Sunday, April 7, 2024

ಮಂಗಳೂರು-ಮಡಗಾಂವ್ ವಂದೇ ಭಾರತ್​ ಎಕ್ಸ್‌ಪ್ರೆಸ್‌ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಮಂಗಳೂರು: ಮಂಗಳೂರು- ಮಡಗಾಂವ್ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದರು.

ತಾತ್ಕಾಲಿಕ ವೇಳಾಪಟ್ಟಿಯಂತೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ ನಿಂದ ಬೆಳಿಗ್ಗೆ 8:30ಕ್ಕೆ ನಿರ್ಗಮಿಸಿ, ಮಧ್ಯಾಹ್ನ 1:05 ಕ್ಕೆ ಮಡಗಾಂವ್‌ ಗೆ ತಲುಪುತ್ತದೆ. ಮಡಗಾಂವ್‌ ನಿಂದ ಸಂಜೆ 6:10ಕ್ಕೆ ಹೊರಟು, ರಾತ್ರಿ 10:45ಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣ ತಲುಪಲಿದೆ. ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲು ಮಂಗಳೂರು ಸೆಂಟ್ರಲ್ ಸ್ಟೇಷನ್ ನಲ್ಲಿ ನವೀಕರಿಸಿದ ಪಿಟ್ ಲೈನ್ ನಲ್ಲಿ ರಾತ್ರಿ ತಂಗಲಿದೆ.

ಇದೇ ವೇಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಎರಡು ಅಮೃತ್ ಭಾರತ್ ರೈಲುಗಳು ಮತ್ತು ಮಂಗಳೂರು ಸೇರಿ ಆರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು.

More from the blog

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ...

ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನ ಜಖಂಗೊಳಿಸಿದ ಭಕ್ತರು

ಮುಲ್ಕಿ: ದೇವರ ರಥ ಹೋಗುವ ದಾರಿಯಲ್ಲಿದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ಇತ್ತೀಚೆಗೆ ನಡೆದಿದ್ದು, ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ. ಜಾತ್ರೆಯಲ್ಲಿ ದೇವರ ರಥ ಹೋಗುವ...

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಅರ್.ಪೂಜಾರಿ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮುಂಭಾಗದಿಂದ ಎ.ಬಿ.ಶೆಟ್ಟಿ ಸರ್ಕಲ್ ವರೆಗೆ...