Tuesday, April 16, 2024

ವಿಟ್ಲದಲ್ಲಿ ಬೃಹತ್ ಹಿಂದೂ ಚೈತನ್ಯ ಸಮಾವೇಶ, ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ 

ವಿಟ್ಲ: ಪುತ್ತಿಲ ಪರಿವಾರ, ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸಮಿತಿ ವಿಟ್ಲ ಆಶ್ರಯದಲ್ಲಿ ಹಿಂದು ಸಮಾಜದ ಐಕ್ಯತೆ ಮತ್ತು ಲೋಕ ಕಲ್ಯಾಣಾರ್ಥವಾಗಿ ಶನಿವಾರ ವಿಟ್ಲ ಶ್ರೀ ಪಂಚಲೀಂಗೇಶ್ವರ ದೇವಸ್ಥಾನದ ರಥದ ಗದ್ದೆಯಲ್ಲಿ ಲೋಕ ಕಲ್ಯಾಣಾರ್ಥವಾಗಿ ಸಾರ್ವಜನಿಕ ಶ್ರೀಶನೈಶ್ವರ ಪೂಜೆ ಹಾಗೂ ಬೃಹತ್ ಹಿಂದು ಚೈತನ್ಯ ಸಮಾವೇಶ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದ ರಥದ ಗದ್ದೆಯಲ್ಲಿ ನಡೆಯಿತು.

ಹಿಂದೂ ಚೈತನ್ಯ ಸಮಾವೇಶದಲ್ಲಿ ಆಶೀರ್ವಚನ ನೀಡಿದ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಧರ್ಮ ಜೀವನ ರಥದ ಪಥವಾಗಿದೆ. ಸನಾತನ ಧರ್ಮಕ್ಕೆ ಚ್ಯುತಿ ಬಂದಾಗ ಅರುಣೋದಯದ ಕಾರ್ಯವಾಗಬೇಕು. ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಕಾರ್ಯ ಪರಿವಾರದ ಕಡೆಯಿಂದ ನಡೆಯುತ್ತಿದೆ. ಧರ್ಮವನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ತಮ್ಮನ್ನು ತೊಡಗಿಸಿಕೊಳ್ಳಬೇಕು.

ಮಾಣಿಲ ಶ್ರೀಧಾಮ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ ಯುವ ಶಕ್ತಿಯನ್ನು ಸಮಾಜದಲ್ಲಿ ಪ್ರಭಾವಿತವಾಗಿಸುವ ಕಾರ್ಯವಾಗಬೇಕು. ಮಕ್ಕಳಲ್ಲಿ ಮೌಲ್ಯಯುತ ಶಿಕ್ಷಣವನ್ನು ನೀಡುವ ಕಾರ್ಯವಾಗಬೇಕು. ಸನಾತನ ಹಿಂದೂ ಧರ್ಮ, ಮಾತೃಶಕ್ತಿಯ ಮೌಲ್ಯ ಉಳಿಯಲು ಇಂತಹ ಸಮಾವೇಶಗಳ ಅವಶ್ಯಕತೆಯಿದೆ ಎಂದು ತಿಳಿಸಿದರು.

ಕಣಿಯೂರು ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿ ದೇಹ, ದೇಶ, ದೇವರ ರಕ್ಷಣೆಯ ಅಗತ್ಯತೆಯಿದೆ. ಹಿಂದು ಧರ್ಮದ ರಕ್ಷಣೆಗೆ ನಾವು ಸಿಂಹಗಳಂತಾಗಬೇಕು. ದ್ವೇಷದಿಂದ ಯಾವುದನ್ನು ಜಯಿಸಲಾಗದು, ಸಮಾಜವನ್ನು ಪ್ರೀತಿಯಿಂದ ಸುಲಭವಾಗಿ ಜಯ ಸಾಧ್ಯ ಎಂದು ತಿಳಿಸಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಮಾತನಾಡಿದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಗೆ ಪಾದಯಾತ್ರೆ ನಡೆಯಿತು. ವಿಟ್ಲ ರಥದ ಗದ್ದೆಯಲ್ಲಿ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ನಡೆಯಿತು. ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ವಿಟ್ಲ ಯೋಗೀಶ್ವರ ಮಠದ ಶ್ರೀ ಶ್ರದ್ಧಾನಾಥಜೀ, ಕುಕ್ಕಾಜೆ ಶ್ರೀ ಕಾಳಿಕಾಂಬಾ ಆಂಜನೇಯ ಕ್ಷೇತ್ರದ ಕೃಷ್ಣ ಗುರೂಜಿ ಮಾತನಾಡಿದರು. ಕಾರ್ಕಳದ ಅಕ್ಷಯ ಗೋಖಲೆ ದಿಕ್ಸೂಚಿ ಭಾಷಣ ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೂಜಾ ಸಮಿತಿಯ ಅಧ್ಯಕ್ಷ ಶ್ರೀಕೃಷ್ಣ ಕೇಪು ವಹಿಸಿದ್ದರು.

ವಿಟ್ಲ ಶ್ರೀ ಪಂಚಲೀಂಗೇಶ್ವರ ದೇವಸ್ಥಾನದ ಆನುವಂಶಿಕ ಮೊಕ್ತೇಸರ ವಿಟ್ಲ ಅರಮನೆಯ ಅರಸರಾದ ಬಂಗಾರು ಅರಸರು, ಕನ್ಯಾನ ಭಾರತ ಸೇವಾಶ್ರಮದ ಎಸ್. ಈಶ್ವರ ಭಟ್, ಉದ್ಯಮಿಗಳಾದ ಶ್ರೀಧರ ಶೆಟ್ಟಿ ಗುಬ್ಯ, ಕಿರಣ್ ಚಂದ್ರ ಧರ್ಮಸ್ಥಳ, ಪುತ್ತೂರು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತಾ, ಗೌರವಾಧ್ಯಕ್ಷರಾದ ಕೃಷ್ಣಯ್ಯ ಕೆ., ಸುಬ್ರಹ್ಮಣ್ಯ ಭಟ್ ಸೇರಾಜೆ ಮತ್ತಿತರರು ಉಪಸ್ಥಿತರಿದ್ದರು.

ಸಮಿತಿಯ ಸಂಚಾಲಕ ಸದಾಶಿವ ಅಳಿಕೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಮರುವಾಳ ವಂದಿಸಿದರು. ಸಂಕೇತ್ ಶೆಟ್ಟಿ, ನಮಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

More from the blog

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ

ವಿಟ್ಲ - ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ ನೀರುಮಜಲು ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಕಳೆದ...

ಕೆನರಾ ರೊಬೆಕೋ ಸಂಸ್ಥೆಯಿಂದ ಕೊಯಿಲ ಶಾಲಾ ವಿದ್ಯಾರ್ಥಿಗಳಿಗೆ ಬೈಸಿಕಲ್ ಕೊಡುಗೆ

ಬಂಟ್ವಾಳ: ತಾಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಕೆನರಾ ರೊಬೆಕೋ ಸಂಸ್ಥೆಯ ವತಿಯಿಂದ 45 ಬೈಸಿಕಲ್ ಗಳನ್ನು ವಿತರಿಸಲಾಯಿತು. ಕೆನರಾ ರೊಬೆಕೋ ಸಂಸ್ಥೆಯ ಮಂಗಳೂರು ವಿಭಾಗದ ವ್ಯವಸ್ಥಾಪಕರಾದ ಮುರಳೀಧರ ಶೆಣೈ, ಅಧಿಕಾರಿ ರಾಜೇಶ್...

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ- ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ...