Tuesday, April 9, 2024

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಮದುವೆಯಾಗಿ ಪತ್ತೆ

ಮೂಡುಬಿದಿರೆ: ಮೂಡುಬಿದಿರೆಯಿಂದ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಕೇರಳದಲ್ಲಿ ಮದುವೆಯಾಗಿ ಪತ್ತೆಯಾಗಿದ್ದಾಳೆ.

ಮೂಡುಬಿದಿರೆಯ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಪ್ರಥಮ ವರ್ಷದ ಬಿಪಿಟಿ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿನಿ ಆದಿರಾ ಶುಕ್ರವಾರ ನಾಪತ್ತೆಯಾಗಿದ್ದರು. ಇದೀಗ ಕೇರಳದಲ್ಲಿ ಮದುವೆಯಾಗಿ ಪತ್ತೆಯಾಗಿದ್ದಾರೆ.

ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರಾ ಶುಕ್ರವಾರ ಬೆಳಗ್ಗೆ ಸಹಪಾಠಿಗಳ ಜತೆ ಸ್ವರಾಜ್ಯ ಮೈದಾನದಲ್ಲಿರುವ ಕಾಲೇಜಿಗೆ ವಿದ್ಯಾಸಂಸ್ಥೆಯ ಬಸ್‌ನಲ್ಲಿ ಬಂದು ಕನ್ನಡ ಭವನದ ಬಳಿ ಇಳಿದಿದ್ದರು. ಬಳಿಕ ಕಾಲೇಜಿಗೆ ಹೋಗದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಆಕೆಯ ಹೆತ್ತವರು ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದರು.

ಈಕೆ ಹಾಸ್ಟೆಲ್‌ನಲ್ಲಿ ವಾಸವಾಗಿ ಶಿಕ್ಷಣ ಪಡೆಯುತ್ತಿದ್ದರು. ಇದೀಗ ಬೈಂದೂರಿನ ನಿವಾಸಿಯಾಗಿರುವ ಪ್ರಿಯಕರನನ್ನು ಮದುವೆಯಾಗಿ ಪತ್ತೆಯಾಗಿದ್ದಾರೆ.

More from the blog

300 ರೂ. ಗಡಿಯತ್ತ ಹಸಿ ಕೊಕ್ಕೊ… 900 ರೂ. ಗಡಿಯತ್ತ ಒಣ ಕೊಕ್ಕೊ

ಪುತ್ತೂರು: ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹಸಿ ಕೊಕ್ಕೊ, ಒಣ ಕೊಕ್ಕೊ ಧಾರಣೆ ಮತ್ತಷ್ಟು ಜಿಗಿದಿದ್ದು, ಹೊರ ಮಾರುಕಟ್ಟೆಯಲ್ಲಿಯೂ ಅತ್ಯಧಿಕ ದರ ದಾಖಲಾಗಿದೆ. ಒಣ ಕೊಕ್ಕೊ 900 ರೂ. ಗಡಿಯತ್ತ, ಹಸಿ ಕೊಕ್ಕೊ 300 ರೂ....

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಏಪ್ರಿಲ್ 14ರಂದು ಮಂಗಳೂರಿಗೆ ಪ್ರಧಾನಿ ಮೋದಿ

ಬೆಂಗಳೂರು: ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಮಾವೇಶ ಚಿಕ್ಕಬಳ್ಳಾಪುರದಿಂದ ಮಂಗಳೂರಿಗೆ ಸ್ಥಳಾಂತರಗೊಂಡಿದ್ದು, ಅದರಂತೆ, ಏಪ್ರಿಲ್ 14 ರಂದು ದ.ಕ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಮಾವೇಶ ನಡೆಯಲಿದೆ.. ಏಪ್ರಿಲ್ 14ಕ್ಕೆ ಬೆಂಗಳೂರಿಗೆ ಆಗಮಿಸಲಿರುವ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...