Wednesday, April 10, 2024

ಮಾ.24 ರಂದು ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ( ರಿ.) ಪುಂಜಾಲಕಟ್ಟೆ ವತಿಯಿಂದ 16 ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ

ಬಂಟ್ವಾಳ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ( ರಿ.) ಪುಂಜಾಲಕಟ್ಟೆ ಇದರ ವತಿಯಿಂದ 16 ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ಶೋಭಾಕೃತ್ ನಾಮ ಸಂವತ್ಸರದ ಮೀನ ಮಾಸದಲ್ಲಿ ಮಾ.24 ರಂದು ಆದಿತ್ಯವಾರ 11.21 ರ ವೃಷಭ ಲಗ್ನದ ಸಮುಹೂರ್ತದಲ್ಲಿ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಮದುವೆ ನೇತ್ರತ್ವ ವಹಿಸಿರುವ ಮಾಜಿ ಜಿ.ಪಂ.ಉಪಾಧ್ಯಕ್ಷ ಎಂ.ತುಂಗಪ್ಪ ಬಂಗೇರ ತಿಳಿಸಿದರು.

ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ವಿಷಯ ತಿಳಿಸಿದರು.

ಈ ಬಾರಿ ಮುಂಬಯಿ ಉದ್ಯಮಿ ಕಕ್ಯಪದವು ಕಮಲ ನಿವಾಸ ನಾರಾಯಣ ಶೆಟ್ಟಿ ಯವರ ಸಾರಥ್ಯದಲ್ಲಿ ನಡೆಯಲಿದೆ.

ಈವರೆಗೆ 15 ವರ್ಷಗಳಲ್ಲಿ ಒಟ್ಟು 467 ಜೋಡಿ ಮದುವೆ ನಡೆದಿದೆ.

ಭಜನೆ ಹಾಗೂ ಇನ್ನಿತರ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಅವರು ತಿಳಿಸಿದರು.

ಆಡಂಬರದ ಮದುವೆಯ ಖರ್ಚು ವೆಚ್ಚಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಬಡವರಿಗೆ ಸಾಮೂಹಿಕವಾಗಿ ಸಮಾಜದ ಅನೇಕರ ಪ್ರೋತ್ಸಾಹದಿಂದ ಮದುವೆ ನಡೆಸುತ್ತಾ ಬಂದಿದ್ದೇವೆ ಎಂದು ತಿಳಿಸಿದರು.

ಮದುವೆ ಸಂದರ್ಭದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಹಾಗೂ ವಿವಿಧ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಜೊತೆಗೆ ಅನೇಕ ಸಾಧಕರಿಗೆ ಸನ್ಮಾನ ನಡೆಸುತ್ತೇವೆ ಎಂದು ಅವರು ತಿಳಿಸಿದರು.

 

ಮಾ.17 ರಂದು ವಿವಾಹದ ಪೂರ್ವಭಾವಿಯಾಗಿ ನೊಂದಾಯಿತ ಜೋಡಿಗಳಿಗೆ ಅದ್ದೂರಿಯಾಗಿ ನಿಶ್ಚಿತಾರ್ಥ ನಡೆಯಲಿದೆ.

ವಿವಾಹ ಅಪೇಕ್ಷಿತ ವಧು-ವರರು ಫೆ.20 ರ ಮೊದಲು ಹೆಸರನ್ನು ನೊಂದಾಯಿಸಬೇಕಾಗಿ ವಿನಂತಿ ಮಾಡಿದ್ದಾರೆ.

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಕಾರ್ಯದರ್ಶಿ ಜಯರಾಜ್ ಅತ್ತಾಜೆ ಮತ್ತು ಸಂಚಾಲಕ ರಾಜೇಶ್ ಪುಂಜಾಲಕಟ್ಟೆ ಉಪಸ್ಥಿತರಿದ್ದರು.

More from the blog

ಮನೆಗೆ‌ ನುಗ್ಗಿ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ...

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...

ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷವದಿ ಜಾತ್ರೆಯು ಊರ ಪರವೂರ ಭಕ್ತದಿಗಳ ಸೇರಿಗೆಯಲ್ಲಿ ವಿಜೃಂಭಣೆಯಿಂದ ಜರಗಿತು. ದಿನಾಂಕ 7-4-2024 ರ ರಾತ್ರಿ ಗಿಳಿಕಿಂಜ ಬಂಡಾರ ಮನೆಯಿಂದ ದೈವದ ಬಂಡಾರ...