಕೃತಿ, ಪರಂಪರೆ ಉಳಿಸುವ ಕಂಬಳ ನಡೆಸುವ ಕಾರ್ಯ ಮಾಡುತ್ತಿರುವ ಶ್ರೀ ರಾಮಾಂಜನೇಯ ಗೆಳೆಯರ ಬಳಗ ಎಲ್ಲರಿಗೂ ಮಾದರಿಯಾಗಿದೆ ಎಂದರು.

ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪಾಡಿಗುತ್ತು ಅವರು ಸಭಾಧ್ಯಕ್ಷ ತೆ ವಹಿಸಿ ಮಾತನಾಡಿ, ಮೈರದ ಜನತೆಯ ಜತೆ ನಿರಂತರ ಒಡನಾಟವಿದ್ದು ಪ್ರೀತಿ ನೀಡಿದ್ದಾರೆ. ಅವರ ಎಲ್ಲ ಕಾರ್ಯಗಳಿಗೆ ಸಹಕಾರ ನೀಡಲಾಗುವುದು ಎಂದರು.

ಮಾಜಿ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಽಕಾರಿ ಜಗನ್ನಾಥ ಬಂಗೇರ ನಿರ್ಮಲ್ ನರಿಕೊಂಬು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಕಿಯೋನಿಕ್ಸ್ ನಿಗಮದ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಅವರು ಮಾತನಾಡಿ,ಕೋಟಿ ಚೆನ್ನಯರ ಖ್ಯಾತಿ ಅವರ ಜನ್ಮ ಸ್ಥಾನ ಪಡುಮಲೆಯಿಂದ ಆರಂಭಗೊಂಡು ದೇಶ ವಿದೇಶಗಳಲ್ಲಿ ಪ್ರಖ್ಯಾತಿ ಪಡೆದಿದೆ. ಅವರು ನಮ್ಮ ಜಿಲ್ಲೆಯ ಶಕ್ತಿಯಾಗಿದ್ದು ಅವರ ಚರಿತ್ರೆಯನ್ನು ಎಲ್ಲರೂ ತಿಳಿಯಬೇಕಾಗಿದೆ ಎಂದರು.

ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ,ತಾ.ಪಂ. ಮಾಜಿ ಸದಸ್ಯ ಮಾಧವ ಮಾವೆ, ಉದ್ಯಮಿ ನಟೇಶ್ ಪೂಜಾರಿ, ಉಳಿ ಗ್ರಾ.ಪಂ.ಅಧ್ಯಕ್ಷೆ ರೇವತಿ ಮುದಲಾಡಿ, ಉಪಾಧ್ಯಕ್ಷ ವಸಂತ ಸಾಲ್ಯಾನ್ ರಾಮನಗರ, ಮಾಜಿ ಉಪಾಧ್ಯಕ್ಷ ಚಿದಾನಂದ ರೈ ಕಕ್ಯ, ಸರಪಾಡಿ ಗ್ರಾ.ಪಂ.ಸದಸ್ಯ ಧನಂಜಯ ಶೆಟ್ಟಿ, ಪ್ರಮುಖರಾದ ನಾರಾಯಣ ಪೂಜಾರಿ ಬೊಳ್ಳುಕಲ್ಲು,ಶಿವಪ್ಪ ಪೂಜಾರಿ ಜೇಡರಬೆಟ್ಟು,ಜಿನ್ನಪ್ಪ ಪೂಜಾರಿ ಕುಕ್ಕಾಜೆ, ಪೂವಪ್ಪ ಪೂಜಾರಿ ಬೊಳ್ಳುಕಲ್ಲು, ಕಂಬಳ ಸಮಿತಿ ಕಾರ್ಯಾಧ್ಯಕ್ಷರಾದ ತುಷಾರ್ ಭಂಡಾರಿ, ಲತೀಶ್ ಕುಕ್ಕಾಜೆ, ಪದಾಽಕಾರಿಗಳಾದ ಸುರೇಶ್ ಮೈರ, ಶಾಂತಪ್ಪ ಪೂಜಾರಿ ಹಟದಡ್ಕ, ಉಮೇಶ್ ಪೂಜಾರಿ,ಪುರುಷೋತ್ತಮ ಪೂಜಾರಿ ಪಲ್ಕೆ, ರಂಜಿತ್ ಮೈರಾ,ಕುಶಲ ಮೈರ, ರವೀಂದ್ರ ಅಡಪ ದಿಡಿಂಬಿಲ , ಶ್ರೀ ರಾಮಾಂಜನೇಯ ಗೆಳೆಯರ ಬಳಗದ ಅಧ್ಯಕ್ಷ ಸುರೇಂದ್ರ ಪೂಜಾರಿ ಕಂಚಲಪಲ್ಕೆ, ವಸಂತ ಪೂಜಾರಿ ಡೆಚ್ಚಾರು, ಚೇತನ್ ಊರ್ದೊಟ್ಟು , ಪುರಂದರ ಕುಕ್ಕಾಜೆ ಮೊದಲಾದವರಿದ್ದರು.

ಶಿವಾನಂದ ಮೈರಾ ಪ್ರಸ್ತಾವಿಸಿ, ಸ್ವಾಗತಿಸಿದರು.ಪ್ರಶಾಂತ್ ಮೈರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.ಬಳಿಕ ಬರ್ಕೆಜಾಲು ಜೋಡುಕರೆಯಲ್ಲಿ ಸಬ್ ಜೂನಿಯರ್ ವಿಭಾಗದ ಮರಿಕೋಣಗಳ ಓಟದ ಸ್ನೇಹ ಕೂಟ ಕಂಬಳ ನಡೆಯಿತು. ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.ರಾತ್ರಿ ಸಸಿಹಿತ್ಲು ಮೇಳದವರಿಂದ ಕೋಟಿ ಚೆನ್ನಯ ಯಕ್ಷಗಾನ ಪ್ರದರ್ಶನ ನಡೆಯಿತು.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...