Sunday, April 7, 2024

ಜ.8, 9ರಂದು ಯುವನಿಧಿ ಯೋಜನೆಯ ನೋಂದಣಿ – ಜಿಲ್ಲಾಧಿಕಾರಿ

ಮಂಗಳೂರು: ರಾಜ್ಯ ಸರಕಾರದ ಗ್ಯಾರಂಟಿ “ಯುವನಿಧಿ” ಯೋಜನೆಯ ಪದವೀಧರರಿಗೆ 3,000 ರೂ. ಹಾಗೂ ಡಿಪ್ಲೋಮಾ ಪಡೆದಿರುವವರಿಗೆ 1,500 ರೂ. ನಿರುದ್ಯೋಗ ಭತ್ಯೆ ನೀಡುವ ನೋಂದಣಿ ತೀವ್ರಗೊಳಿಸಲು ಜಿಲ್ಲಾಧಿಕಾರಿ ಎಂಪಿ ಮುಲ್ಲೈಮುಗಿಲನ್ ಸೂಚಿಸಿದ್ದಾರೆ.

ಈ ಸಂಬಂಧ ಅಧಿಕಾರಿಗಳ ಸಭೆ ನಡೆಸಿ, ದ.ಕ ಜಿಲ್ಲೆಯ ಎಲ್ಲಾ ಪದವಿ ಕಾಲೇಜು ಹಾಗೂ ಡಿಪ್ಲೋಮಾ ಶಿಕ್ಷಣ ಸಂಸ್ಥೆಗಳಲ್ಲಿ ಜನವರಿ 8 ಮತ್ತು 9 ರಂದು ನೋಂದಣಿ ಮೇಳವನ್ನು ನಡೆಸಲು ಅವರು ತಿಳಿಸಿದರು.

2023ರಲ್ಲಿ ಪದವಿ, ಡಿಪ್ಲೊಮಾ ಪಡೆದವರು ಇದಕ್ಕೆ ಅರ್ಹರಾಗಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಯುವ ನಿಧಿಗೆ ನೋಂದಣಿ ಮಾಡಲು ಹೆಚ್ಚಿನ ಪ್ರತಿಕ್ರಿಯೆ ಕಂಡುಬಂದಿದೆ. ಈ ನಿಟ್ಟಿನಲ್ಲಿ ಕಾಲೇಜುಗಳಲ್ಲಿಯೇ ನೋಂದಣಿ ಅಭಿಯಾನ ನಡೆಸುವಂತೆ ಅವರು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಸೋಜ, ಮಂಗಳೂರು ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ. ಎ.ಎಂ. ಖಾನ್, ಮತ್ತಿತರರು ಉಪಸ್ಥಿತರಿದ್ದರು.

More from the blog

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ...

ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನ ಜಖಂಗೊಳಿಸಿದ ಭಕ್ತರು

ಮುಲ್ಕಿ: ದೇವರ ರಥ ಹೋಗುವ ದಾರಿಯಲ್ಲಿದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ಇತ್ತೀಚೆಗೆ ನಡೆದಿದ್ದು, ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ. ಜಾತ್ರೆಯಲ್ಲಿ ದೇವರ ರಥ ಹೋಗುವ...

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಅರ್.ಪೂಜಾರಿ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮುಂಭಾಗದಿಂದ ಎ.ಬಿ.ಶೆಟ್ಟಿ ಸರ್ಕಲ್ ವರೆಗೆ...