Monday, April 8, 2024

500 ರೂ. ನೋಟಿನಲ್ಲಿ ಶ್ರೀರಾಮನ ಫೋಟೋ : ಪೋಸ್ಟ್ ಸಖತ್​​​ ವೈರಲ್​​

ಅಯೋಧ್ಯಾ ರಾಮ ಮಂದಿರ ಉದ್ಘಾಟನೆಗೆ ದಿನ ಸಮೀಪಿಸುತ್ತಿದ್ದಂತೆ ಗಾಂಧಿ ಬದಲು ಶ್ರೀರಾಮನ ಫೋಟೋ ಇರುವ 500 ರೂ ಮುಖ ಬೆಲೆಯ ನೋಟುಗಳು ಎಲ್ಲೆಡೆ ವೈರಲ್​​ ಆಗಿವೆ.

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಮಹೋತ್ಸವದ ಸಂದರ್ಭದಲ್ಲಿ 500 ರೂ. ನೋಟುಗಳಲ್ಲಿ ಗಾಂಧೀಜಿಯ ಬದಲು ಶ್ರೀರಾಮನ ಚಿತ್ರ ಮುದ್ರಿಸಲಾಗುವುದು ಎಂಬ ಪ್ರಚಾರ ಜೋರಾಗಿದೆ. ಇದಕ್ಕೆ ಸಂಬಂಧಿಸಿದ ಫೋಟೋವೊಂದು ‘X’ಬಳಕೆದಾರರಾದ @TenthPlanet1 ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದು, ಸದ್ಯ ಫೋಟೋ ಎಲ್ಲೆಡೆ ವೈರಲ್​ ಆಗಿದೆ. ಗಾಂಧೀಜಿಯವರ ‘ಸ್ವಚ್ಛ ಭಾರತ’, ಬದಲಿಗೆ ಭಗವಾನ್ ರಾಮನ ಬಾಣ ಮತ್ತು ಬಿಲ್ಲು ಇರುವಂತೆ ವಿನ್ಯಾಸಗೊಳಿಸಲಾಗಿರುವುದನ್ನು ಕಾಣಬಹುದು.

ಈ ನೋಟುಗಳ ಬದಲಾವಣೆಗೆ ಸಂಬಂಧಿಸಿದಂತೆ ಆರ್‌ಬಿಐ ಯಾವುದೇ ಮಾಹಿತಿ ಪ್ರಕಟಿಸಿಲ್ಲರುವುದರಿಂದ ಇದು ಫೇಕ್​​​ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮಾಡಿದ್ದಾರೆ. ಇದು ಎಡಿಟ್​​ ಮಾಡಲಾಗಿರುವ ಫೋಟೋ ಎಂದು ಸೋಶಿಯಲ್​ ಮೀಡಿಯಾ ಬಳಕೆದಾರರು ಬರೆದುಕೊಂಡಿದ್ದಾರೆ.

More from the blog

ದ್ವಿತೀಯ ಪಿಯುಸಿ ಫಲಿತಾಂಶ ಶೀಘ್ರ ಪ್ರಕಟ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 3 ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಫಲಿತಾಂಶ ಪ್ರಕಟಗೊಂಡ ನಂತರ, ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು...

ಇಂದು ಸಂಪೂರ್ಣ ಸೂರ್ಯಗ್ರಹಣ : ಈ ರಾಶಿಯವರಿಗೆ ಕಾದಿದೆ ಆಪತ್ತು

ವರ್ಷದ ಮೊದಲ ಸೂರ್ಯಗ್ರಹಣ ಇಂದು ಸಂಭವಿಸುತ್ತಿದೆ. ಸುಮಾರು 54 ವರ್ಷಗಳ ಬಳಿಕ ಸಂಭವಿಸುತ್ತಿರುವ ಸುದೀರ್ಘ ಸೂರ್ಯಗ್ರಹಣ ಇದಾಗಿದ್ದು, ಮಾಹಿತಿಗಳ ಪ್ರಕಾರ ಏಪ್ರಿಲ್ 8 ರಂದು ಸೂರ್ಯಗ್ರಹಣ ರಾತ್ರಿ 9.12 ರಿಂದ 1.25 ರವರೆಗೆ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...