Sunday, April 14, 2024

ಪಶ್ಚಿಮ ವಲಯ ನೂತನ ಡಿಐಜಿಪಿಯಾಗಿ ಡಾ| ಎಂ.ಬಿ. ಬೋರಲಿಂಗಯ್ಯ ನೇಮಕ

ಮಂಗಳೂರು: ಪಶ್ಚಿಮ ವಲಯ ಡಿಐಜಿಪಿ ಯಾಗಿದ್ದ ಅಮಿತ್‌ ಸಿಂಗ್ ಅವರಿಗೆ ವರ್ಗಾವಣೆ ಆಗಿದ್ದು, ಅವರ ಜಾಗಕ್ಕೆ ದಕ್ಷಿಣ ವಲಯ ಡಿಐಜಿಪಿಯಾಗಿದ್ದ ಡಾ| ಎಂ.ಬಿ.ಬೋರಲಿಂಗಯ್ಯ ಅವರನ್ನು ನಿಯುಕ್ತಿಗೊಳಿಸಿ ಸರಕಾರ ಆದೇಶಿದೆ.

ಅಮಿತ್‌ ಸಿಂಗ್‌ ಅವರನ್ನು ದಕ್ಷಿಣ ವಲಯ ಡಿಐಜಿಪಿಯಾಗಿ ಮೈಸೂರಿಗೆ ವರ್ಗಾಯಿಸಲಾಗಿದೆ.

ಡಾ| ಬೋರಲಿಂಗಯ್ಯ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಮಲ್ಲನಾಯಕನ ಹಳ್ಳಿಯವರಾಗಿದ್ದು, 2008ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿ. ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್‌ ಪದವಿ ಪಡೆದವರು. ಐಪಿಎಸ್‌ಗೆ ಆಯ್ಕೆಯಾದ ಬಳಿಕ ಕಲಬುರಗಿಯ ಪೊಲೀಸ್‌ ತರಬೇತಿ ಶಾಲೆಯಲ್ಲಿ ಫೌಂಡೇಶನ್‌ ತರಬೇತಿ ಪಡೆದು ತಿಪಟೂರಿನಲ್ಲಿ ಸಹಾಯಕ ಎಸ್‌ಪಿಯಾಗಿ, ಬಳಿಕ ದಾವಣಗೆರೆ, ಉಡುಪಿಯಲ್ಲಿ ಎಸ್ಪಿಯಾಗಿ, ಬೆಂಗಳೂರಿನಲ್ಲಿ ಡಿಸಿಪಿಯಾಗಿ ರಾಜ್ಯ ಗುಪ್ತಚರ ಮತ್ತು ರೈಲ್ವೇ ಪೊಲೀಸ್‌ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದಾರೆ.

More from the blog

ಪ್ರಧಾನಿ ಮೋದಿ ರೋಡ್ ಶೋ ಸಮಯ ಬದಲಾವಣೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಸಮಯದಲ್ಲಿ ಬದಲಾವಣೆಯಾಗಿದ್ದು, ಏ.14ರಂದು ಸಂಜೆ 7.45ಕ್ಕೆ ರೋಡ್ ಶೋ ಆರಂಭವಾಗಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಚುನಾವಣಾ ಸಂಚಾಲಕ ವಿ. ಸುನಿಲ್ ಕುಮಾರ್...

ಕುಮಾರಧಾರಾ ನದಿಯಲ್ಲಿ ಮೊಸಳೆ ಮೃತದೇಹ ಪತ್ತೆ

ಸುಬ್ರಹ್ಮಣ್ಯ: ಕುಮಾರಧಾರಾ ನದಿಯ ಪಂಜ – ಕಡಬ ಸಂಪರ್ಕ ರಸ್ತೆಯಲ್ಲಿ ಸಿಗುವ ಪುಳಿಕುಕ್ಕು ಸೇತುವೆಯ ಕೆಳಭಾಗದಲ್ಲಿ ಮೊಸಳೆಯ ಮೃತದೇಹ ಪತ್ತೆಯಾಗಿದೆ. ಶುಕ್ರವಾರ ನದಿಯ ಒಂದು ಬದಿಯ ನೀರಿನಲ್ಲಿ ಅಂದಾಜು 1.5 – 2 ವರ್ಷದ ಮೊಸಳೆಯ...

ನಾಳೆ ಮಂಗಳೂರಿಗೆ ಪ್ರಧಾನಿ ಮೋದಿ : ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿರವರು ಏಪ್ರಿಲ್ 14 ರಂದು ಮಂಗಳೂರಿನ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್‌ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಮಂತ್ರಿಗಳ ಭದ್ರತೆಯ ದೃಷ್ಟಿಯಿಂದ ಹಾಗೂ ಸಂಚಾರ ಸುವ್ಯವಸ್ಥೆಗೆ...

ಎಳನೀರು ಸೇವಿಸಿ 136 ಮಂದಿ ಅಸ್ವಸ್ಥ ಪ್ರಕರಣ : ಬೊಂಡ ಫ್ಯಾಕ್ಟರಿ ಬಂದ್‌ ಗೆ ಆದೇಶ

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬೊಂಡ ಫ್ಯಾಕ್ಟರಿಯ ಬೊಂಡ ನೀರು ಸೇವಿಸಿ ನೂರಾರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಬೊಂಡ ಫ್ಯಾಕ್ಟರಿಗೆ ಬೀಗ ಜಡಿದಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ...