Friday, April 5, 2024

ಇಂದು ಪ್ರಥಮ ಪಿಯು ಫ‌ಲಿತಾಂಶ ಪ್ರಕಟ : ರಿಸಲ್ಟ್ ನೋಡುವುದು ಹೇಗೆ…ಇಲ್ಲಿದೆ ವಿವರ

ಬೆಂಗಳೂರು: ಕರ್ನಾಟಕ ಪ್ರಥಮ ಪಿಯುಸಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಪ್ರಕಟಿಸಲಿದೆ.

ಪ್ರಥಮ ಪಿಯುಸಿ ಪರೀಕ್ಷೆ ಬರೆದವರು ತಮ್ಮ ಫಲಿತಾಂಶವನ್ನು karresults.nic.in ಎಂಬ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು.

ಅನುತ್ತೀರ್ಣಗೊಳ್ಳುವ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಪರೀಕ್ಷೆ ಮೇ 20ರಿಂದ ಮೇ 31ರ ವರೆಗೆ ನಡೆಯಲಿದ್ದು, ನೋಂದಾಯಿಸಿಕೊಳ್ಳಲು ಎ. 20 ಕೊನೆಯ ದಿನವಾಗಿದೆ.

ಫಲಿತಾಂಶ ಪರಿಶೀಲಿಸುವುದು ಹೀಗೆ

  1. ಪ್ರಥಮ ಪಿಯುಸಿ ಪರೀಕ್ಷೆ ಬರೆದವರು ಮೊದಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಲಿಯ ಅಧಿಕೃತ ಫಲಿತಾಂಶ ವೆಬ್‌ಸೈಟ್‌ karresults.nic.in ಗೆ ಹೋಗಬೇಕು.
  2. ಕರ್ನಾಟಕ ಫಲಿತಾಂಶಗಳ ವೆಬ್‌ಸೈಟ್‌ನ ಹೋಮ್‌ಪೇಜ್‌ನಲ್ಲಿ ಕರ್ನಾಟಕ ಪ್ರಥಮ ಪಿಯುಸಿ ಫಲಿತಾಂಶ (Karnataka 1st PUC result)ದ ಲಿಂಕ್ ಕ್ಲಿಕ್ ಮಾಡಬೇಕು.
  3. ಆ ಲಿಂಕ್ ಕ್ಲಿಕ್ ಮಾಡಿದ ಕೂಡಲೇ ರಿಜಿಸ್ಟರ್ ನಂಬರ್/ ರೋಲ್ ನಂಬರ್ ಕೇಳುತ್ತದೆ. ಅದನ್ನು ಟೈಪ್ ಮಾಡಿ, ಸಬ್‌ಮಿಟ್‌ ಬಟನ್ ಕ್ಲಿಕ್ ಮಾಡಿದರೆ ಸಾಕು.
  4. ಸ್ಕ್ರೀನ್ ಮೇಲೆ ಫಲಿತಾಂಶ ಕಾಣಿಸಿಕೊಳ್ಳುತ್ತದೆ.
  5. ಅದನ್ನು ಡೌನ್‌ಲೋಡ್ ಮಾಡಿ ಸೇವ್ ಮಾಡಿಟ್ಟುಕೊಳ್ಳಬಹುದು. ಪ್ರಿಂಟ್ ಔಟ್ ತೆಗೆದಿಟ್ಟುಕೊಂಡರೆ ಭವಿಷ್ಯದ ಅಗತ್ಯಗಳಿಗೆ ಬಳಸಬಹುದು.

More from the blog

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ...

ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನ ಜಖಂಗೊಳಿಸಿದ ಭಕ್ತರು

ಮುಲ್ಕಿ: ದೇವರ ರಥ ಹೋಗುವ ದಾರಿಯಲ್ಲಿದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ಇತ್ತೀಚೆಗೆ ನಡೆದಿದ್ದು, ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ. ಜಾತ್ರೆಯಲ್ಲಿ ದೇವರ ರಥ ಹೋಗುವ...

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಅರ್.ಪೂಜಾರಿ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮುಂಭಾಗದಿಂದ ಎ.ಬಿ.ಶೆಟ್ಟಿ ಸರ್ಕಲ್ ವರೆಗೆ...

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಚುನಾವಣಾ ಸಿಬ್ಬಂದಿ

ಮಂಗಳೂರು: ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ  ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ನಡೆದಿದೆ. ಕೂಡಲೇ ಅವರನ್ನು ನಗರ್ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ...