Thursday, April 11, 2024

ಬೆಳ್ತಂಗಡಿ ತಾಲೂಕಿನ 9 ಪಟಾಕಿ ಮಳಿಗೆ ಮೇಲೆ ದಾಳಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವೇಣೂರು ಬಳಿ ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಫೋಟ ಸಂಭವಿಸಿದ ಘಟನೆಯ ನಂತರ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಬೆಳ್ತಂಗಡಿ ಕಂದಾಯ ಇಲಾಖೆ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಬೆಳ್ತಂಗಡಿ ತಾಲೂಕಿನ 9 ಪಟಾಕಿ ಮಳಿಗೆ ಮೇಲೆ ದಾಳಿ ನಡೆಸಿದ್ದಾರೆ.

ಅಗ್ನಿಶಾಮಕ ದಳದ ರಿಜಿನಲ್ ಫೈರ್ ಅಧಿಕಾರಿ ರಂಗನಾಥ್ ಮತ್ತು ತಹಶೀಲ್ದಾರ್ ಪೃಥ್ವಿ ಸಾನಿಕಂ ನೇತೃತ್ವದಲ್ಲಿ ಕಾರ್ಯಾಚರಣೆ‌‌ ನಡೆಸಲಾಗಿದೆ. ಇದೇ ವೇಳೆ ಎರಡು ಅಂಗಡಿಯಲ್ಲಿ ಅಧಿಕ ಮಟ್ಟದ ಪಟಾಕಿ ದಾಸ್ತಾನು ಮಾಡಿರುವುದು ದಾಳಿ ವೇಳೆ ತಿಳಿದುಬಂದಿದೆ. ಹೀಗಾಗಿ ಬೆಳ್ತಂಗಡಿಯ ಪ್ರಭಾತ್ ಸ್ಟೋರ್ ಮತ್ತು ಉಜಿರೆಯ ಪ್ರಭಾತ್ ಸ್ಟೋರ್ ಪಟಾಕಿ ಗೋಡೌನ್​ಗಳನ್ನು ಸೀಜ್ ಮಾಡಲಾಗಿದೆ.

ಈ ಮಧ್ಯೆ, ವೇಣೂರು ಸ್ಫೋಟ ಪ್ರಕರಣದ ಆರೋಪಿ ಕುಚ್ಚೋಡಿ ನಿವಾಸಿ ಬಶೀರ್, ಕೆಲಸಗಾರ ಹಾಸನದ ಕಿರಣ್ ಅವರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ  ಹಾಜರುಪಡಿಸಲಾಗಿತ್ತು. ಇದೇ ವೇಳೆ, ಆರೋಪಿಗಳಿಬ್ಬರನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಧೀಶರು ಆದೇಶ ಮಾಡಿದ್ದಾರೆ. ಆರೋಪಿಗಳ ಪರ ವಕೀಲ ಅರುಣ್ ಬಂಗೇರ ವಾದ ಮಂಡಿಸಿದ್ದರು.

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಅಕ್ರಮ ಮರಳು ಸಾಗಾಟ: ವಾಹನ ಸಹಿತ ಆರೋಪಿ ಅರೆಸ್ಟ್

ಬೆಳ್ತಂಗಡಿ: ಅಕ್ರಮ ಮರಳು ಸಾಗಾಟದ ಎರಡು ಪಿಕಪ್‌ ವಾಹನ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ವೇಣೂರು ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವೇಣೂರಿನ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿರುವುದಾಗಿ...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಹೆರಿಗೆ ವೇಳೆ ವಿಪರೀತ ರಕ್ತಸ್ರಾವ : ಲಾಯಿಲದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ ಎಂಬವರು ಎರಡನೇ...