ಬೆಳ್ತಂಗಡಿ: ಹಳೇಕೋಟೆ ಬಳಿ ದ್ವಿಚಕ್ರ ವಾಹನ ಹಾಗೂ ಪಿಕಪ್ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತಪಟ್ಟಿದ್ದಾನೆ.
ಗುರುವಾಯನಕೆರೆ ಕಡೆಯಿಂದ ಬೆಳ್ತಂಗಡಿಯತ್ತ ಹೋಗುತಿದ್ದ ದ್ವಿಚಕ್ರ ವಾಹನಕ್ಕೆ ಎದುರಿನಿಂದ ಬರುತಿದ್ದ ಪಿಕಪ್ ವಾಹನ ಢಿಕ್ಕಿ ಹೊಡೆದಿತ್ತು. ಢಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಮಗುಚಿ ಬಿದ್ದು ಸವಾರರಿಬ್ಬರೂ ರಸ್ತೆಗೆಸೆಯಲ್ಪಟ್ಟು, ದ್ವಿಚಕ್ರ ವಾಹನ ಸವಾರ ಪುರುಷೋತ್ತಮ ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಘಟನೆಯಲ್ಲಿ ಸಹಸವಾರ ತೌಫೀಕ್ ಗಂಭೀರ ಗಾಯಗೊಂಡು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಆದ್ರೆ ಗಂಭೀರ ಗಾಯಗೊಂಡಿದ್ದ ಲಾಯಿಲ ಗ್ರಾಮದ ರಾಘವೇಂದ್ರ ನಗರದ ತೌಶೀಫ್ ಅವರ ಮಗ ತೌಫೀಕ್ ಮಂಗಳವಾರ ಕೊನೆಯುಸಿರೆಳೆದಿದ್ದಾರೆ.