Saturday, April 6, 2024

ನೇಜಾರು ನಾಲ್ವರ ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆಗೆ ಜಾಮೀನು ಅರ್ಜಿ ತಿರಸ್ಕೃತ

ಉಡುಪಿ: ನೇಜಾರು ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಆದೇಶ ನೀಡಿದೆ.

ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಕೋರಿ ಡಿ.14ರಂದು ವಕೀಲ ಕೆ.ಎಸ್‌.ಎನ್‌.ರಾಜೇಶ್ ಮೂಲಕ ಅರ್ಜಿ ಸಲ್ಲಿಸಿದ್ದ. ಈ ಅರ್ಜಿಗೆ ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿದ್ದರು.

ಈ ಕುರಿತು ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶ ದಿನೇಶ್ ಹೆಗ್ಡೆ ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.

More from the blog

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...