Saturday, April 6, 2024

ತಾಯಿ ಮಗಳಿಗೆ ಚೂರಿ ತೋರಿಸಿ ಮುಸುಕುದಾರಿಗಳಿಂದ ರಾಬರಿ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಮಾರ್ಗದರ್ಶನದಲ್ಲಿ ಪತ್ತೆ ಕಾರ್ಯಕ್ಕೆ ತಂಡ ರಚನೆ

ಬಂಟ್ವಾಳ: ತಾಯಿ ಮಗಳಿಗೆ ಚೂರಿ ತೋರಿಸಿ ,ಜೀವ ಬೆದರಿಕೆ ಒಡ್ಡಿ, ಮುಸುಕುದಾರಿಗಳಿಂದ ನಡೆದ ರಾಬರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರಿಷ್ಯಂತ್ ಅವರ ಮಾರ್ಗದರ್ಶನದಲ್ಲಿ ಪತ್ತೆ ಕಾರ್ಯಕ್ಕೆ ಪೋಲಿಸ್ ತಂಡ ರಚನೆಯಾಗಿದೆ.

ಇಂದು ಬೆಳಿಗ್ಗೆ ವಗ್ಗ ಸಮೀಪದ ಹಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್ ಮುಂಭಾಗದಲ್ಲಿರುವ ಪ್ಲೋರಿನ್ ಪಿಂಟೋ ಅವರ ಮನೆಯಿಂದ ಮಾಡಲಾಗಿರುವ ರಾಬರಿ ಪ್ರಕರಣದ ಪತ್ತೆ ಕಾರ್ಯಕ್ಕೆ ಪ್ರಾಥಮಿಕ ಮಾಹಿತಿ ಕಲೆಹಾಕುವ ಕಾರ್ಯಕ್ಕೆ ವೇಗ ದೊರೆತಿದೆ.

ಜಿಲ್ಲೆಯ ವಿವಿಧ ಠಾಣೆಯ ಪೋಲಿಸ್ ತಂಡ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಪ್ರಾಥಮಿಕ ಹಂತದ ತನಿಖೆಗೆ ಸಂಬಂಧಿಸಿದಂತೆ ಸಿ.ಸಿ.ಕ್ಯಾಮರಾಗಳ ದೃಶ್ಯಗಳಲ್ಲಿ ಮಾಹಿತಿ ಪಡೆಯುವುದು ಮತ್ತು ಮೊಬೈಲ್ ಟವರ್ ಲೊಕೇಸನ್ ಗಳ ಪತ್ತೆ ಕಾರ್ಯ ಆರಂಭವಾಗಿದೆ.

ತಾಯಿ ಪ್ಲೋರಿನ ಪಿಂಟೊ ಮತ್ತು ಮಗಳು ಮರೀನಾ ಪಿಂಟೋ ಅವರಿಗೆ ಚಾಕು ತೋರಿಸಿ 3 ಲಕ್ಷಕ್ಕೂ ಅಧಿಕ ನಗನಗದನ್ನು ಬಿಸಿರೋಡು ಧರ್ಮಸ್ಥಳ ರಸ್ತೆಯ ಬದಿಯಲ್ಲಿರುವ ಹಂಚಿಕಟ್ಟೆಯ ಮನೆಯಿಂದ ರಾಬರಿ ಮಾಡಲಾಗಿತ್ತು.

ತಾಲೂಕಿನಲ್ಲಿ ಕಳೆದ ಕೆಲವು ತಿಂಗಳಲ್ಲಿನಿಂದ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆತಂಕ ವ್ಯಕ್ತವಾಗಿದೆ.

More from the blog

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...