Saturday, April 6, 2024

5 ಲಕ್ಷ ರೂ. ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಅರೆಸ್ಟ್

ಹೊಸ ವರ್ಷಾಚರಣೆ​ ಪಾರ್ಟಿ ಹಿನ್ನಲೆ ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಪೆಡ್ಲರ್​ನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮಂಗಳೂರು ಹೊರವಲಯದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಬಳಿ ನಡೆದಿದೆ.

ಬಂಧಿತ ಆರೋಪಿ ಮಹಮ್ಮದ್ ರಮೀಜ್ ಅಲಿಯಾಸ್ ಲೆಮೇನ್ ಟಿ ರಮೀಜ್ ಎಂಬಾತನಾಗಿದ್ದು ಉಳ್ಳಾಲ ಬಸ್ತಿ ಪಡ್ಪು ನಿವಾಸಿಯಾಗಿದ್ದಾನೆ.

ಬೆಂಗಳೂರಿನಿಂದ ಮಾದಕ ವಸ್ತುವನ್ನು ಖರೀದಿ ಮಾಡಿ ತಂದು ಉಳ್ಳಾಲ ಪರಿಸರದಲ್ಲಿ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂದು ಬಂದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

5 ಲಕ್ಷ ರೂ,. ಮೌಲ್ಯದ 100 ಗ್ರಾಂ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ,ಮೊಬೈಲ್ ಫೋನ್ ಗಳನ್ನು ವಶ ಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 5,11,000 ರೂ. ಎಂದು ಅಂದಾಜಿಸಲಾಗಿದೆ.

ಈತನ ಮೇಲೆ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದರೋಡೆ, ದರೋಡೆಗೆ ಸಂಚು, ಕೊಲೆಯತ್ನ ಹಾಗೂ ಕೊಣಾಜೆ ಠಾಣೆಯಲ್ಲಿ ದರೋಡೆ ಮಾಡಿದ ಬಗ್ಗೆ ಪ್ರಕರಣಗಳು ದಾಖಲಾಗಿವೆ.

More from the blog

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ...

ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನ ಜಖಂಗೊಳಿಸಿದ ಭಕ್ತರು

ಮುಲ್ಕಿ: ದೇವರ ರಥ ಹೋಗುವ ದಾರಿಯಲ್ಲಿದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ಇತ್ತೀಚೆಗೆ ನಡೆದಿದ್ದು, ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ. ಜಾತ್ರೆಯಲ್ಲಿ ದೇವರ ರಥ ಹೋಗುವ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಅರ್.ಪೂಜಾರಿ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮುಂಭಾಗದಿಂದ ಎ.ಬಿ.ಶೆಟ್ಟಿ ಸರ್ಕಲ್ ವರೆಗೆ...