Saturday, April 6, 2024

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಉತ್ತರ ಪ್ರದೇಶ ಮೂಲದ 18 ಮಂದಿ ಆರೆಸ್ಟ್

ಬಂಟ್ವಾಳ: ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಕಾರಣಕ್ಕಾಗಿ ಜೈಲು ಶಿಕ್ಷೆ ಅನುಭವಿಸಿ, ಬಿಡುಗಡೆಗೊಂಡ ಉತ್ತರ ಪ್ರದೇಶ ಮೂಲದ ಸುಮಾರು 18 ಮಂದಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಠಾಣಾ ಅ.ಕ್ರ 247/2017 ಕಲಂ 379 & 34 i p c ಮಾನ್ಯ ಎ.ಸಿ.ಜೆ & ಜೆ.ಎಂ.ಎಫ್.ಸಿ ನ್ಯಾಯಾಲಯದ ಸಿ.ಸಿ ನಂಬ್ರ 1266/2018 ರ ಆರೋಪಿತರು ಸುಮಾರು 5 ವರ್ಷಗಳಿಂದ ತಲೆಮರೆಸಿಕೊಂಡಿದ್ದರು.

ಬಲಿಯಾ ಜಿಲ್ಲೆ, ಮತ್ತು ಘಾಜೀಯಾಪುರ ಉತ್ತರಪ್ರದೇಶ ರಾಜ್ಯದ 1] ಪೀಯುಶ್ ಕುಮಾರ್ 2] ವಿನಯ್ ಕುಮಾರ್ , 3] ಬ್ರಿಜಿ ನಾರಾಯಣ 4] ರವೀಂದ್ರ 5] ಕೃಪ ಶಂಕರ್ 6] ವಿವೇಕ್ ರಾಮ್ 7] ಬದ್ಧ ರಾಮ್ 8] ನಂದಿನಿ ರಾಮ್ 9] ಕಿಶೋರ್ ಕುಮಾರ್ 10] ಶಾಮ್ ಬಿಹಾರಿ ರಾಮ್ 11]ಪ್ರೇಮಾಚಂದ ರಾಮ್ 12 ] ಸತೇಂದ್ರ 13] ಭಗವಾನ್ ರಾಮ್14] ಉಮೇಶ್ ರಾಮ್ 15] ರಾಸ್ ಬಿಹಾರಿ ರಾಮ್ 16] ಭಗೀರಥಿ ಚೌಧರಿ 17] ಸುನೀಲ್ ರಾಮ್ 18] ನಂದಿಹಳ ರಾಮ್ ಎಂಬುವರನ್ನು ಪೋಲೀಸರು ಬಂಧಿಸಿದ್ದಾರೆ.
ಪೊಲೀಸ್‌ ನಿರೀಕ್ಷಕರಾದ ಶಿವಕುಮಾರ ಬಿ. ಹಾಗೂ ಪೊಲೀಸ್‌ ಉಪನಿರೀಕ್ಷಕರಾದ ಹರೀಶ್‌ ಎಂ.ಆರ್‌ ರವರ ಮಾರ್ಗದರ್ಶನದಲ್ಲಿ ಉಪನಿರೀಕ್ಷಕ ರಾದ ಮೂರ್ತಿ ಹೆಚ್ ಸಿ ಗಣೇಶ್ ಪ್ರಸಾದ್ ಪಿ.ಸಿ ಯೋಗೇಶ್‌ . ಡಿ.ಎಲ್‌ ವಿಜಯ್‌ ಕುಮಾರ್‌ ಸುರೇಶ್ ಉಪ್ಪಾರ ರವರು ಉತ್ತರ ಪ್ರದೇಶಕ್ಕೆ ತೇರಳಿ ಮಾಹಿತಿ ಸಂಗ್ರಹಿಸಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ ಮಾನ್ಯ ನ್ಯಾಯಾಲಯವು ಸದ್ರಿ ಆರೋಪಿಗಳಿಗೆ ದಂಡ ವಿಧಿಸಿ ಪ್ರಕರಣ ಮುಕ್ತಾಯ ಮಾಡಿದೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...