Saturday, April 6, 2024

ಜ.1ರಿಂದ 15ರವರೆಗೆ ಪ್ರತಿ ಮನೆಗಳಿಗೆ ಪವಿತ್ರ ಮಂತ್ರಾಕ್ಷತೆ ವಿತರಣೆ ಅಭಿಯಾನ

ಮಂಗಳೂರು: ಜನವರಿ 22ರ ರಾಮಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಅಯೋಧ್ಯೆಯಿಂದ ಬಂದಂತಹ ಪವಿತ್ರ ಮಂತ್ರಾಕ್ಷತೆಯನ್ನು ರಾಜ್ಯದ ಎಲ್ಲಾ ಗ್ರಾಮಗಳ ಪ್ರತಿ ಮನೆಗಳಿಗೆ ವಿತರಿಸುವ ಅಭಿಯಾನವು ಜನವರಿ 1ರಿಂದ 15ರವರೆಗೆ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪುವೆಲ್ ಹೇಳಿದ್ದಾರೆ.

ಮಂತ್ರಾಕ್ಷತೆಯೊಂದಿಗೆ ಶ್ರೀ ರಾಮ ದೇವರ ಭಾವಚಿತ್ರ ಮತ್ತು ಆಮಂತ್ರಣ ಪತ್ರಿಕೆ ಪತ್ರವನ್ನು ನೀಡಲಿದ್ದು, ಮಂತ್ರಾಕ್ಷತೆ ವಿತರಣೆ ಸಂದರ್ಭದಲ್ಲಿ ಯಾರೂ ಕೂಡ ಹಣವನ್ನು ನೀಡಿವಂತಿಲ್ಲ. ಯಾವುದೇ ಹಣವನ್ನು ಅಥವಾ ಯಾವುದೇ ವಸ್ತು ರೂಪದಲ್ಲಿ ನೀಡಬಾರದು. ಇದೊಂದು ಅಭಿಯಾನವಾಗಿರುವ ಕಾರಣ ಯಾವುದೇ ರೀತಿಯ ವ್ರತಾಚಾರಣೆ, ಕಟ್ಟು ಪಾಡು ನಿಯಮಗಳು ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಯೋದ್ಯೆಯಲ್ಲಿ ರಾಮ ಪ್ರಾಣಪ್ರತಿಷ್ಠೆಯ ಸಂದರ್ಭದಲ್ಲಿ ರಾಜ್ಯದ ಸಾವಿರಾರು ಕೇಂದ್ರಗಳಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದು ಪೂಜೆ, ಹವನ ಸತ್ಸಂಗ, ಭಜನೆ ಮುಂತಾದ ಕಾರ್ಯಕ್ರಮ ನಡೆಯಲಿದೆ. ಆ ದಿನ ಸಂಜೆ ವೇಳೆ ಪ್ರತಿ ಮನೆಯಲ್ಲಿ ಕನಿಷ್ಠ 5 ದೀಪಗಳನ್ನು ಉರಿಸಿ, ಕುಟುಂಬದ ಸದಸ್ಯರೆಲ್ಲರೂ ಒಟ್ಟಾಗಿ ಉತ್ತರದ ಕಡೆಗೆ ಮುಖ ಮಾಡಿ ಆರತಿ ಮಾಡಬೇಕು ಈ ಮೂಲಕ ಆ ದಿನವನ್ನು ಸಂಭ್ರಮಿಸಬೇಕೆಂದು ಟ್ರಸ್ಟ್ ಕರೆ ನೀಡಿದೆ.

More from the blog

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...