Saturday, April 6, 2024

ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಚುನಾವಣಾ ಪ್ರಚಾರ ಸಭೆ ಹಾಗೂ ಕಾವಳಪಡೂರು ಮಹಾಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಚುನಾವಣಾ ಪ್ರಚಾರ ಸಭೆ ಹಾಗೂ ಕಾವಳಪಡೂರು ಮಹಾಶಕ್ತಿಕೇಂದ್ರದ ಕಾರ್ಯಕರ್ತರ ಸಭೆ ಶಿವಾನಂದ ಪೂಜಾರಿ ಮಾವಿನಕಟ್ಟೆ ಅವರ ಮನೆಯಲ್ಲಿ ನಡೆಯಿತು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾತನಾಡಿ, ಬಿಜೆಪಿ ಅಭ್ಯರ್ಥಿ ಘೋಷಣೆಯಾದ ಕೂಡಲೇ ಬಿಜೆಪಿಯ ಗೆಲುವು ನಿಶ್ಚಿತವಾಗಿದೆ, ಆದರೆ ಕಾರ್ಯಕರ್ತರು ಒಂದಾಗಿ ಗೆಲುವಿನ ಅಂತರವನ್ನು ಜಾಸ್ತಿ ಮಾಡುವಲ್ಲಿ ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದು ಅವರು ತಿಳಿಸಿದರು.

ಅಭ್ಯರ್ಥಿ ಬ್ರಿಜೇಶ್ ಚೌಟ ಮಾತನಾಡಿ,
ಸೈನ್ಯದಲ್ಲಿ ಸೇವೆ ಸಲ್ಲಿಸಿ ಊರಿಗೆ ವಾಪಾಸು ಆದ ಬಳಿಕ ಪಕ್ಷ ನಿರಂತರವಾಗಿ ಅನೇಕ ಜವಾಬ್ದಾರಿಗಳನ್ನು ನೀಡಿ ನನ್ನನ್ನು ಬೆಳೆಸಿದೆ. ಇಂತಹ ಅವಕಾಶ ಕೇವಲ ಬಿಜೆಪಿ ಪಕ್ಷದಲ್ಲಿ ಮಾತ್ರ ಸಿಗಲು ಸಾಧ್ಯವಾಗಿದೆ, ಇದು ನನ್ನಪೂರ್ವ ಜನ್ಮದ ಪುಣ್ಯವಾಗಿದ್ದು,ನಿಮ್ಮೆಲ್ಲರ ಪ್ರೀತಿ ಆಶ್ರೀರ್ವಾದದಿಂದ ಮಾತ್ರ ಸಾಧ್ಯವಾಗಿದೆ.
ಹಿರಿಯರು ನನ್ನ ಮೇಲೆ ನಂಬಿಕೆಯಿಟ್ಟು ನೀಡಿದ ಜವಾಬ್ದಾರಿಯನ್ನು ನಿರ್ವಹಣೆ ಮಾಡುವ ಶಕ್ತಿ ದೇವರು ನೀಡಲಿ, ನಿಮ್ಮೆಲ್ಲರ ಪ್ರೀತಿ ವಿಶ್ವಾಸವನ್ನು ಉಳಿಸಿಕೊಂಡು ಗೌರವ ತರುವ ಕಾರ್ಯ ಮಾಡುತ್ತೇನೆ ಎಂದು ತಿಳಿಸಿದರು.

ಸಂಘಟನೆಯ ಆಧಾರದಲ್ಲಿ ಬೆಳೆದ ಪಕ್ಷವನ್ನು ಇನ್ನಷ್ಟು ಶಕ್ತಿಯುತವಾಗಿ ಬೆಳೆಸುತ್ತೇನೆ ಎಂದು ಭರವಸೆ ನೀಡಿದರು.
ಪ್ರಧಾನಿ ನರೇಂದ್ರಮೋದಿಯವರ ಆಡಳಿತದ ಅವಧಿಯಲ್ಲಿ ಅನೇಕ ಜನಪರವಾದ ಯೋಜನೆಯ ಅನುಷ್ಠಾನವಾಗಿದ್ದು, ಯೋಜನೆಯ ಫಲಾನುಭವಿಗಳ ಜೊತೆ ಕಾರ್ಯಕರ್ತರು ಸಂವಾದ ನಡೆಸುವ ಕಾರ್ಯ ಆಗಬೇಕು ಎಂದು ತಿಳಿಸಿದರು.

ಎಲ್ಲರ ಅಭಿಪ್ರಾಯ ಪಡೆದು, ಎಲ್ಲರ ಸಲಹೆ ಪಡೆದು,ಪಕ್ಷವನ್ನು ಸಂಘಟನಾತ್ಮಕ ಶಕ್ತಿ ನೀಡುವ ಮತ್ತು ಪ್ರಾಮಾಣಿಕವಾಗಿ ಅಭಿವೃದ್ಧಿಯನ್ನು ಮಾಡುತ್ತೇನೆ. ಕಾರ್ಯಕರ್ತರ ಶಕ್ತಿಯನ್ನು ನಂಬಿರುವ ನಾನು ಅವರ ಭಾವನೆಗಳಿಗೆ ಸದಾ ಸ್ಪಂದಿಸುವ ಭರವಸೆ ನೀಡುತ್ತೇನೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್,ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಾಜಿ ಶಾಸಕ ಎ.ರುಕ್ಮಯ ಪೂಜಾರಿ,ಬಿಜೆಪಿ ಪ್ರಮುಖರಾದ ದೇವಪ್ಪ ಪೂಜಾರಿ, ಸುಲೋಚನ ಜಿ.ಕೆ.ಭಟ್, ಪೂಜಾ ಪೈ,ಜಗದೀಶ್ ಶೇಣವ, ದಿನೇಶ್ ಅಮ್ಟೂರು, ಸಂದೇಶ್ ಶೆಟ್ಟಿ, ವಿಕಾಶ್ ಪುತ್ತೂರು, ದೇವದಾಸ್ ಶೆಟ್ಟಿ,ದೇವಪ್ಪ ಪೂಜಾರಿ, ಪ್ರಭಾಕರ್ ಪ್ರಭು, ರಾಮ್ ದಾಸ್ ಬಂಟ್ವಾಳ,ಮೋನಪ್ಪ ದೇವಸ್ಯ, ಶೇಖರ್ ಶೆಟ್ಟಿ, ಸಂತೋಷ್ ಕುಮಾರ್ ರಾಯಿ ಬೆಟ್ಟು,ರಾಜೀವಿ,ದಿನೇಶ್ ಅಮ್ಟೂರು, ಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕರ್ಕಳ, ರಮನಾಥ ರಾಯಿ ಮತ್ತಿತರರು ಉಪಸ್ಥಿತರಿದ್ದರು.

ಪುರುಷೋತ್ತಮ ಶೆಟ್ಟಿ ವಾಮದಪದವು ಸ್ವಾಗತಿಸಿದರು.
ಬೆಳಿಗ್ಗೆ ಆರಂಭದಲ್ಲಿ ಸಿದ್ದಕಟ್ಟೆ ಸಂಗಬೆಟ್ಟು ವೀರಭದ್ರ,ಮಹಮ್ಮಾಯಿ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದ ಬಳಿಕ ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದರು.

More from the blog

ಮತದಾನ ಜಾಗೃತಿ ಅಂಗವಾಗಿ ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ

ಮತದಾರರರಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಎ‌.5ರಂದು ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ...

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖರ ಮನೆಗೆ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ: ರಾಷ್ಟ್ರದ ಹಿತಾಸಕ್ತಿಯ ದೃಷ್ಟಿಯಿಂದ, ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು, ಈ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಗೆಲುವು ಸಾಧಿಸಬೇಕಾಗಿದೆ ಎಂದು ಮಂಗಳೂರು ಲೋಕಸಭಾ ಅಭ್ಯರ್ಥಿ ಬ್ರಿಜೇಶ್...

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಇಬ್ಬರು ಗಂಭೀರ

ಬಂಟ್ವಾಳ: ಮುಂಜಾನೆ ವೇಳೆ ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಕೈಕಂಬ ಎಂಬಲ್ಲಿ ಬೈಕ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಹಾಗೂ ಸಹಸವಾರ ಇಬ್ಬರು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...