Saturday, April 6, 2024

ಉತ್ತರ ಕನ್ನಡದಲ್ಲಿ ಮಂಗನ ಕಾಯಿಲೆ ಪತ್ತೆ ; ಸ್ಥಳೀಯರಲ್ಲಿ ಆತಂಕ

ಉತ್ತರ ಕನ್ನಡ: ಇತ್ತೀಚೆಗೆ ಮಂಗನ ಕಾಯಿಲೆ (ಕೆಎಫ್​ಡಿ) ಶಿವಮೊಗ್ಗದ ಯುವತಿಯೊಬ್ಬರನ್ನ ಬಲಿ ಪಡೆದಿತ್ತು. ಇದರ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ವರ್ಷದ ಮೊದಲ ಮಂಗನಕಾಯಿಲೆ ಪತ್ತೆಯಾಗಿದ್ದು,  ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಸಿದ್ದಾಪುರದ ನಿಪ್ಲಿಯ 40 ವರ್ಷದ ವ್ಯಕ್ತಿಯೋರ್ವನಿಗೆ ಕೆಎಫ್​ಡಿ ಇರುವುದು ಪತ್ತೆಯಾಗಿದೆ. ಮೊದಲು ವ್ಯಕ್ತಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಕೆಎಫ್​​ಡಿ ಪಾಸಿಟಿವ್ ದೃಢವಾಗುತ್ತಿದ್ದಂತೆ ವ್ಯಕ್ತಿಯನ್ನ ಇದೀಗ ಸಿದ್ದಾಪುರ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಶಿವಮೊಗ್ಗದ ಹೊಸನಗರ ತಾಲೂಕಿನ ಗ್ರಾಮವೊಂದರಲ್ಲಿ 18 ವರ್ಷದ ಯುವತಿಯೊಬ್ಬರು ಮಂಗನ ಕಾಯಿಲೆ ‌ಸೋಂಕಿನಿಂದ ಸಾವನ್ನಪ್ಪಿದ್ದರು

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಬುಧವಾರ ನಾಮಪತ್ರ ಸಲ್ಲಿಸಿದರು. ಇನ್ನು ಕೋಟ ಶ್ರೀನಿವಾಸ್ ಪೂಜಾರಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಪಕ್ಷದ ಕಾರ್ಯಕರ್ತರ ಬೃಹತ್‌ ಸಮಾವೇಶ...