Monday, April 8, 2024

ಡಿ.23 ರಂದು ನೆಟ್ಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ತರಗತಿ ಕೊಠಡಿ ಉದ್ಘಾಟನೆ ಹಾಗೂ ಶಾಲಾ “ವಜ್ರ ಸಂಭ್ರಮ -2023” ಕಾರ್ಯಕ್ರಮ

ಬಂಟ್ವಾಳ ತಾಲೂಕಿನ ಗೋಳ್ತ ಮಜಲು ಗ್ರಾಮದ ನೆಟ್ಲ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಇಲ್ಲಿ ನೂತನವಾಗಿ 27.80 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ತರಗತಿ ಕೊಠಡಿ ಉದ್ಘಾಟನೆ ಹಾಗೂ ಶಾಲಾ “ವಜ್ರ ಸಂಭ್ರಮ -2023 ” ಕಾರ್ಯಕ್ರಮ ದಿನಾಂಕ 23-12-2023 ನೇ ಶನಿವಾರ ಬೆಳಿಗ್ಗೆ ಗಂಟೆ 9 ರಿಂದ ಬಂಟ್ವಾಳ ಶಾಸಕರಾದ ರಾಜೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಜರಗಳಿರುವುದು.

ಕರ್ನಾಟಕ ವಿಧಾನ ಸಭೆಯ ವಿಧಾನಸಭಾಧ್ಯಕ್ಷರಾದ ಯು ಟಿ ಖಾದರ್ ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘನ ಉಪಸ್ಥಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ದಿನೇಶ್ ಗುಂಡೂರಾವ್ ವಿವೇಕ ತರಗತಿ ಕೊಠಡಿಯ ಉದ್ಘಾಟನೆ ನೆರವೇರಿಸಲಿದ್ದು ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಲೋಕಸಭಾ ಸಂಸದರಾದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದರಾದ ವೀರೇಂದ್ರ ಹೆಗ್ಡೆ, ಪುತ್ತೂರು ವಿಧಾನಸಭಾ ಕ್ಷೇತ್ರ ಶಾಸಕ ಅಶೋಕ ರೈ,ಕರ್ನಾಟಕ ರಾಜ್ಯ ವಿಧಾನಪರಿಷತ್ ಸದಸ್ಯರುಗಳಾದ ಕೋಟ ಶ್ರೀನಿವಾಸ್ ಪೂಜಾರಿ, ಬಿ ಎಂ ಫಾರೂಕ್, ಹರೀಶ್ ಕುಮಾರ್, ಎಸ್ ಎಲ್ ಭೋಜೆ ಗೌಡ, ಪ್ರತಾಪ್ ಸಿಂಹ ನಾಯಕ್, ಮಂಜುನಾಥ ಬಂಡಾರಿ ಭಾಗವಹಿಸಲಿದ್ದು, ವಿಶೇಷ ಆವಾನಿತರಾಗಿ ಗೋಳ್ತ ಮಜಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರೇಮ, ಉಪಾಧ್ಯಕ್ಷರಾದ ಜಯಂತ ಮುಕ್ಕಾರ್, ಗ್ರಾಮ ಪಂಚಾಯತ್ ಸದಸ್ಯರುಗಳಾದ ಅಭಿಷೇಕ್, ಸವಿತಾ, ದೀಪಕ್ ಕುಮಾರ್, ಹರಿಣಾಕ್ಷಿ,ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ನೋಣಯ್ಯ ನಾಯ್ಕ, ದೈಹಿಕ ಪರಿವೀಕ್ಷಕರಾದ ವಿಷ್ಣು ನಾರಾಯಣ ಹೆಬ್ಬಾರ್, ಕ್ಷೇತ್ರ ಸಮನ್ವಯ ಅಧಿಕಾರಿ ರಾಘವೇಂದ್ರ ಬಲ್ಲಾಳ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಜಯ ಶಂಕರ್ ಆಳ್ವಾ ಎಂ , ಶಿಕ್ಷಣ ಸಂಯೋಜಕಿ ಪ್ರತಿಮಾ ವೈ ವಿ, ಕಲ್ಲಡ್ಕ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಜ್ಯೋತಿ, ಮೊದಲಾದವರು ಗೌರವ ಉಪಸ್ಥಿತಇರಲಿದ್ದು, ಸಭಾ ಕಾರ್ಯಕ್ರಮದ ಬಳಿಕ ನೆಟ್ಲ ಶಾಲಾ ಮಕ್ಕಳಿಂದ ರಸಮಂಜರಿ ಕಾರ್ಯಕ್ರಮ, ಸಾಯಂಕಾಲ ಗಂಟೆ 6 ರಿಂದ ನೆಟ್ಲ ಹಾಗೂ ಬೊಮ್ಮನಕೋಡಿ ಅಂಗನವಾಡಿ ಪುಟಾಣಿಗಳಿಂದ, ನೆಟ್ಲ ಶಾಲಾ ಮಕ್ಕಳಿಂದ, ಹಿರಿಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿರುವುದು .

ರಾತ್ರಿ ಗಂಟೆ 9:00 ರಿಂದ ಹಿರಿಯ ವಿದ್ಯಾರ್ಥಿಗಳು ಹಾಗೂ ರಂಗವಲ್ಲಿ ಕಲಾವಿದರು ನೆಟ್ಲ ಇವರಿಂದ ರಹಸ್ಯಮಯ ತುಳು ನಾಟಕ “ಗುಡ್ಡೆಡ್ ಭೂತ ಉಂಡುಗೆ ” ನಡೆಯಲಿರುವುದು ಎಂದು ನೆಟ್ಲ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಭಾಸ್ಕರ್ ಕುಲಾಲ್ ತಿಳಿಸಿರುತ್ತಾರೆ.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...