Saturday, April 6, 2024

ಪುಣಚ ಶ್ರೀದೇವಿ ವಿದ್ಯಾ ಕೇಂದ್ರದ ವಾರ್ಷಿಕೋತ್ಸವ

ವಿಟ್ಲ: ಪುಣಚ ಶ್ರೀದೇವಿ ವಿದ್ಯಾ ಕೇಂದ್ರದ ಶ್ರೀ ದೇವಿ ಪ್ರೌಢಶಾಲೆ, ಪ್ರಾಥಮಿಕ ಶಾಲೆ, ಶಿಶು ಮಂದಿರದ ವಿದ್ಯಾರ್ಥಿಗಳ ವಾರ್ಷಿಕೋತ್ಸವ ನಡೆಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಹಿರಿಯ ವಕೀಲ ಕೆ.ಪಿ ವಾಸುದೇವ ರಾವ್ ಮಾತನಾಡಿ, ಶಾಲೆಯಲ್ಲಿ ನೀಡಲ್ಪಡುವ ಶಿಕ್ಷಣ ವಿದ್ಯಾರ್ಥಿಗಳ ಬೌದ್ಧಿಕ ಉನ್ನತಿ, ಉತ್ತಮ ಸಾಮಾಜಿಕ ಬದುಕಿಗೆ ಪೂರಕವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಶ್ರೇಷ್ಠ ಜೀವನದ ಬಗ್ಗೆ ಕನಸಿರಬೇಕು. ವಿದ್ಯಾರ್ಥಿಗಳು ಶಾಲಾ ಗ್ರಂಥಾಲಯವನ್ನು ಸದ್ವಿನಿಯೋಗಿಸಬೇಕು ಎಂದರು.

ಜೀವನಮೌಲ್ಯಗಳನ್ನು ಕಲಿಸುವ ಶಾಲೆಯ ಮೂಲಕ ಪಡೆದ ಶಿಕ್ಷಣ, ಬದುಕಿನ ಶಿಕ್ಷಣವನ್ನೂ ಕಲಿಸುತ್ತದೆ ಎಂದು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಬೆಂಗಳೂರಿನ ಇಂಜಿನಿಯರ್ ವೇದವ್ಯಾಸ ಕಟ್ಟೆ ತಿಳಿಸಿದರು.

ಶಿಕ್ಷಣದ ವಿಶಾಲತೆ, ಮೂಲ ಉದ್ದೇಶ ವಿದ್ಯಾರ್ಥಿಗಳಿಗೆ ಅರ್ಥವಾಗಬೇಕು. ಜೀವನಮೌಲ್ಯವಿರದ ಶಿಕ್ಷಣ ನಿರರ್ಥಕ. ವಿದ್ಯಾರ್ಥಿಗಳ ಪ್ರತಿಭೆಗಳ ಮಧ್ಯೆ ಹೋಲಿಕೆ ಸಲ್ಲದು ಎಂದು ಕೆಯ್ಯೂರು ಪದವಿ ಕಾಲೇಜು ಪದವೀಧರ ಶಿಕ್ಷಕಿ ನಳಿನಿ ಅಭಿಪ್ರಾಯ ಪಟ್ಟರು.

ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಜಯ ಶ್ಯಾಂ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ರಜನಿ ವರದಿ ವಾಚಿಸಿದರು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಲೋಕೇಶ್ ವಂದಿಸಿದರು. ಪ್ರಾಥಮಿಕ ಶಾಲಾ ಸಹ ಶಿಕ್ಷಕಿ ದೀಕ್ಷಾ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕರಾದ ಪ್ರಸನ್ನ, ದಿನೇಶ್, ಶೀಲಾ, ಸವಿತಾ ಇನ್ನಿತರರು ಸಹಕರಿಸಿದರು.

ಇದೇ ಸಂದರ್ಭದಲ್ಲಿ ಪಠ್ಯ, ಪಠ್ಯೇತರ,ಕ್ರೀಡಾ ಸಾಧಕರನ್ನು ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

More from the blog

ಕಲ್ಲಡ್ಕ: ಖಾಸಗಿ ಬಸ್ಸಿಗೆ ಪಿಕಪ್ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...

ವಿಟ್ಲ : ಮಹಿಳೆ ಆತ್ಮಹತ್ಯೆ

ವಿಟ್ಲ: ವಿಟ್ಲಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡು ನಿವಾಸಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿ.ರಾಮಣ್ಣ ನಾಯ್ಕ ಅವರ ಪತ್ನಿ ಸುಶೀಲಾ ಅವರು ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನೀರಿಗಾಗಿ ಪ್ರತಿಭಟನೆ 

ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ೩ನೇ ವಾರ್ಡ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, ಜನಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯಿತಿ ಯಾವುದೇ ಸ್ಪಂದನೆ ನೀಡುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಕೊಡ, ಬಕೆಟ್ ಹಿಡಿದು...

ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಪದ್ಮನಾಭ ಸೇವಂತ ಅವರದು, ಆತ್ಮಹತ್ಯೆಯಲ್ಲ, ವ್ಯವಸ್ಥಿತ ಕೊಲೆ ಶಂಕೆ: ಪ್ರಕಾಶ್ ಶೆಟ್ಟಿ ತನಿಖೆಗೆ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಪದ್ಮನಾಭ‌ ಸೇವಂತ ಎಂಬವರ ಸಾವಿನ ಸುತ್ತ ಅನುಮಾನಗಳು ವ್ಯಕ್ಯವಾಗಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಕಂಡು ಬಂದರೂ ಇದನ್ನು ವಿಮರ್ಶೆ ಮಾಡಿದರೆ ಇದೊಂದು ಕೊಲೆ...