Wednesday, April 17, 2024

ಜ.21 ರಂದು ಕರಾವಳಿ 2024, ಕರಾವಳಿ ಕುಲಾಲರ ಕಲಾಂಜಲಿ ಅವಿಭಜಿತ ಜಿಲ್ಲೆಯ ಕುಲಾಲ ಸಂಘಗಳ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ (ರಿ.) ಬಿಸಿರೋಡು ಇದರ ವತಿಯಿಂದ ಜ.21 ರಂದು ಆದಿತ್ಯವಾರ ಬಿಸಿರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ಕರಾವಳಿ 2024, ಕರಾವಳಿ ಕುಲಾಲರ ಕಲಾಂಜಲಿ ಅವಿಭಜಿತ ಜಿಲ್ಲೆಯ ಕುಲಾಲ ಸಂಘಗಳ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ನಡೆಯಲಿದೆ ಎಂದು ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ರಾಧಾಕೃಷ್ಣ ಬಂಟ್ವಾಳ್ ತಿಳಿಸಿದರು.

ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಂಘದ ಸಮುದಾಯ ಭವನದ ಮೇಲಂತಸ್ತಿನ ಕಾಮಗಾರಿಗೆ ಅರ್ಥಿಕ ಕ್ರೋಡಿಕರಣದ ಸದುದ್ದೇಶ ಹೊಂದಿದ್ದೇವೆ ಎಂದು ಅವರು ತಿಳಿಸಿದರು.

ಜಿಲ್ಲೆಯ ಸುಮಾರು 15 ತಂಡಗಳು ಸಾಂಸ್ಕೃತಿಕ ಸಂಭ್ರಮ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ತಂಡಗಳಿಗೆ ಗೌರವ,ಪ್ರೋತ್ಸಾಹ ದನ ನೀಡಲಿದ್ದೇವೆ.

ಸ್ಪರ್ಧೆಯಲ್ಲಿ ವಿಜೇತರಾದ ಪ್ರಥಮ ತಂಡಕ್ಕೆ ರೂ. 15 ಸಾವಿರ, ದ್ವೀತಿಯ ರೂ.10 ಸಾವಿರ ಹಾಗೂ ತೃತೀಯ ರೂ.8 ಸಾವಿರ ಹಣವನ್ನು ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

ಬೆಳಿಗ್ಗೆ ಖ್ಯಾತ ರಂಗ ನಿರ್ದೇಶಕ, ಕಲಾವಿದ ರಮಾ ಬಿಸಿರೋಡು ಕಾರ್ಯಕ್ರಮದ ದೀಪ ಪ್ರಜ್ವಲನೆ ಮಾಡಲಿದ್ದಾರೆ.

ಚಲನಚಿತ್ರ ನಟ ಮನೋಜ್ ಪುತ್ತೂರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

ಮಧ್ಯಾಹ್ನ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಮಾಜಿ ಸಚಿವ ಬಿ.ರಮಾನಾಥ ರೈ ಸಹಿತ ಅನೇಕ ಗಣ್ಯರು ಉಪಸ್ಥಿತರಿರುತ್ತಾರೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಸುಕುಮಾರ್ ಬಂಟ್ವಾಳ್, ಪ್ರಧಾನ ಕಾರ್ಯದರ್ಶಿ ಕೇಶವ ಮಾಸ್ತರ್, ಕೋಶಾಧಿಕಾರಿ ರಮೇಶ್ ಸಾಲಿಯಾನ್, ಸಮಿತಿ ಸದಸ್ಯ ದಾಮೋದರ ಏರ್ಯ ಉಪಸ್ಥಿತರಿದ್ದರು.

https://fb.watch/pDlC0F3kgM/

More from the blog

ಏ.21 ರಂದು ಆದಿದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ ಹಾಗೂ ಸಾಧಕರಿಗೆ ಸನ್ಮಾನ

ಬಂಟ್ವಾಳ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘ(ರಿ.)S74 ಇದರ ವತಿಯಿಂದ ವಿಶ್ವಜ್ಞಾನಿ ಡಾ| ಬಿ. ಆರ್ ಅಂಬೇಡ್ಕರ್ ರವರ 133ನೇ ಜನ್ಮ ದಿನಾಚರಣೆಯ ಅಂಗವಾಗಿ ಸಂಘದ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಆದಿದ್ರಾವಿಡ ಸಮಾಜ...

ಎಸ್.ಎಸ್.ಎಲ್.ಸಿ ಮೌಲ್ಯಮಾಪನ : ನಿಷೇಧಾಜ್ಞೆ ಜಾರಿ

ಮಂಗಳೂರು: ಮಂಗಳೂರಿನ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಏಪ್ರಿಲ್ 15ರಿಂದ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ನಡೆಯಲಿದ್ದು, ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನುಬಾಹಿರ...

ಲೋಕಸಭಾ ಚುನಾವಣೆ : ಬಂಟ್ವಾಳದ ಕಳ್ಳಿಗೆ ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...