Tuesday, April 9, 2024

ಬಂಟ್ವಾಳ ತಾಲೂಕು ಆಡಳಿತ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ

ಮಾನ್ಯ ಚುನಾವಣಾ ಆಯೋಗವು ಕಾಲಕಾಲಕ್ಕೆ ಹೊರಡಿಸುವ ನಿರ್ದೇಶನಗಳಿಗೆ ಅನುಸಾರವಾಗಿ ಪಾರದರ್ಶಕವಾಗಿ ಚುನಾವಣೆಗಳನ್ನು ನಡೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಚುನಾವಣೆಯು ಒಂದು ಹಕ್ಕು ಮಾತ್ರವಲ್ಲ, ಎಲ್ಲಾ ಪ್ರಜ್ಞಾವಂತ ನಾಗರಿಕರ ಆದ್ಯ ಕರ್ತವ್ಯ ಸಹ ಆಗಿದೆ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ತಹಶೀಲ್ದಾರ್‌ ಎಸ್‌ ಬಿ ಕೂಡಲಗಿಯವರ ಹೇಳಿದರು.

ಅವರು ಕೇಂದ್ರ ಚುನಾವಣಾ ಆಯೋಗದ ಸಂಸ್ಥಾಪನಾ ದಿನದ ಅಂಗವಾಗಿ ಜನವರಿ 25 ರಂದು ಬಂಟ್ವಾಳ ತಾಲೂಕು ಆಡಳಿತದ ವತಿಯಿಂದ ಬಂಟ್ವಾಳ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಆಚರಿಸಲಾದ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಬೂತು ಮಟ್ಟದ ಅಧಿಕಾರಿಗಳಿಗೆ ಹಾಗೂ ಬಿ. ಎಲ್.‌ ಒ. ಮೇಲ್ವಿಚಾರಕರಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.

ಮತದಾರರ ದಿನದ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಚುನಾವಣಾ ಶಾಖೆಯ ಉಪತಹಶೀಲ್ದಾರ್‌ ನವೀನ್‌ ಬೆಂಜನಪದವು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು.

ಉಪತಹಶೀಲ್ದಾರರಾದ ನರೇಂದ್ರನಾಥ ಮಿತ್ತೂರು ವಂದಿಸಿದರು. ಉಪತಹಶೀಲ್ದಾರ್‌ ದಿವಾಕರ ಮುಗುಲ್ಯ, ಚುನಾವಣಾ ಶಾಖೆಯ ವಿಷಯ ನಿರ್ವಾಹಕ ಮಂಜುನಾಥ್ ಕೆ ಹೆಚ್‌, ಗ್ರಾಮ ಆಡಳಿತ ಅಧಿಕಾರಿ ಶ್ರೀಕಲಾ ಕಾರಂತ್, ಆಪರೇಟರ್ ಕಿರಣ್ ನರಿಕೊಂಬು, ಕಂದಾಯ ಇಲಾಖೆಯ ಸಿಬ್ಬಂದಿಗಳು, ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು, ಬೂತು ಮಟ್ಟದ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...