Friday, April 5, 2024

ಪಿಲಾತಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸಾಮಾಜಿಕ ಪರಿಶೋಧನೆಯ ಅರಿವು ಆಂದೋಲನ

ಬಂಟ್ವಾಳ ತಾಲ್ಲೂಕಿನ ಪಿಲಾತಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೈನಾಡು ಗ್ರಾಮದಲ್ಲಿ ಸಾಮಾಜಿಕ ಪರಿಶೋಧನೆ ತಂಡದಿಂದ ನರೇಗಾ ಹಾಗೂ 15 ಹಣಕಾಸು ಕಾಮರಿಗಳ ಸಾಮಾಜಿಕ ಪರಿಶೋಧನೆ ಕುರಿತು ಅರಿವು ಆಂದೋಲನ ಕಾರ್ಯಕ್ರಮ ಕೈಗೊಳ್ಳಲಾಯಿತು.

ಸೂರ್ಯಕಾಂತ್ ಎಕಲಾರ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಸಾಮಾಜಿಕ ಪರಿಶೋಧನೆ ಬೆಳ್ತಂಗಡಿ ಇವರು ಯೋಜನೆ ಅಡಿಯಲ್ಲಿ ಕ್ರಿಯಾ ಯೋಜನೆ ತಯಾರಿಕೆ, ಯೋಜನೆ ಅಡಿಯಲ್ಲಿ ಕೂಲಿಕಾರ್ಮಿಕರ ನೊಂದಾವಣಿ ಪ್ರಕ್ರಿಯೆ, ಕೆಲಸಕ್ಕಾಗಿ ಬೇಡಿಕೆ ಸಲ್ಲಿಕೆ, ಕಾಮಗಾರಿ ಸ್ಥಳದಲ್ಲಿನ‌ ಸೌಲಭ್ಯಗಳ ಬಗ್ಗೆ, ನೊಂದಾಯಿತ ಕೂಲಿಕಾರ್ಮಿಕರ ಹಕ್ಕು ಮತ್ತು ಬಾಧ್ಯತೆಗಳ ಬಗ್ಗೆ ಮಾಹಿತಿ ನೀಡಿದರು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯಮನಪ್ಪ . ಪಂಚಾಯತ್ ಅಧ್ಯಕ್ಷರು ಶಾರದಾ ಗ್ರಾಮ ಪಂಚಾಯತ್ ಸದಸ್ಯರು ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು, ಗ್ರಾಮಸ್ಥರು ಹಾಗೂ ಗ್ರಾಮ ಸಂಪನ್ಮೂಲ ವ್ಯಕ್ತಿಗಳು ಉಪಸ್ಥಿತರಿದ್ದರು.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...

ನಂದನಹಿತ್ಲು ವೈದ್ಯನಾಥ, ಅರಸು, ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಬಂಟ್ವಾಳ: ಇಲ್ಲಿನ ಪೇಟಯಲ್ಲಿರುವ ನಂದನಹಿತ್ಲು ವೈದ್ಯನಾಥ,ಅರಸು,ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲವಧಿಯ ನೇಮೋತ್ಸವವು ಗುರುವಾರ ಬೆಳಗ್ಗೆ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿವರ ನೇತೃತ್ವದಲ್ಲಿ‌ ನಡೆದ ವಿವಿಧ ವೈಧಿಕ ವಿಧಿವಿಧಾನಗಳ ಬಳಿಕ ಮೊದಲದಿನ ಶ್ರೀ...