Thursday, April 11, 2024

ಪುಣಚ: ವಿಕಸಿತ ಭಾರತ ಸಂಕಲ್ಪ ಯಾತ್ರೆ ಮಾಹಿತಿ ಕಾರ್ಯಕ್ರಮ 

ವಿಟ್ಲ: ಪುಣಚ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದ ಅಡಿಯಲ್ಲಿ ಅಜ್ಜಿನಡ್ಕ ಕೆನರಾ ಬ್ಯಾಂಕ್, ಪುಣಚ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಬ್ಯಾಂಕ್ ಮಾಹಿತಿ ಕಾರ್ಯಕ್ರಮ ನಡೆಯಿತು.

ಪುಣಚ ಗ್ರಾಮ ಪಂಚಾಯತ್ ಪಿಡಿಓ ರವಿ ಅಧ್ಯಕ್ಷತೆ ವಹಿಸಿದ್ದರು. ಬ್ಯಾಂಕ್ ಫಲಾನುಭವಿಗಳಿಗೆ ಬ್ಯಾಂಕ್ ನಿಂದ ಸಿಗುವ ಸವಲತ್ತುಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ಬ್ಯಾಂಕ್ ಅಧಿಕಾರಿ ರವಿ ಕುಮಾರ್ ಮಾಹಿತಿ ನೀಡಿದರು.

ಪುಣಚ ಪ್ರಾಥಮಿಕ ಮತ್ತು ಕ್ಷೇಮ ಕೇಂದ್ರದ ಆರೋಗ್ಯ ಸಹಾಯಕಿ ಶಶಿಕಲಾ ಆರೋಗ್ಯ ಇಲಾಖೆಯ ವಿವಿಧ ಉಚಿತ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.

ಪುಣಚ ಅಜ್ಜಿನಡ್ಕ ಕೆನರಾ ಬ್ಯಾಂಕ್ ಶಾಖೆಯ ಮ್ಯಾನೇಜರ್ ಉಮೇಶ್, ಪುಣಚ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಹೇಶ್ ಶೆಟ್ಟಿ ಕೆ.ವಿ, ಪರಿಯಾಲ್ತಡ್ಕ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಐತ್ತಪ್ಪ ನಾಯ್ಕ್ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಹಿರಿಯ ಗ್ರಾಹಕ ಈಶ್ವರ ನಾಯ್ಕ, ಪವಿತ್ರ ಹರೀಶ್, ಖದೀಜತ್ ಅಮ್ನಾ ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಕೇಂದ್ರ ಸರ್ಕಾರದ ಬ್ಯಾಂಕ್ ಯೋಜನೆಗಳ ವೀಡಿಯೋ ಪ್ರಾತ್ಯಕ್ಷಿಕೆ ನಡೆಯಿತು.

ಬ್ಯಾಂಕ್ ಫಲಾನುಭವಿ ವೆಂಕಟ್ರಮಣ ನಾಯಕ್, ರಾಮಕೃಷ್ಣ ಮೂಡಂಬೈಲು, ಪವಿತ್ರ ಹರೀಶ್ ಅನಿಸಿಕೆ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯತ್ ಗ್ರಂಥಾಲಯ ಸಹಾಯಕಿ ಜಯಲಕ್ಷ್ಮಿ ನಾಡಗೀತೆ ಹಾಡಿದರು. ಸದಾಶಿವ ಅಳಿಕೆ ಕಾರ್ಯಕ್ರಮ ನಿರೂಪಿಸಿದರು. ಬ್ಯಾಂಕ್ ಸಿಬ್ಬಂದಿ ಭರತ್ ವಂದಿಸಿದರು. ಆಶಾ ರಶ್ಮಿ ಸಹಕರಿಸಿದರು.

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಕಲ್ಲಡ್ಕ: ಖಾಸಗಿ ಬಸ್ಸಿಗೆ ಪಿಕಪ್ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...

ವಿಟ್ಲ : ಮಹಿಳೆ ಆತ್ಮಹತ್ಯೆ

ವಿಟ್ಲ: ವಿಟ್ಲಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡು ನಿವಾಸಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿ.ರಾಮಣ್ಣ ನಾಯ್ಕ ಅವರ ಪತ್ನಿ ಸುಶೀಲಾ ಅವರು ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.