Wednesday, April 17, 2024

ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ‌ ಮನೆಗೆ ಸಚಿವ ಈಶ್ವರ ಬಿ ಖಂಡ್ರೆ ಭೇಟಿ

ಬಂಟ್ವಾಳ: ರಾಜ್ಯದ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಸೋಮವಾರ ರಾತ್ರಿ‌ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ‌ ಅವರನ್ನು ಬಂಟ್ವಾಳದಲ್ಲಿರುವ ಅವರ ಮನೆಯಲ್ಲಿ ಭೇಟಿಯಾಗಿ ಆರೋಗ್ಯವನ್ನು ವಿಚಾರಿಸಿ, ಆರ್ಶೀವಾದ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಜನಾರ್ದನ ಪೂಜಾರಿಯವರು ಕಾಂಗ್ರೆಸ್ ಪಕ್ಷ ಕುಟುಂಬವಿದ್ದಂತೆ ಉತ್ತಮವಾಗಿ ಕೆಲಸ ಮಾಡಿ ಪಕ್ಷ ಮತ್ತು ಸರಕಾರಕ್ಕೆ ಒಳ್ಳೆ ಹೆಸರು ತರುವಂತೆ ಸಲಹೆ‌ನೀಡಿದರು.

ಸಚಿವ ಖಂಡ್ರೆ ಅವರ ತಂದೆ,ಮಾಜಿ ಸಚಿವ ಭೀಮಣ್ಣ ಖಂಡ್ರೆಯವರ ಒಡನಾಟವನ್ನು‌ ಸ್ಮರಿಸಿದ ಪೂಜಾರಿಯವರು ಹೈಕೋಟ್ ೯ ನ್ಯಾಯಾಧೀಶರಾಗಿದ್ದ ಅವರ ಭಾವನ ಬಗ್ಗೆಯು ಸಚಿವರಲ್ಲಿ ವಿಚಾರಿಸಿದರು.

ಪೂಜಾರಿಯವರು ಕೆಪಿಸಿಸಿ ಅಧ್ಯಕ್ಷರಾಗಿದ್ದ ಕಾಲದಲ್ಲಿ ಪಕ್ಷದಿಂದ ಮಾದಲಬಾರಿಗೆ ಸ್ಪರ್ಧಿಸಲು ಭಿ ಫಾರಂ ನೀಡಿ ಅವಕಾಶ ನೀಡಿರುವುದನ್ನು ಸಚಿವ ಖಂಡ್ರೆ ಅವರು ಪೂಜಾರಿಯವರ ಗಮನಕ್ಕೆ ತಂದರು.

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿಕುಂದರ್,ಕಾಂಗ್ರೆಸ್ ಸೇವಾದಳದ ಮುಖಂಡ ವೆಂಕಪ್ಪ ಪೂಜಾರಿ ಅವರು ಬಂಟ್ವಾಳ ಮತ್ತು ಪಾಣೆಮಂಗಳೂರು‌ಬ್ಲಾಕ್ ಕಾಂಗ್ರೆಸ್ ಹಾಗೂ ಮಾಜಿ ಸಚಿವ ರಮಾನಾಥ ರೈ ಅವರ ಪರವಾಗಿ‌ಸಚಿವ ಖಂಡ್ರೆ ಅವರನ್ನು ಸ್ವಾಗತಿಸಿದರು.ಬೆಳ್ತಂಗಡಿ‌ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಮ್,ಸಚಿವ ಖಂಡ್ರೆ ಅವರ ಪುತ್ರಸಾಗರ್ ಖಂಡ್ರೆ,ಂಮಗಳೂರು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕರಿಕಲನ್,ಕರ್ನಾಟಕ ಗೇರು ಅಭಿವೃದ್ಧಿ‌ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಕಮಲಾ‌ಕರಿಕಲನ್,ಉಪ ಸಂರಕ್ಷಣಾಧಿಕಾರಿ ಅಂತೋನಿ ಮರಿಯಪ್ಪ,ಎಸಿಎಫ್ ಪಿ. ಶ್ರೀಧರ,ಬಂಟ್ವಾಳ ವಲಯ ಅರಣ್ಯಾಧಿಕಾರಿ ಪ್ರಫಲ್ ರೈ ಮೊದಲಾದವರಿದ್ದರು.

More from the blog

ಏ.21 ರಂದು ಆದಿದ್ರಾವಿಡ ಸಮಾಜ ಬಾಂಧವರ ಕ್ರೀಡಾಕೂಟ ಹಾಗೂ ಸಾಧಕರಿಗೆ ಸನ್ಮಾನ

ಬಂಟ್ವಾಳ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘ(ರಿ.)S74 ಇದರ ವತಿಯಿಂದ ವಿಶ್ವಜ್ಞಾನಿ ಡಾ| ಬಿ. ಆರ್ ಅಂಬೇಡ್ಕರ್ ರವರ 133ನೇ ಜನ್ಮ ದಿನಾಚರಣೆಯ ಅಂಗವಾಗಿ ಸಂಘದ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಆದಿದ್ರಾವಿಡ ಸಮಾಜ...

ಎಸ್.ಎಸ್.ಎಲ್.ಸಿ ಮೌಲ್ಯಮಾಪನ : ನಿಷೇಧಾಜ್ಞೆ ಜಾರಿ

ಮಂಗಳೂರು: ಮಂಗಳೂರಿನ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಏಪ್ರಿಲ್ 15ರಿಂದ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ನಡೆಯಲಿದ್ದು, ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನುಬಾಹಿರ...

ಲೋಕಸಭಾ ಚುನಾವಣೆ : ಬಂಟ್ವಾಳದ ಕಳ್ಳಿಗೆ ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...

ಬಂಟ್ವಾಳದ ನರಿಕೊಂಬು ಗ್ರಾಮದಲ್ಲಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

2024 ರ ಎ. 26 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವ ನಿಟ್ಟಿನಲ್ಲಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಎಂಬ...