Tuesday, April 9, 2024

ಕುಕ್ಕೆಗೆ ಕ್ರಿಕೆಟಿಗ ಕೆಎಲ್ ರಾಹುಲ್ ಭೇಟಿ

ಸುಬ್ರಹ್ಮಣ್ಯ: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಕೆ ಎಲ್ ರಾಹುಲ್ ಭೇಟಿ ನೀಡಿದ್ದಾರೆ.

ಈ ಹಿಂದೆ 2023ರ ವಿಶ್ವ ಕಪ್ ಟೂರ್ನಿಯು ಆರಂಭವಾಗುವ ಮುನ್ನ ರಾಹುಲ್ ಗಾಯಾಳು ಆಗಿದ್ದರು, ಹಾಗಾಗಿ ವಿಶ್ವ ಕಪ್ ತಂಡದಲ್ಲಿ ಅವರ ಸ್ಥಾನ ಅನುಮನಕರವಾಗಿತ್ತು ಹಾಗಾಗಿ ಕಳೆದ ಜೂನ್ 25ರಂದು ರಾಹುಲ್ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಸೇವೆ ಸಲ್ಲಿಸಿದರು.

ನಂತರದಲ್ಲಿ ರಾಹುಲ್ 2023ರ ವಿಶ್ವ ಕಪ್ ಟೂರ್ನಿಯಲ್ಲಿ ಅಬ್ಬರದ ಬ್ಯಾಟಿಂಗ್ ಮಾತ್ರವಲ್ಲದೆ ವಿಕೆಟ್ ಕೀಪಿಂಗ್ ನಲ್ಲೂ ಕೂಡ ಕಮಾಲ್ ಮಾಡಿರೋದು ನಿಮಗೆಲ್ಲರಿಗೂ ಗೊತ್ತಿದೆ. ಇದೀಗ ಐಪಿಎಲ್ ಹಾಗೂ ಟಿ20 ವಿಶ್ವಕಪ್ ಟೂರ್ನಿಯು ಸಮೀಪಿಸುತ್ತಿರುವ ಬೆನ್ನಲ್ಲೇ ಮತ್ತೆ ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದಿದ್ದಾರೆ

ಟಿ20 ವಿಶ್ವಕಪ್ ತಂಡದಲ್ಲಿ ರಾಹುಲ್ ಗೆ ಸ್ಥಾನ ಸಿಗುವುದು ಕಷ್ಟ ಎನ್ನಲಾಗಿದೆ, ಒಂದು ವೇಳೆ ರಾಹುಲ್ ಗೆ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಲಭಿಸಬೇಕಾದರೆ ಬರುವ ಐಪಿಎಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಲೇಬೇಕಾಗಿದೆ ಹಾಗಾಗಿ ಐಪಿಎಲ್ ಟೂರ್ನಿಗೂ ಮುನ್ನ ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದಿದ್ದಾರೆ ಎನ್ನಲಾಗುತ್ತಿದೆ.

More from the blog

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಏಪ್ರಿಲ್ 14ರಂದು ಮಂಗಳೂರಿಗೆ ಪ್ರಧಾನಿ ಮೋದಿ

ಬೆಂಗಳೂರು: ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಮಾವೇಶ ಚಿಕ್ಕಬಳ್ಳಾಪುರದಿಂದ ಮಂಗಳೂರಿಗೆ ಸ್ಥಳಾಂತರಗೊಂಡಿದ್ದು, ಅದರಂತೆ, ಏಪ್ರಿಲ್ 14 ರಂದು ದ.ಕ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಮಾವೇಶ ನಡೆಯಲಿದೆ.. ಏಪ್ರಿಲ್ 14ಕ್ಕೆ ಬೆಂಗಳೂರಿಗೆ ಆಗಮಿಸಲಿರುವ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ...