Thursday, April 11, 2024

300 ಯೂನಿಟ್ ಉಚಿತ ವಿದ್ಯುತ್.. ಈ ಯೋಜನೆ ಪಡೆಯುವುದು ಹೇಗೆ…?

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಬಜೆಟ್ ಅನ್ನು ಮಂಡಿಸಿದರು. ಈ ಬಾರಿಯ ಬಜೆಟ್ ನಲ್ಲಿ ಉಚಿತ ವಿದ್ಯುತ್ ನೀಡುವ ದೊಡ್ಡ ಘೋಷಣೆ ಮಾಡಿದ್ದಾರೆ

ಇಂದಿನ ಬಜೆಟ್ ನಲ್ಲಿ ಹಣಕಾಸು ಸಚಿವೆ ದೇಶದಲ್ಲಿ ಸೌರಶಕ್ತಿಗೆ ಹೆಚ್ಚಿನ ಉತ್ತೇಜನ ನೀಡುವುದಾಗಿ ಹೇಳಿದ್ದಾರೆ. ಇದರೊಂದಿಗೆ ದೇಶದಲ್ಲಿ ದುಬಾರಿ ವಿದ್ಯುತ್ ಸಮಸ್ಯೆ ನೀಗಿಸಲು ಪ್ರಯೋಜನವಾಗಲಿದೆ ಎಂದು ಸಲಹೆಯನ್ನು ನೀಡಿದ್ದಾರೆ.

ಮನೆಯ ಮೇಲ್ಛಾವಣಿಗೆ ಸೌರಶಕ್ತಿ ಬಳಸುವ ಮೂಲಕ ಉಚಿತ ವಿದ್ಯುತ್ ಅನ್ನು ಘೋಷಿಸಿದ ಸಚಿವೆ, ರೂಫ್‌ಟಾಪ್ ಸೋಲಾರ್ ತಂತ್ರಜ್ಞಾನದ ಮೂಲಕ ಒಂದು ಕೋಟಿ ಕುಟುಂಬಗಳು ತಿಂಗಳಿಗೆ 300 ಯುನಿಟ್‌ಗಳವರೆಗೆ ಉಚಿತ ವಿದ್ಯುತ್ ಪಡೆಯಬಹುದು ಅಷ್ಟುಮಾತ್ರವಲ್ಲದೆ ಈ ಯೋಜನೆಯಿಂದ ದೇಶದ ವಿದ್ಯುತ್ ಸಮಸ್ಯೆಯನ್ನು ನಿಭಾಯಿಸಲು ಸಾಕಷ್ಟು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ

ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆಯಡಿಯಲ್ಲಿ ಒಂದು ಕೋಟಿ ಮನೆಗಳಿಗೆ ಮೇಲ್ಛಾವಣಿ ಸೌರ ವಿದ್ಯುತ್ ಅಳವಡಿಸುವ ಕೇಂದ್ರದ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಕಳೆದ ತಿಂಗಳು ಘೋಷಿಸಿದ್ದರು. ಈ ಯೋಜನೆಯ ಉದ್ದೇಶವು ಮೇಲ್ಛಾವಣಿ ಸೌರೀಕರಣದ ಮೂಲಕ ಕಡಿಮೆ ಮತ್ತು ಮಧ್ಯಮ ಆದಾಯದ ವ್ಯಕ್ತಿಗಳಿಗೆ ವಿದ್ಯುತ್ ಅನ್ನು ಒದಗಿಸುವುದು ಮತ್ತು ವಿದ್ಯುತ್ ಉತ್ಪಾದನೆಯ ಮೂಲಕ ಹೆಚ್ಚುವರಿ ಆದಾಯವನ್ನು ಗಳಿಸುವುದಾಗಿದೆ.

 

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಜಿಲ್ಲಾ ಕಾಂಗ್ರೇಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಪದ್ಮನಾಭ ಸೇವಂತ ಅವರದು, ಆತ್ಮಹತ್ಯೆಯಲ್ಲ, ವ್ಯವಸ್ಥಿತ ಕೊಲೆ ಶಂಕೆ: ಪ್ರಕಾಶ್ ಶೆಟ್ಟಿ ತನಿಖೆಗೆ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಪದ್ಮನಾಭ‌ ಸೇವಂತ ಎಂಬವರ ಸಾವಿನ ಸುತ್ತ ಅನುಮಾನಗಳು ವ್ಯಕ್ಯವಾಗಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಪ್ರಕರಣ ಎಂದು ಕಂಡು ಬಂದರೂ ಇದನ್ನು ವಿಮರ್ಶೆ ಮಾಡಿದರೆ ಇದೊಂದು ಕೊಲೆ...