Sunday, April 21, 2024

ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಖೋ-ಖೋ ಚಾಂಪಿಯನ್‌ಶಿಪ್‌ : ಮಂಗಳೂರು ವಿವಿ ಯ ಪುರುಷರ ಖೋ-ಖೋ ತಂಡ ತೃತೀಯ

ಕೇರಳದ ಕ್ಯಾಲಿಕಟ್ ವಿಶ್ವವಿದ್ಯಾನಿಲಯದಲ್ಲಿ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಖೋ-ಖೋ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಪುರುಷರ ಖೋ-ಖೋ ತಂಡವು 3 ನೇ ಸ್ಥಾನವನ್ನು ಪಡೆದುಕೊಂಡಿದೆ.

ಅಖಿಲ ಭಾರತ ಅಂತರ್ ವಿವಿ ಗಳ ಕ್ರೀಡಾ ಕೂಟವು ಕ್ಯಾಲಿಕಟ್ ವಿಶ್ವ ವಿದ್ಯಾನಿಯಲದಲ್ಲಿ ನಡೆಯಿತು. ಪುರುಷರ ಖೋ-ಖೋ ಪಂದ್ಯಾವಳಿಯಲ್ಲಿ ಮಂಗಳೂರು ವಿಶ್ವ ವಿದ್ಯಾಲಯವು ತೃತೀಯ ಸ್ಥಾನ ಪಡೆದಿದೆ. ಇದರಲ್ಲಿ ಪ್ರತಿನಿಧಿಸಿದ ವಾಮದಪದವು ಕಾಲೇಜಿನ ಪದವಿ ವಿದ್ಯಾರ್ಥಿ ಸುಹಾಸ್  ಇವರು ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಆಶಾ ಕಾರ್ಯಕರ್ತೆ ಪ್ರಮೀಳಾ, ನಾರಾಯಣ ಸುವರ್ಣ ರವರ ಸುಪುತ್ರರಾಗಿದ್ದಾರೆ.

 

More from the blog

ಕಾಂಗ್ರೇಸ್ ಸರಕಾರದ ಆಡಳಿತದಲ್ಲಿ ಹೆಣ್ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ.ವಿಜಯೇಂದ್ರ

ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಯಾಗಿ ಒಟ್ಟು 28 ಸ್ಥಾನದಲ್ಲಿದಲ್ಲಿ ಗೆಲುವು ಸಾಧಿಸುವುದು ನಿಶ್ವಿತ,ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಅವರು ಬಿಸಿರೋಡಿನ ಗಾಣದಪಡ್ಪು ಬ್ರಹ್ಮ ಶ್ರೀ ನಾರಾಯಣ ಗುರು...

ಟ್ಯಾಂಕರ್ ಹರಿದು ಪಾದಚಾರಿ ಸ್ಥಳದಲ್ಲೇ ಸಾವು

ಮಂಗಳೂರು: ಟ್ಯಾಂಕರ್ ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಕೂಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್ ಎನ್ನಲಾಗಿದೆ ಯಾದವ್ ರಸ್ತೆ ಬದಿ‌ ನಡೆದುಕೊಂಡು...

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ರಸ್ತೆ ಸಂಚಾರದಲ್ಲಿ ಬದಲಾವಣೆ

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಸಾರ್ವಜನಿಕರ ಹಿತ ಹಾಗೂ ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಎ.19 ಮತ್ತು 20ರಂದು ಕಟೀಲು ಪರಿಸರದಲ್ಲಿ ವಾಹನ ಸಂಚಾರದಲ್ಲಿ...

ಜಿಲ್ಲೆಯಲ್ಲಿ ಜೆ.ಡಿ.ಎಸ್.ಪಕ್ಷ ನಿಷ್ಕ್ರಿಯವಾಗಲು ಕಾರಣರಾದ ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡರು ರಾಜೀನಾಮೆ ನೀಡುವಂತೆ ಒತ್ತಾಯ

ಜೆ.ಡಿ.ಎಸ್.ಪಕ್ಷ ಜಿಲ್ಲೆಯಲ್ಲಿ ನಿಷ್ಕ್ರಿಯವಾಗಲು ಜೆ.ಡಿ.ಎಸ್.ಜಿಲ್ಲಾಧ್ಯಕ್ಷ ಮಾದವ ಗೌಡ ಅವರೇ ಕಾರಣರಾಗಿದ್ದು, ನೈತಿಕ ಹೊಣೆ ಹೊತ್ತು ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಮುಖಂಡ ಅಬುಬಕ್ಕರ್ ಅಮ್ಮಂಜೆ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಅಧ್ಯಕ್ಷ...