Sunday, April 7, 2024

ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ : ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ಸುಮಾರು 5 ಕೋ.ರೂ. ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಬಂಟ್ವಾಳ ತಾಲೂಕು ರಾಯಿ ಗ್ರಾಮದ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ.19ರಿಂದ ನಡೆಯಲಿರುವ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್ ದೈಲ, ಅರ್ಚಕರಾದ ದಿನೇಶ್ ಭಟ್ ದೈಲ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸದಾನಂದ ಗೌಡ ಮತ್ತಾವು, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ರಾಜೇಶ್ ಶೆಟ್ಟಿ ರಾಯಿ ಶೀತಾಲ, ಅಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಗೌಡ ಕಾರಂಬಡೆ, ಕೋಶಾಧಿಕಾರಿ ಸಮಿತ್ ಶಿವನಗರ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಚೌಟ ಮಡಂದೂರ್ , ಕೋಶಾಧಿಕಾರಿ ಸಂತೋಷ್ ಕುಮಾರ್ ರಾಯಿ ಬೆಟ್ಟು,,ಕಾರ್ಯದರ್ಶಿ ಪ್ರದೀಪ್ ಮಿಯಾಲ್, ಉಪಾಧ್ಯಕ್ಷ ರಾದ ರಾಜೇಶ್ ಗೋವಿಂದ ಬೆಟ್ಟು , ವೇದಿಕೆ ಸಂಚಾಲಕ ದಿನೇಶ್ ಸುವರ್ಣ ರಾಯಿ, ಆಹಾರ ಸಮಿತಿ ಪ್ರಮುಖ್ ಸಂತೋಷ್ ಗೋಳಿತ್ತ ಬೆಟ್ಟು,ಭಜನ ಮಂಡಳಿಯ ಅಧ್ಯಕ್ಷ ರಾಜೇಶ್ ಶಿವನಗರ, ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ವಿಶ್ವನಾಥ ಗೌಡ ಬರೆಬಾಯಿ , ಹೇಮಾ ಎಚ್. ರಾವ್, ಇಂದಿರಾ ಎಂ. ಬಂಗೇರ, ಪ್ರಮುಖರಾದ ಸದಾನಂದ ಶೆಟ್ಟಿ ಮುಡ್ರಾಯಿಬೀಡು, ಶ್ರೀಹರಿ ಭಟ್ ಹೋರಂಗಳ ,ಚಪ್ಪರ ಸಮಿತಿ ಸಂಚಾಲಕ ಪದ್ಮನಾಭ ಗೌಡ ಮಿಯಾಲ್, ಸೋಮಪ್ಪ ಮಡಿವಾಳ, ಹೇಮಚಂದ್ರ ಶೆಟ್ಟಿಗಾರ್, ಉಷಾ ಸಂತೋಷ್, ಪ್ರಶಾಂತ್ ಮಾನಡ್ಕ, ರೋಹಿತ್ ಶಾಂತಿ ಪಲ್ಕೆ, ಮಹಾಬಲ ಗೌಡ ಮೀಯಾಲು,ನಾರಾಯಣ ಗೌಡ ಮಿಯಾಲು, ಹಾಗೂ ಬ್ರಹ್ಮ ಕಲಶೋತ್ಸವ , ಜೀರ್ಣೋದ್ಧಾರ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...