Saturday, April 6, 2024

ಪುತ್ತೂರು ನಗರಸಭಾ ಚುನಾವಣೆ ; ಬಿಜೆಪಿಯ ರಮೇಶ್, ಕಾಂಗ್ರೆಸ್ ನ ದಿನೇಶ್ ಜಯಭೇರಿ

ಪುತ್ತೂರು: ನಗರಸಭಾ ತೆರವಾದ ಎರಡು ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ವಾರ್ಡ್ -11 ಬಿಜೆಪಿಯ ರಮೇಶ್ ರೈ ಹಾಗೂ ವಾರ್ಡ್-1ರಲ್ಲಿ ಕಾಂಗ್ರೆಸ್ ನ ದಿನೇಶ್ ಶೇವಿರೆ ಅವರು ಗೆಲುವು ಸಾಧಿಸಿದ್ದಾರೆ.

ವಾರ್ಡ್ 11 ರಲ್ಲಿ ಚಲಾವಣೆಯಾದ ಒಟ್ಟು 1053 ಮತಗಳಲ್ಲಿ ಬಿಜೆಪಿಯ ರಮೇಶ್ ರೈ 431, ಕಾಂಗ್ರೆಸ್ ನ ದಾಮೋದರ ಭಂಡಾರ್ ಕರ್ 400, ಪುತ್ತಿಲ ಪರಿವಾರದ ಚಿಂತನ್ 216 ಮತಗಳನ್ನು ಪಡೆದುಕೊಂಡಿದ್ದಾರೆ. 6 ಮತ ನೋಟಕ್ಕೆ ಚಲಾವಣೆಯಾಗಿದೆ. ಬಿಜೆಪಿ ರಮೇಶ್ ರೈ 31 ಮತಗಳ ಅಂತದಲ್ಲಿ ಜಯ ಗಳಿಸಿದ್ದಾರೆ.

ವಾರ್ಡ್ 1ರಲ್ಲಿ ಚಲಾವಣೆಯಾದ ಒಟ್ಟು 958 ಮತಗಳಲ್ಲಿ ಕಾಂಗ್ರೆಸ್ ನ ದಿನೇಶ್ ಶೇವಿರೆ 427, ಬಿಜೆಪಿಯ ಸುನೀತಾ 219 ಹಾಗೂ ಪುತ್ತಿಲ ಪರಿವಾರದ ಅನ್ನಪೂರ್ಣ 308 ಮತಗಳನ್ನು ಪಡೆದುಕೊಂಡಿದ್ದಾರೆ. 4 ಮತ ನೋಟಕ್ಕೆ ಚಲಾವಣೆಯಾಗಿದೆ. ಕಾಂಗ್ರೆಸ್ ನ ದಿನೇಶ್ ಶೇವಿರೆ 119 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ.

More from the blog

ಕಡಬ: ಚೇರು ಪ್ರದೇಶದ ಮನೆಗೆ ಶಂಕಿತರ ಭೇಟಿ : ಊಟ ಮಾಡಿ, ಸಾಮಗ್ರಿ ಪಡೆದು ತೆರಳಿದ ಶಂಕಿತರು

ಸುಬ್ರಹ್ಮಣ್ಯ: ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ಮನೆಯೊಂದಕ್ಕೆ ಗುರುವಾರ ರಾತ್ರಿ ವೇಳೆ ಶಂಕಿತರ ತಂಡ ಆಗಮಿಸಿ ಊಟ, ಮಾಡಿ ದಿನಸಿ ಸಾಮಾಗ್ರಿಗಳನ್ನು ಪಡೆದು ತೆರಳಿರುವ ವಿಷಯ ಶುಕ್ರವಾರ ಸಂಜೆ ವೇಳೆಗೆ ಬೆಳಕಿಗೆ ಬಂದಿದೆ. ತಾಲೂಕಿನ...

ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲು ಗಡಿಪಾರು – ಸರಕಾರದ ಹಿಂದೂ ವಿರೋಧಿ ಧೋರಣೆ ನೀತಿಗೆ ಪ್ರಸಾದ್ ಕುಮಾರ್ ರೈ ಖಂಡನೆ

ಬಂಟ್ವಾಳ: ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕರಾದ ಭರತ್ ಕುಮ್ಡೇಲು ಅವರ ಗಡಿಪಾರು ಅದೇಶ ರಾಜಕೀಯ ಪ್ರೇರಿತ ಷಡ್ಯಂತ್ರವಾಗಿದ್ದು,ಸರಕಾರದ ಹಿಂದೂ ವಿರೋಧಿ ಧೋರಣೆ ನೀತಿಯನ್ನು ವಿಶ್ವಹಿಂದೂ ಪರಿಷತ್ ಬಂಟ್ವಾಳ ‌ಪ್ರಖಂಡದ ಅಧ್ಯಕ್ಷ ನ್ಯಾಯವಾದಿ ಪ್ರಸಾದ್...

ಮದುವೆಗೆ ತೆರಳುತ್ತಿದ್ದ ಬಸ್ ಹಾಗೂ ಕಂಟೈನರ್ ವಾಹನದ ಮಧ್ಯೆ ಭೀಕರ ಅಪಘಾತ : ಹಲವರಿಗೆ ಗಾಯ

ನೆಲ್ಯಾಡಿ: ಖಾಸಗಿ ಬಸ್ ಹಾಗೂ ಕಂಟೈನರ್ ವಾಹನದ ನಡುವೆ ಅಪಘಾತ ಸಂಭವಿಸಿ ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ನಡೆದಿದೆ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹೊರಟ...

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ; ಪ್ರಕರಣ ದಾಖಲು

ಸುಳ್ಯ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ. ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದ ಉತ್ತರ ಕರ್ನಾಟಕ ಮೂಲದ ಕಾರ್ಮಿಕ ಕುಟುಂಬದ ಬಾಲಕಿಗೆ ಅದೇ ಭಾಗದ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದು,...