Saturday, April 6, 2024

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಐವರು ಆರೋಪಿಗಳ ಪತ್ತೆಗೆ ಎನ್‌ಐಎ ಮನವಿ

ಸುಳ್ಯ: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಐವರು ಆರೋಪಿಗಳು ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮನವಿ ಮಾಡಿದೆ.

ಬೆಳ್ಳಾರೆಯ ಬೂಡು ನಿವಾಸಿ ಎಂ.ಡಿ.ಮುಸ್ತಫ, ನೆಕ್ಕಿಲಾಡಿ ಅಗ್ನಾಡಿ ನಿವಾಸಿ ಮಸೂದ್ ಅಗ್ನಾಡಿ ಮಸೂದ್ ಕೆ.ಎ., ಬಂಟ್ವಾಳ ತಾಲೂಕಿನ ಕೊಡಾಜೆ ನಿವಾಸಿ ಮೊಹಮ್ಮದ್ ಶರೀಫ್ ಕೊಡಾಜೆ, ಸುಳ್ಯದ ಕಲ್ಲುಮುಟ್ಲು ನಿವಾಸಿ ಉಮ್ಮರ್ ಆರ್. ಉಮ್ಮರ್‌ ಫಾರೂಕ್‌, ಬೆಳ್ಳಾರೆ ನಿವಾಸಿ ಅಬೂಬಕ್ಕರ್‌ ಸಿದ್ದಿಕ್‌ ಎಂಬ ಐವರು ಆರೋಪಿಗಳು ಈ ಪ್ರಕರಣದಲ್ಲಿ ಭಾಗವಾದ ಆರೋಪದಲ್ಲಿ ಎನ್‌ಐಎ ತಂಡಕ್ಕೆ ಬೇಕಾದವರಾಗಿದ್ದರೆ,

ಸಂಖ್ಯೆಯನ್ನು ಸಂಪರ್ಕಿಸುವ ಮೂಲಕ ಈ ಆರೋಪಿಗಳು ಕಂಡುಬಂದಲ್ಲಿ ಅಥವ ಅವರ ಇರುವಿಕೆಯ ಕುರಿತಾಗಿ ಮಾಹಿತಿ ಇದ್ದಲ್ಲಿ ಒದಗಿಸಿದ ವಾಟ್ಸಾಪ್ (9497715294) ಸಂಖ್ಯೆಯನ್ನು ಸಂಪರ್ಕಿಸುವಂತೆ ಸಾರ್ವಜನಿಕರನ್ನು ಎನ್ ಐಎ ವಿನಂತಿಸಿದೆ. ಮಾಹಿತಿ ನೀಡಿದವರಿಗೆ ಸೂಕ್ತ ಬಹುಮಾನ ನೀಡಲಾಗುವುದು ಎಂದು ತಿಳಿಸಿದೆ.

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಪದ್ಮನಾಭ ಸೇವಂತ ಅವರದು, ಆತ್ಮಹತ್ಯೆಯಲ್ಲ, ವ್ಯವಸ್ಥಿತ ಕೊಲೆ ಶಂಕೆ: ಪ್ರಕಾಶ್ ಶೆಟ್ಟಿ ತನಿಖೆಗೆ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಪದ್ಮನಾಭ‌ ಸೇವಂತ ಎಂಬವರ ಸಾವಿನ ಸುತ್ತ ಅನುಮಾನಗಳು ವ್ಯಕ್ಯವಾಗಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಕಂಡು ಬಂದರೂ ಇದನ್ನು ವಿಮರ್ಶೆ ಮಾಡಿದರೆ ಇದೊಂದು ಕೊಲೆ...

ಕರ್ನಾಟಕದ 28 ಲೋಕಸಭಾ ಕ್ಷೇತ್ರದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ಯಾರು…?

ಕರ್ನಾಟಕದ 28 ಲೋಕಸಭಾ ಕ್ಷೇತ್ರಕ್ಕೂ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದ್ದು, ಚುನಾವಣಾ ರಣರಂಗ ರಂಗೇರಿದೆ. ಯಾವ್ಯಾವ ಲೋಕಸಭಾ ಕ್ಷೇತ್ರದಿಂದ ಅಂತಿಮವಾಗಿ ಕಣಕ್ಕಿಳಿದ ಅಭ್ಯರ್ಥಿಗಳು ಯಾರು ಅನ್ನೋ ಕಂಪ್ಲೀಟ್‌ ಮಾಹಿತಿ...

ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಸ್ಕೂಟರ್ ನಲ್ಲಿದ್ದ ಯುವತಿ ಗಂಭೀರ

ಬೆಳ್ತಂಗಡಿ : ದ್ವಿಚಕ್ರ ವಾಹನ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ನಗರದ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದಲ್ಲಿ...