Friday, April 19, 2024

ಮಂಚಿ – ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

ಸರಕಾರಿ ಪ್ರೌಢಶಾಲೆ ಮಂಚಿ – ಕೊಳ್ನಾಡು ಇಲ್ಲಿ ಲಯನ್ಸ್ ಕ್ಲಬ್ ಕೊಳ್ನಾಡು ಸಾಲೆತ್ತೂರು ಮತ್ತು ಎ ಜೆ ಹಾಸ್ಪಿಟಲ್ ಮಂಗಳೂರು ಇವರ ಸಹಯೋಗದೊಂದಿಗೆ ನುರಿತ ವೈದ್ಯರಿಂದ ಉಚಿತ ವೈದ್ಯಕೀಯ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ದೀಪಬೆಳಗಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಶಿಬಿರದ ಮುಖ್ಯ ವೈದ್ಯರಾದ ಡಾ. ವಾಮನ್ ನಾಯಕ್ ಎಂ ಡಿ ಇವರು ಮಾತನಾಡಿ, “ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ವೈದ್ಯಕೀಯ ನೆರವಿನ ಅಗತ್ಯತೆ ಬಹಳಷ್ಟಿದೆ. ಆರೋಗ್ಯದ ಬಗ್ಗೆ ಜಾಗೃತಿ ಹಾಗೂ ಅಗತ್ಯ ಚಿಕಿತ್ಸೆಯ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳುವವರಾಗಬೇಕು” ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಲಯನ್ಸ್ ಕ್ಲಬ್ ಕೊಳ್ನಾಡು ಸಾಲೆತ್ತೂರು ಇದರ ಸ್ಥಾಪಕಾಧ್ಯಕ್ಷರಾದ ಡಾ. ಗೋಪಾಲಾಚಾರ್, “ಹಳ್ಳಿಯ ಪ್ರತಿ ಶಾಲೆಗಳಲ್ಲೂ ವೈದ್ಯಕೀಯ ಶಿಬಿರಗಳು ಆಯೋಜನೆಯಾಗುವಂತೆ ಮೆಡಿಕಲ್ ಕಾಲೇಜುಗಳು ಆಸಕ್ತಿ ವಹಿಸಬೇಕು. ಪಟ್ಟಣಗಳಿಗಿಂತ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಅನುಭವಗಳಿಸಿಕೊಳ್ಳಲು ಅನುಕೂಲವಾಗುತ್ತದೆ” ಎಂದು ಸಲಹೆ ನೀಡಿದರು.

ಮಂಚಿ – ಕೊಳ್ನಾಡು ಸರಕಾರಿ ಪ್ರೌಢಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಬಾಲಕೃಷ್ಣ ಸೆರ್ಕಳ ಅಧ್ಯಕ್ಷತೆ ವಹಿಸಿದ್ದರು. ಎ ಜೆ ಆಸ್ಪತ್ರೆ ದಂತ ವೈದ್ಯಕೀಯ ವಿಭಾಗದ ಮುಖ್ಯಸ್ಥೆ ಡಾ. ಸಂಜನಾ ಇವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಶಿಬಿರದಲ್ಲಿ ದಂತ, ಇ ಅಂಡ್ ಟಿ, ಮಕ್ಕಳ ವೈದ್ಯರು, ಚರ್ಮ, ಸಾಮಾನ್ಯ ಚಿಕೆತ್ಸೆಗಳ ಪರೀಶೀಲನೆ ಲಭ್ಯವಿತ್ತು. ಶಾಲೆಯ ಸುಮಾರು ಮೂನ್ನೂರು ವಿದ್ಯಾರ್ಥಿಗಳು ಈ ವೈದ್ಯಕೀಯ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು. ಸುಮಾರು 40 ವೈದ್ಯರು ಭಾಗವಹಿಸಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಶೀಲಾ ವಿಟ್ಲ ಸ್ವಾಗತಿಸಿದರು. ಶಿಕ್ಷಕ ಜಗನ್ನಾಥ ಪಿ ವಂದಿಸಿದರು. ಶಿಕ್ಷಕಿ ಶ್ರೀಮತಿ ಗೀತಾ ಕಾರ್ಯಕ್ರಮ ನಿರ್ವಹಿಸಿದರು.

More from the blog

ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ : ಮಹಿಳೆ ಗಂಭೀರ

ಬೆಳ್ತಂಗಡಿ: ತನ್ನ ಮನೆಯ ಸಾಕು ನಾಯಿ ಜತೆ ಮನೆ ಮಾಲಕಿ ಮುದ್ದಾಡುವಾಗ ಏಕಾಏಕಿ ದಾಳಿ ಮಾಡಿ ತಲೆ ಭಾಗವನ್ನು ಸೀಳಿ ಹಾಕಿ ಕೈಗೆ ಗಂಭೀರ ಗಾಯ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ...

ಬಿಸಿರೋಡಿನ ವಾಣಿಜ್ಯ ಕಟ್ಟಡದ ಜಗುಲಿಯಲ್ಲಿ ಚೆಲ್ಲಿರುವ ರಕ್ತ : ಹಲವು ಅನುಮಾನ

ಬಂಟ್ವಾಳ: ಬಿಸಿರೋಡಿನ ವಾಣಿಜ್ಯ ಮಳಿಗೆಯ ಮುಂಭಾಗವೊಂದರಲ್ಲಿ ರಕ್ತ ಚೆಲ್ಲಿರುವುದು ಕಂಡು ಬಂದಿದ್ದು, ಅಂಗಡಿ ಮಾಲಕರಲ್ಲಿ ಒಂದಷ್ಟು ಗೊಂದಲ ಉಂಟಾದ ಘಟನೆ ನಡೆದಿದೆ. ಎ.18 ರಂದು ಬೆಳಿಗ್ಗೆ ತಾ.ಪಂ. ನ ವಾಣಿಜ್ಯ ಕಟ್ಟಡವೊಂದರ ಜಗುಲಿಯಲ್ಲಿ ರಕ್ತ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ಜೀಪ್ ಬೈಕ್ ಗೆ ಡಿಕ್ಕಿ… ಬೈಕ್ ಸವಾರ ಸಾವು : ಇಬ್ಬರು ಮಕ್ಕಳು ಗಂಭೀರ

ಪುತ್ತೂರು: ಜೀಪೊಂದು ಬೈಕ್ ಗೆ ಡಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಣಿಯೂರು- ಮಂಜೇಶ್ವರ ಅಂತರಾಜ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ...