Friday, April 5, 2024

ಲಾರಿ ಮತ್ತು ಬಸ್ ನಡುವೆ ಅಪಘಾತ: ಲಾರಿ ಚಾಲಕನಿಗೆ ಗಾಯ, ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯವಿಲ್ಲದೆ ಪಾರಾದ ಬಸ್ ಪ್ರಯಾಣಿಕರು

ಚಿತ್ರಗಳು: ವಿಕೇಶ್ ಬಂಟ್ವಾಳ

ಬಂಟ್ವಾಳ: ಕಂಟೇನರ್ ಲಾರಿ ಮತ್ತು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಬಂಟ್ವಾಳ ವೈದ್ಯನಾಥ ದೇವಸ್ಥಾನದ ಮುಂಭಾಗ ಕಾಲೇಜು ರಸ್ತೆಯಲ್ಲಿ ನಡೆದಿದೆ.


ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕನ್ನು ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದೆ.ಉಳಿದಂತೆ ಖಾಸಗಿ ಬಸ್ ನಲ್ಲಿದ್ದ ಅನೇಕ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಲಾರಿ ಚಾಲಕ ಸಹಿತ ಬಸ್ ನಲ್ಲಿ ಗಾಯಗೊಂಡ ವ್ಯಕ್ತಿಗಳ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.
ಬಿಸಿರೋಡಿನಿಂದ ಮೂಡಬಿದಿರೆಯ ಕಡೆಗೆ ಹೋಗುತ್ತಿದ್ದ ಕಂಟೇನರ್ ಹಾಗೂ ಮೂಡಬಿದಿರೆಯಿಂದ ಬಂಟ್ವಾಳಕ್ಕೆ ಬರುತ್ತಿದ್ದ ಖಾಸಗಿ ಬಸ್ ನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಬಸ್ ನಲ್ಲಿ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳ ಸಹಿತ ಅನೇಕ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.
ಅಪಘಾತ ಸಂಭವಿಸಿದ ರಸ್ತೆಯ ಎದುರು ಭಾಗದಲ್ಲಿ ದೊಡ್ಡ ಪ್ರಪಾತವಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಬಸ್ ನ್ನು ಅಲ್ಲೇ ನಿಲ್ಲಿಸಿದ ಪರಿಣಾಮ ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿದ್ದಾರೆ

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...