Sunday, April 14, 2024

ನರ್ಸಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ಕಾಲೇಜಿನ ಹಾಸ್ಟೆಲ್ ನಲ್ಲೇ ನರ್ಸಿಂಗ್ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ಕೇರಳದ ಅಲೆಪ್ಪಿ ನಿವಾಸಿಯಾದ ಸಚಿನ್ ಸಜು ಎನ್ನಲಾಗಿದೆ.

ಸಚಿನ್ ಪ್ರಥಮ ವರ್ಷದ ನರ್ಸಿಂಗ್ ವಿದ್ಯಾರ್ಥಿಯಾಗಿದ್ದು ಕಳೆದ ತಿಂಗಳಷ್ಟೇ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪ್ರವೇಶ ಪಡೆದಿದ್ದ ಎನ್ನಲಾಗಿದೆ.

ಎರಡು ದಿನಗಳಿಂದ ಅರೋಗ್ಯ ಸಮಸ್ಯೆಯಿಂದಾಗಿ ತರಗತಿಗೆ ಹಾಜರಾಗಿರಲಿಲ್ಲ ಆದರೆ ಡಿಸೆಂಬರ್ 8 ರಂದು ಹಾಸ್ಟೆಲ್ ರೂಮ್ ನಲ್ಲಿ ಯಾರು ಇಲ್ಲದ ವೇಳೆ ಬೆಡ್‌ಶೀಟ್ ಬಳಸಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಈ ಕುರಿತು ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ

More from the blog

ಪ್ರಧಾನಿ ಮೋದಿ ರೋಡ್ ಶೋ ಸಮಯ ಬದಲಾವಣೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಸಮಯದಲ್ಲಿ ಬದಲಾವಣೆಯಾಗಿದ್ದು, ಏ.14ರಂದು ಸಂಜೆ 7.45ಕ್ಕೆ ರೋಡ್ ಶೋ ಆರಂಭವಾಗಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಚುನಾವಣಾ ಸಂಚಾಲಕ ವಿ. ಸುನಿಲ್ ಕುಮಾರ್...

ಕುಮಾರಧಾರಾ ನದಿಯಲ್ಲಿ ಮೊಸಳೆ ಮೃತದೇಹ ಪತ್ತೆ

ಸುಬ್ರಹ್ಮಣ್ಯ: ಕುಮಾರಧಾರಾ ನದಿಯ ಪಂಜ – ಕಡಬ ಸಂಪರ್ಕ ರಸ್ತೆಯಲ್ಲಿ ಸಿಗುವ ಪುಳಿಕುಕ್ಕು ಸೇತುವೆಯ ಕೆಳಭಾಗದಲ್ಲಿ ಮೊಸಳೆಯ ಮೃತದೇಹ ಪತ್ತೆಯಾಗಿದೆ. ಶುಕ್ರವಾರ ನದಿಯ ಒಂದು ಬದಿಯ ನೀರಿನಲ್ಲಿ ಅಂದಾಜು 1.5 – 2 ವರ್ಷದ ಮೊಸಳೆಯ...

ನಾಳೆ ಮಂಗಳೂರಿಗೆ ಪ್ರಧಾನಿ ಮೋದಿ : ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿರವರು ಏಪ್ರಿಲ್ 14 ರಂದು ಮಂಗಳೂರಿನ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್‌ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಮಂತ್ರಿಗಳ ಭದ್ರತೆಯ ದೃಷ್ಟಿಯಿಂದ ಹಾಗೂ ಸಂಚಾರ ಸುವ್ಯವಸ್ಥೆಗೆ...

ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್‌ ಗೆ ಆದೇಶ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ...