Thursday, April 11, 2024

ಹೊಸ ವರ್ಷಾಚರಣೆ ಪಾರ್ಟಿಯಲ್ಲಿ ಗಲಾಟೆ : ಸ್ನೇಹಿತನ ಮೂಗನ್ನೇ ಕಚ್ಚಿ ತುಂಡರಿಸಿದ ಯುವಕ

ಬೆಳ್ತಂಗಡಿ: ಹೊಸ ವರ್ಷದ ಪಾರ್ಟಿಯಲ್ಲಿ ಯುವಕರ ನಡುವೆ ಗಲಾಟೆಯಾಗಿ ಯುವಕನೊಬ್ಬನ ಮೂಗನ್ನು ಇನ್ನೋರ್ವ ಯುವಕ ಕಚ್ಚಿ ತುಂಡರಿಸಿದ ಘಟನೆ ಪಿಲ್ಯದಲ್ಲಿ ನಡೆದಿದೆ.

ಪಿಲ್ಯ ಗ್ರಾಮದ ಉಲ್ಪೆ ನಿವಾಸಿ ದೀಕ್ಷಿತ್ ಎಂಬವರು ಮೂಗು ತುಂಡರಿಸಲ್ಪಟ್ಟಿದೆ. ಕಚ್ಚಿ ಮೂಗು ತುಂಡರಿಸಿದ ಯುವಕನನ್ನು ರಾಕೇಶ್ ಎಂದು ಗುರುತಿಸಲಾಗಿದೆ.

ಮೂಲತಃ ಮೂಡಿಗೆರೆ ತಾಲೂಕಿನವನಾಗಿರುವ ರಾಕೇಶ್, ಪ್ರಸಕ್ತ ಪಿಲ್ಯ ಗ್ರಾಮದ ಸಂಬಂಧಿಕರ ಮನೆಯಲ್ಲಿ ವಾಸವಿದ್ದು ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ.

ಡಿಸೆಂಬರ್ 31ರ ರಾತ್ರಿ ಹೊಸ ವರ್ಷಾಚರಣೆ ಸಂದರ್ಭ ಮದ್ಯ ಸೇವಿಸಿ ಕ್ಷುಲ್ಲಕ ವಿಚಾರದಲ್ಲಿ ಯುವಕರ ನಡುವೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿದ್ದು, ದೀಕ್ಷಿತ್ ಮೂಗನ್ನು ರಾಕೇಶ್ ಬಲವಾಗಿ ಕಚ್ಚಿ ತುಂಡರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಿಂದ ಗಂಭೀರ ಗಾಯಗೊಂಡ ದೀಕ್ಷಿತ್ ರಿಗೆ ಗುರುವಾಯನಕೆರೆ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ವೇಣೂರು ಪೋಲಿಸರಿಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

More from the blog

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

ಅಕ್ರಮ ಮರಳು ಸಾಗಾಟ: ವಾಹನ ಸಹಿತ ಆರೋಪಿ ಅರೆಸ್ಟ್

ಬೆಳ್ತಂಗಡಿ: ಅಕ್ರಮ ಮರಳು ಸಾಗಾಟದ ಎರಡು ಪಿಕಪ್‌ ವಾಹನ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ವೇಣೂರು ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವೇಣೂರಿನ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳು ಕಳ್ಳತನ ಮಾಡಿ ಸಾಗಾಟ ಮಾಡುತ್ತಿರುವುದಾಗಿ...