Friday, April 5, 2024

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಕಾರು ಡಿಕ್ಕಿಹೊಡೆದು ಪರಾರಿ: ಅದೃಷ್ಟವಶಾತ್ ಅಪಾಯವಿಲ್ಲದೆ ಶಾಸಕರು ಪಾರು…

ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರಿಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾಗಿದ್ದು, ಶಾಸಕರು ಪವಾಡಸದೃಶವಾಗಿ ಅಪಾಯದಿಂದ ಪಾರಾದ ಘಟನೆ ಇಂದು ಮಧ್ಯಾಹ್ನ ಮಂಗಳೂರು ಹೊರವಲಯದ ತೆಂಕ ಎಡಪದವು ಎಂಬಲ್ಲಿ ನಡೆದಿದೆ.
ಶಾಸಕ ರಾಜೇಶ್ ನಾಯ್ಕ್ ಅವರು ಇಂದು ಸಂಕ್ರಮಣದ ಅಂಗವಾಗಿ ಎಡಪದವು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪೂಜೆ ಮುಗಿಸಿ ವಾಪಾಸು ತನ್ನ ಕಾರಿನತ್ತ ನಡೆದುಕೊಂಡು ಬರುತ್ತಿರುವ ವೇಳೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
ಮೂಡಬಿದಿರೆ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರೊಂದು ಶಾಸಕರು ಕಾರಿನತ್ತ ಹೆಜ್ಜೆ ಹಾಕುತ್ತಿದ್ದ ವೇಳೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ, ಕಾರು ಗುದ್ದಿದ ರಭಸಕ್ಕೆ ಶಾಸಕರು ಬಿದ್ದು ಗಾಯವಾಗಿದ್ದು, ಕೂಡಲೇ ಮಂಗಳೂರು ಎ.ಜೆ.ಆಸ್ಪತ್ರೆಗೆ ದಾಖಲಿಸಿ ಪರೀಕ್ಷೆ ನಡೆಸಿದ್ದಾರೆ.
ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಶಾಸಕರು ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಇದೀಗ ಚಿಕಿತ್ಸೆ ಪಡೆದುಕೊಂಡು ಶಾಸಕರು ಮನೆಗೆ ತೆರಳಿದ್ದಾರೆ ಎಂದು ಹೇಳಲಾಗಿದೆ.
ಡಿಕ್ಕಿ ಹೊಡೆದು ಪರಾರಿಯಾದ ಕಾರನ್ನು ಸ್ಥಳೀಯರು ಗುರುಪುರದಲ್ಲಿ ಹಿಡಿದು ಚಾಲಕ ಸಹಿತ ಕಾರನ್ನು ಬಜ್ಪೆ ಪೋಲೀಸರಿಗೆ ಒಪ್ಪಿಸಿದ್ದಾರೆ.
ಕಾರು ಚಾಲಕನನ್ನು ಪೋಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...