Wednesday, April 17, 2024

ಪುತ್ತೂರು ಮಾಯ್ ದೆ ದೇವುಸ್ ಚರ್ಚ್ – ವಾರ್ಷಿಕ ಹಬ್ಬ (ಸಾಂತ್ ಮಾರಿ)

ಮಾಯ್ ದೆ ದೇವುಸ್ ಚರ್ಚ್ ಪುತ್ತೂರು ಇದರ ವಾರ್ಷಿಕ ಹಬ್ಬವನ್ನು ಜನವರಿ 17 ರಂದು ಬೆಳಿಗ್ಗೆ 10 ಗಂಟೆಯ ಸಂಭ್ರಮದ ಬಲಿಪೂಜೆಯೊಂದಿಗೆ ಆಚರಿಸಲಾಯಿತು. ಈ ಹಬ್ಬದ ಪ್ರದಾನ ಧರ್ಮಗುರುಗಳಾಗಿ ವಂದನೀಯ ಜೋಸೆಫ್ ಮಾರ್ಟಿಸ್‍ರವರು ಬಲಿಪೂಜೆಯನ್ನು ಆರ್ಪಿಸಿದರು.

ತಮ್ಮ ಪ್ರವಚನದಲ್ಲಿ ಇಂದಿನ ದಿನಗಳಲ್ಲಿ ಒಬ್ಬರಿಗೊಬ್ಬರು ಮಾತನಾಡುವುದು ಕಡಿಮೆ ಆಗಿದೆ ಅದೇ ಮೊಬೈಲ್ ನಲ್ಲಿ ಮಾತನಾಡುವುದು ಜಾಸ್ತಿ ಆಗಿದೆ, ನಾವು ಮನೆಯಲ್ಲಿ ನಮ್ಮ ಹಿರಿಯರೊಡನೆ , ಮಕ್ಕಳೊಡನೆ ತುಂಬಾ ಮಾತನಾಡ್ಬೇಕು ಇದರಿಂದ ನಮ್ಮ ಸಂಬಂಧ ದೀರ್ಘ ಕಾಲದವರೆಗೆ ಉಳಿಯುತ್ತದೆ ಎಂದು ಹಿತ ವಚನ ನುಡಿದರು

ಬಲಿಪೂಜೆಯಲ್ಲಿ ಮಾಯ್ ದೆ ದೇವುಸ್ ಚರ್ಚ್ ಪುತ್ತೂರು ಇದರ ಪ್ರದಾನ ಧರ್ಮಗುರುಳಾದ ವಂದನೀಯ ಲಾರೆನ್ಸ್ ಮಸ್ಕರೇನ್ಹಸ್, ಸಹಾಯಕ ಧ್ರಮಗುರುಗಳಾದ ವಂದನೀಯ ಲೋಹಿತ್ ಅಜಯ್ ಮಸ್ಕರೇನ್ಹಸ್, ವಂದನೀಯ ಸ್ಟ್ಯಾನಿ ಪಿಂಟೋ, ವಂದನೀಯ ಅಶೋಕ್ ರಾಯನ್ ಕ್ರಾಸ್ತಾ, ವಂದನೀಯ ರೂಪೇಶ್ ತೌರೋ, ವಂದನೀಯ ಮಾಕ್ಸಿಮ್ ಡಿಸೋಜ ಇನ್ನಿತರ 25 ಕ್ಕೂ ಹೆಚ್ಚು ಧರ್ಮಗುರುಗಳು, ಧರ್ಮಭಗಿನಿಯರು ಹಾಗೂ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

ಚರ್ಚ್ ವಠಾರದಲ್ಲಿ ಜಾತ್ರಾ ಸಂತೆಯಲ್ಲಿ ವಿವಿದ ಅಂಗಡಿ ಮುಂಗಟ್ಟುಗಳು, ICYM, YCS ವತಿಯಿಂದ ಆಟೋಟ ಸ್ಪರ್ಧೆಗಳು ನಡೆದವು.

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: 21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿಮರ್ಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ವೈದ್ಯರ ಎಡವಟ್ಟು : ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...